ಪರ್ಕಳ ದೇವಿ ನಗರದ ನಿವಾಸಿ ವೆಂಕಟಪ್ರಭು ನಿಧನ

ಪರ್ಕಳ: ಪರ್ಕಳ ದೇವಿ ನಗರದ ನಿವಾಸಿ ವೆಂಕಟಪ್ರಭು (79) ಅವರು ಫೆಬ್ರವರಿ ನಾಲ್ಕರಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರು ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಸುಮಾರು 35 ವರ್ಷಗಳ ಕಾಲ ಗುಮಾಸ್ತರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು.
ಕಾಪು: ಶಾಸಕರಿಂದ ಕಾಮಗಾರಿ ಪರಿಶೀಲನೆ

ಕಾಪು: ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಪಾದೆ ಕಲ್ಲು ವಿಷ್ಣು ಭಟ್ ಮನೆ ಬಳಿಯ ಸವ್ಯ ಸಾಚಿ ಶಿಶು ಮಂದಿರ ರಸ್ತೆಯ ಕಾಮಗಾರಿ ವೀಕ್ಷಿಸಿ ಪರಿಶೀಲಿಸಿ ಪಕ್ಕದಲ್ಲಿ ಇರುವ ರಾಷ್ಟೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಕಾಲ್ ಮಾಡಿ ಸ್ಥಳೀಯರ ಸಮಸ್ಯೆಗಳ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಆತ್ರಾಡಿ ಸತ್ಯಾನಂದ ನಾಯಕ್, ಪಂಚಾಯತ್ ಸದಸ್ಯ ಗಂಗಾಧರ್ ಪ್ರಭು, ರತ್ನಾಕರ್ ಶೆಟ್ಟಿ, ಪ್ರಸಾದಿನಿ ಹೆಗ್ಡೆ, ರವಿಜಾ,, […]
ಉಡುಪಿ: ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಆಲೂರು, ನಾಡ, ಮೊವಾಡಿ ಗ್ರಾಮಸ್ಥರಿಂದ ಧರಣಿ

ಉಡುಪಿ: ಸರಕಾರಿ ಬಸ್ ಸೌಲಭ್ಯ ಇಲ್ಲದ ಕುಂದಾಪುರ ತಾಲೂಕಿನ ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣಿ, ನಾಡ, ಮೊವಾಡಿ ಗ್ರಾಮಸ್ಥರು ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಮಣಿಪಾಲದ ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಧರಣಿ ನಡೆಸಿದರು. ಧರಣಿಯಲ್ಲಿ ಮಾತನಾಡಿದ ಗ್ರಾಮಸ್ಥರು, ನಾವು ಕೇಳುತ್ತಿರುವ ಮಾರ್ಗದಲ್ಲಿ ಯಾವುದೇ ಬಸ್ಸುಗಳು ಓಡಾಡುತ್ತಿಲ್ಲ. ಇಲ್ಲಿನ ಗ್ರಾಮೀಣ ಪ್ರದೇಶದ ಜನರು ಹಲವಾರು ವರ್ಷಗಳಿಂದ ಬಸ್ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಮಕ್ಕಳು ಶಿಕ್ಷಣಕ್ಕಾಗಿ, ಉದ್ಯೋಗ ಖಾತ್ರಿ ಕೂಲಿಕಾರರು ಪ್ರಯಾಣಕ್ಕೆ ದುಬಾರಿ ವೆಚ್ಚ ನೀಡಿ […]
ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ; ಹೋರಾಟಕ್ಕೆ ಸಜ್ಜಾದ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ

ಉಡುಪಿ: ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ಹಾಗೂ ಅವ್ಯವಸ್ಥೆಯನ್ನು ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹೋರಾಟಕ್ಕೆ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಇದೇ ಫೆ.8ರಂದು ಸಂಜೆ 4ಗಂಟೆಗೆ ಕುಂಜಿಬೆಟ್ಟುವಿನ ಶಾರದಾ ಕಲ್ಯಾಣ ಮಂಟಪದ ಆವರಣದ ಜ್ಞಾನ ಮಂದಿರದಲ್ಲಿ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ. ಈ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಹೋರಾಟ ಸಮಿತಿಯ ಅಮೃತ್ ಶೆಣೈ ಅವರು, ಹೋರಾಟ ಸಮಿತಿಯ ನೇತೃತ್ವದಲ್ಲಿ 2024ರ ಅಕ್ಟೋಬರ್ 29ರಂದು ಪ್ರತಿಭಟನಾ ಸಭೆ ನಡೆಸಿ 2025ರ ಜನವರಿ 30ರೊಳಗೆ […]
ಬೈಂದೂರು ಏತ ನೀರಾವರಿ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

ಉಡುಪಿ: ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಬೈಂದೂರು ಏತ ನೀರಾವರಿ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ. ಹೇರಂಜಾಲು ಏತನೀರಾವರಿ ಯೋಜನೆ ವೈಫಲ್ಯ, ಸ್ಥಳೀಯ ರೈತರಿಗೆ ಆಗುತ್ತಿರುವ ತೊಂದರೆ ಕುರಿತು ಸಭೆ ಕರೆಯಲಾಗಿತ್ತು. ಸಭೆ ನಡೆಯುವ ವೇಳೆ ಎರಡು ತಂಡಗಳ ನಡುವೆ ಹೊಯ್ ಕೈಯ್ ನಡೆದಿದೆ. ಹೇರಂಜಾಲು ಶ್ರೀ ದುರ್ಗಾ ಗಣೇಶೋತ್ಸವ ವೇದಿಕೆಯಲ್ಲಿ ನಡೆದ ಸಭೆಯಲ್ಲಿ ಎರಡು ತಂಡಗಳ ನಡುವೆ ತಳ್ಳಾಟ, ನೂಕಾಟ ಉಂಟಾಗಿ ಒಂದಿಷ್ಟು ಹೊತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. […]