ಉಡುಪಿ:ಕಾರಂತರ ಕಾದಂಬರಿ ಅಧ್ಯಯನ ಶಿಬಿರ : ಸಮಾರೋಪ ಸಮಾರಂಭ

ಉಡುಪಿ: ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವು ಗುರುವಾರ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರಅಧ್ಯಯನ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವಕರ, ಸಾಹಿತ್ಯದ ಹಲವು ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿದವರು ಕಾರಂತರು. ಅವರ ಬಗೆಗಿನ ಶಿಬಿರಗಳಲ್ಲಿ ವಿದ್ಯಾರ್ಥಿಗಳು […]

ಉಡುಪಿ:ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ

ಉಡುಪಿ: ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆವಿದ್ಯಾ ಕುಮಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿಗೆ ವಾಡಿಕೆ ಮಳೆಯು 4,535 ಮಿ.ಮೀ. ಇದ್ದು, ವಾಸ್ತವಿಕವಾಗಿ 5261 ಮಿ.ಮೀ. ನಷ್ಟು ಮಳೆಯಾಗಿ ಶೇ.16 ರಷ್ಟು ಹೆಚ್ಚು […]

ಕಾರ್ಕಳ: ಅನಂತ ಮೂರ್ತಿ ಅವರಿಗೆ ಡಾಕ್ಟರೇಟ್ ಪದವಿ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅನಂತ ಮೂರ್ತಿ ಅವರು ‘ಎ ಡಿಸೈನ್ ಅಂಡ್ ಡೆವಲಪ್ಮೆಂಟ್ ಆಫ್ ನೋವೆಲ್ ಮೆಥೋಡಾಲಜಿಸ್ ಟು ರೆಕಗ್ನಿಸ್ ಕ್ಯಾರೆಕ್ಟರ್ ಇನ್ ಯಕ್ಷಗಾನ’ ಎಂಬ ವಿಷಯದ ಬಗೆಗೆ ಬರೆದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯವು ಇತ್ತೀಚೆಗೆ ಡಾಕ್ಟರೇಟ್ ಪದವಿ ಘೋಷಿಸಿದೆ. ಇವರು ಶ್ರೀನಿವಾಸ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಸಂಜೀವ್ ಕುಲ್ಕರ್ಣಿ ಅವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ ಪ್ರಬಂಧವನ್ನು ಮಂಡಿಸಿದ್ದರು.

ನಾವು ಮಹಿಳೆಯರಿಗೆ ಫ್ರೀ ಕೊಡುತ್ತೇವೆ, ಸರಕಾರ ಹಣ ನೀಡಲಿ; ಸದಾನಂದ ಛಾತ್ರ

ಉಡುಪಿ: ರಾಜ್ಯ ಸರಕಾರ ಕೆಎಸ್ ಆರ್ ಟಿಸಿ ಮೂಲಕ ಶಕ್ತಿ ಯೋಜನೆ ಜಾರಿ ಮಾಡಿದೆ. ಇದೊಂದು ಒಳ್ಳೆಯ ಯೋಜನೆ. ನಾವು ಖಾಸಗಿ ಬಸ್ ನವರು ಕೂಡ ಮಹಿಳೆಯರಿಗೆ ಫ್ರೀ ಪ್ರಯಾಣ ಕೊಡುತ್ತೇವೆ. ಸರಕಾರ ನಮಗೆ ಹಣ ಕೊಡಲಿ ಎಂದು ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ ಸದಾನಂದ ಛಾತ್ರ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಕರಾವಳಿಯಲ್ಲಿ ಖಾಸಗಿ ಬಸ್ ಗಳು ಸಾಕಷ್ಟು ವರ್ಷಗಳಿಂದ ಸೇವೆ ನೀಡುತ್ತಿವೆ. ಗ್ರಾಮೀಣ ಭಾಗದಲ್ಲೂ ನಮ್ಮ ಬಸ್ ಗಳು ಓಡಾಡುತ್ತಿವೆ. […]

ಹೆಜಮಾಡಿ, ಸಾಸ್ತಾನ ಟೋಲ್ ಗೇಟ್ ಗಳಲ್ಲಿ ಹೆಚ್ಚುವರಿ ಹಣ ವಸೂಲಿ; ಫೆ.5ರಂದು ಖಾಸಗಿ ಬಸ್ ಮಾಲಕರಿಂದ ಪ್ರತಿಭಟನೆ

ಉಡುಪಿ: ಹೆಜಮಾಡಿ ಹಾಗೂ ಸಾಸ್ತಾನ ಟೋಲ್ ಗೇಟ್ ನಲ್ಲಿ ಜಿವಿಡಬ್ಲ್ಯೂ7500 ರಿಂದ 1200 ಕೆ.ಜಿ. ಯವರೆಗಿನ ಮಿನಿ ಬಸ್ ಗಳಿಗೆ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಖಾಸಗಿ ಬಸ್ ಮಾಲಕರ ಸಂಘದ ನೇತೃತ್ವದಲ್ಲಿ ಇದೇ ಫೆ.5ರಂದು ಟೋಲ್ ಗೇಟ್ ನಲ್ಲಿ ಪ್ರತಿಭಟನೆ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಸದಾನಂದ ಛಾತ್ರ ಅವರು, ಹೆಜಮಾಡಿ ಹಾಗೂ ಸಾಸ್ತಾನ ಟೋಲ್ ಗೇಟ್ ನಲ್ಲಿ ಕಾನೂನು ಬಾಹಿರವಾಗಿ ನಮ್ಮ ಟೋಲ್ […]