ಉಡುಪಿ ಶ್ರೀಕೃಷ್ಣಮಠದಲ್ಲಿ ಮಧ್ವನವಮಿ ಉತ್ಸವದ ವೈಭವ

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಮಧ್ವನವಮಿ ಉತ್ಸವ ವೈಭವದಿಂದ ನಡೆಯಿತು. ಮಧ್ವನವಮಿ ಪ್ರಯುಕ್ತ ಪಾರಾಯಣ, ಮಧುಅಭಿಷೇಕ ಮಾಡಲಾಯಿತು. ಇನ್ನು ಅನಂತೇಶ್ವರ ದೇವಾಲಯದ ಆವರಣದಲ್ಲಿರುವ ಆಚಾರ್ಯ ಮಧ್ವರ ಸನ್ನಿಧಾನದಲ್ಲಿ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿ ಆಚಾರ್ಯ ಮಧ್ವರಿಗೆ ದಂಡೋದಕವನ್ನು ನೀಡಿದರು. ಈ ವೇಳೆ ಡಾ. ಅರಳು ಮಲ್ಲಿಗೆ ಪಾರ್ಥಸಾರಥಿ ಅವರಿಂದ ವಿಷ್ಣು ಸಹಸ್ರನಾಮ ಚಿಂತನೆ ಮತ್ತು ವಿಪ್ರರಿಂದ ಪಾರಾಯಣ ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ನಡೆಯಿತು. ಆಚಾರ್ಯ ಮಧ್ವರು ಹನುಮಂತ ದೇವರ […]
ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ; ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಉಡುಪಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪದ ಕಾಡೂರಿನ ಗೋಳಿಕಟ್ಟೆ ತಿರುವಿನಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಬೀಜಾಡಿಯ ಜಯಲಕ್ಷ್ಮೀ(68) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ರಾಮಚಂದ್ರ ಭಟ್, ಸುಜಾತಾ, ಮಂಗಳ, ಪ್ರೇಮಾ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಬ್ಬಿನಾಲೆ ಜಾತ್ರೆ ಮುಗಿಸಿ ಐವರು ಕಾರಿನಲ್ಲಿ ಬೆಳಿಗ್ಗೆ ಮಂದಾರ್ತಿ, ಸಾಲಿಗ್ರಾಮ ಹಾಗೂ ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆಂದು ಬರುತ್ತಿದ್ದರು. ಈ […]
ಶೃಂಗೇರಿ ಕೃಷಿ ಇಲಾಖೆಯಲ್ಲಿದೆ ಉದ್ಯೋಗಾವಕಾಶ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಶೃಂಗೇರಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಶೃಂಗೇರಿ ತಾಲ್ಲೂಕಿನಲ್ಲಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನವಾಗಿರುತ್ತದೆ. ಆಸಕ್ತರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಇರಬೇಕು. ಈ ಎಲ್ಲಾ ಕ್ವಾಲಿಫಿಕೇಶನ್‌ಗಳು ಇದ್ದ ಅಭ್ಯರ್ಥಿಗಳು ತಡಮಾಡದೇ ಅಪ್ಲೈ ಮಾಡಿ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಆತ್ಮ ವಿಭಾಗದ […]
ಉಡುಪಿಯ ಕಲ್ಯಾಣಪುರದಲ್ಲಿರುವ ಪ್ರತಿಷ್ಠಿತ ಆಯುರ್ವೇದ ತಯಾರಿಕಾ ಘಟಕಕ್ಕೆ ಯುವಕ ಯುವತಿಯರು ಬೇಕಾಗಿದ್ದಾರೆ

ಉಡುಪಿ:ಉಡುಪಿಯ ಕಲ್ಯಾಣಪುರದಲ್ಲಿರುವ ಪ್ರತಿಷ್ಠಿತ ಆಯುರ್ವೇದ ತಯಾರಿಕಾ ಘಟಕಕ್ಕೆ ಯುವಕರು ಹಾಗೂ ಕ್ವಾಲಿಟಿ ಕಂಟ್ರೋಲ್ ಇನ್ ಚಾರ್ಜ್ ಕೆಲಸಕ್ಕೆ ಯುವತಿಯರು ಬೇಕಾಗಿದ್ದಾರೆ. ಅರ್ಹತೆ: ಎಸ್. ಎಸ್. ಎಲ್. ಸಿ ಉತ್ತೀರ್ಣ.ಹಾಗೂ ಯುವತಿಯರು ಬಿಎಸ್ಸಿ ಇನ್ ಬೋಟಾನಿ ಜೂಲೋಜಿ ಮತ್ತು ಕೆಮಿಸ್ಟ್ರಿ (BSc in Botany Zoology and chemistry)ವಿದ್ಯಾರ್ಹತೆ ಹೊಂದಿರಬೇಕು.PF, ESI ಸೌಲಭ್ಯವಿದೆ. ಉಡುಪಿ ಬ್ರಹ್ಮಾವರ ಆಸುಪಾಸಿನವರಿಗೆ ಮೊದಲ ಆದ್ಯತೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9880029841,9480642125
ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಕಾರ್ಕಳ ಮಂಡಲದಿಂದ ಬೃಹತ್ ಪ್ರತಿಭಟನೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ನೇತೃತ್ವದಲ್ಲಿ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯ ವಿರುದ್ಧ ದಿಕ್ಕಾರ ಕೂಗಿದರು. ‘ದಂಡ ಸರಕಾರ ರಾಜ್ಯ ಕಾಂಗ್ರೆಸ್ ಸರಕಾರ’, ‘ಭಂಡ ಸರಕಾರ ಹಿಂದೂ ವಿರೋಧಿ ಸರಕಾರ’ ಹಾಡು ಹಾಡಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.ಬಿಡುಗಡೆಗೊಳಿಸದಿರುವುದು, ಹಿಂದೂ ವಿರೋಧಿ ನೀತಿ, ಕಟ್ಟಡ ಸಾಮಗ್ರಿಗಳ ಪೂರೈಕೆಗೆ ತಡೆ, […]