ಕಾರ್ಕಳ ಅತ್ತೂರಿನಲ್ಲಿ ಬಸಿಲಿಕ ಮಹೋತ್ಸವದ ವೈಭವ, ಎಲ್ಲಡೆ ಭಕ್ತಿ ಭಾವ ಸಂಭ್ರಮದ ಕಲರವ

ಕಾರ್ಕಳ: ಪ್ರಸಿದ್ಧ ಕ್ಷೇತ್ರವಾದ ಅತ್ತೂರಿನ ಸಂತ ಲಾರೆನ್ಸರ ನೆಲೆಬೀಡಾದ ಅತ್ತೂರಿನಲ್ಲಿ ಕಳೆದ ಜನವರಿ 26 ರಿಂದ ಆರಂಭಗೊಂಡ ಬೆಸಿಲಿಕಾ ಮಹೋತ್ಸವಕ್ಕೆ ನಾಡಿನ ಮೂಲೆ ಮೂಲೆಗಳಿಂದ ಮಾತ್ರವಲ್ಲ, ವಿದೇಶಗಳಲ್ಲಿ ನೆಲೆಸಿರುವ ಭಕ್ತರೂ ಕೂಡ ಮಹೋತ್ಸವದಲ್ಲಿ ಪಾಲ್ಗೊಂಡು ಸಂತ ಲಾರೆನ್ಸರ ದಿವ್ಯ ಆಶೀರ್ವಾದಕ್ಕೆ ಪಾತ್ರರಾದರು. ಅತ್ತೂರು ಕ್ಷೇತ್ರದಲ್ಲಿ ಪ್ರತಿದಿನವೂ ವಿಶೇಷ ಪೂಜೆ, ಕೊಂಕಣಿ ಭಾಷೆಯಲ್ಲಿ 31 ಹಾಗೂ ಕನ್ನಡ ಭಾಷೆಯಲ್ಲಿ 7 ಹೀಗೆ ಒಟ್ಟು 38 ದಿವ್ಯಪೂಜೆಗಳು ನಡೆದವು. ಇಂದು ಜನವರಿ 30 ಬಸಿಲಿಕ ಮಹೋತ್ಸವದ ಕೊನೆಯ ದಿನವಾಗಿದ್ದು, ಹಲವು […]
ಜ.31ರಂದು ಕುತ್ಪಾಡಿ ಎಸ್ ಡಿಎಂ ಆಯುರ್ವೇದ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

ಉಡುಪಿ: ಉಡುಪಿ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಹಾಗೂ ಸಂಶೋಧನ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ಸಮಾರಂಭ ಜ. 31ರಂದು ಬೆಳಿಗ್ಗೆ 11ಗಂಟೆಗೆ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಮಮತಾ ಕೆ.ವಿ. ತಿಳಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂತ್ರಾಲಯ ರಾಘವೇಂದ್ರ ಮಠದ ಪೀಠಾಧಿಪತಿಗಳಾದ ಸುಬುಧೇಂದ್ರತೀರ್ಥ ಶ್ರೀಪಾದರು ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ದೀಪ ಪ್ರಜ್ವಲಿಸಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ […]
ಜ.31ರಂದು “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ.

ಉಡುಪಿ: ರೋಹನ್ ಕಾರ್ಪೊರೇಷನ್ ಅರ್ಪಿಸುವ ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಅವರ ಸಹಯೋಗದಲ್ಲಿ ಆನಂದ್ ಎನ್ ಕುಂಪಲ ಅವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಜ. 31ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಿರ್ದೇಶಕ ರಾಹುಲ್ ಅಮೀನ್ ಅವರು, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್’ನ ಬಿಗ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಭಾರತ್ […]
ಪೆರ್ಡೂರು: ಪಿ.ಎಂ. ವಿಶ್ವಕರ್ಮ ಯೋಜನೆ, ತರಬೇತಿ ಕಾರ್ಯಗಾರ, ಪ್ರಮಾಣ ಪತ್ರ ವಿತರಣೆ.

ಹೆಬ್ರಿ: ಆಧುನಿಕತೆಗೆ ತಕ್ಕಂತೆ ನಾವು ಮಾಡುವ ಕೆಲಸದಲ್ಲಿ ಪರಿಣತಿಯನ್ನು ಕಾಣಬೇಕಾದರೆ ನೂತನ ತಂತ್ರಜ್ಞಾನದ ತರಬೇತಿ ಅಗತ್ಯ. ಈ ನಿಟ್ಟಿನಲ್ಲಿ ಪೆರ್ಡೂರಿನ ಶಾರದಾಂಬ ಸಂಸ್ಥೆ ಸರಕಾರದ ಉಚಿತ ಯೋಜನೆಯನ್ನು ಜನರಿಗೆ ತಲುಪಿಸುವ ಕಾರ್ಯ ಶ್ಲಾಘನೀಯ ಎಂದು ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಹೆಬ್ರಿ ಇದರ ಅಧ್ಯಕ್ಷ ಹೆಬ್ರಿ ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಪೆರ್ಡೂರು ಶಾರದಾಂಭ ಇನ್ಫೋಟೆಕ್ ನಲ್ಲಿ ನಡೆದ ಉಚಿತ ಕೌಶಲ್ಯ ತರಬೇತಿ ಕಾರ್ಯಗಾರದಲ್ಲಿ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ […]
ಆನಂದ ಸಿ.ಕುಂದರ್ ಅವರಿಗೆ ಕೀರ್ತಿ ಕಲಶ ಪುರಸ್ಕಾರ

ಬ್ರಹ್ಮಾವರ: ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ವತಿಯಿಂದ ನೀಡಲಾಗುವ ’ಕೀರ್ತಿ ಕಲಶ’ ಪುರಸ್ಕಾರಕ್ಕೆ ಹಿರಿಯ ಉದ್ಯಮಿ, ಸಾಮಾಜಿಕ ಹಾಗೂ ಧಾರ್ಮಿಕ ಚಿಂತಕ ಆನಂದ ಸಿ.ಕುಂದರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ. ಫೆ.15ರಂದು ಸಂಜೆ 6ಗಂಟೆಗೆ ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ನಡೆಯುವ ‘ಅಭಿಮತ ಸಂಭ್ರಮ -2025’ರ ವೇದಿಕೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.