ಗೇಣಿದಾರರ ಪರ 2011ರ ಕಾನೂನು ಅನುಷ್ಠಾನಕ್ಕೆ ಒಕ್ಕಲು ರಕ್ಷಣಾ ವೇದಿಕೆ ಆಗ್ರಹ,

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗೇಣಿದಾರರ ಹಿತರಕ್ಷಣೆಗಾಗಿ 2011ರಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾನೂನನ್ನು ತಕ್ಷಣ ಅನುಷ್ಠಾನಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಆಗ್ರಹಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಎಂ.ಕೆ. ಯಶೋಧರ ಅವರು, ಗೇಣಿದಾರು ಯಾನೆ ಒಕ್ಕಲುದಾರರ ಸಂಕಷ್ಟಗಳ ಬಗ್ಗೆ ಮಾಹಿತಿ ನೀಡಿದರು. ಗೇಣಿದಾರರು ತಲೆಮಾರುಗಳಿಂದ ಅನುಭವಿಸಿಕೊಂಡು ಬಂದಿರುವ ಭೂಮಿಯ ದಾಖಲೆಗಳಲ್ಲಿ ಇನ್ನೂ ಮೂಲಿದಾರರು ಯಾನೆ ಧಣಿಗಳು ಹೆಸರು ಇರುವುದರಿಂದ, ಆ ಭೂಮಿಯ […]

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನು ವಾಪಾಸ್ ಕಳುಹಿಸಿದ ರಾಜ್ಯಪಾಲರು!

ಬೆಂಗಳೂರು: ರಾಜ್ಯದಲ್ಲ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ‌ ಹೇಗೆ ಹಾಕುತ್ತೀರಾ ಎಂದು ರಾಜ್ಯಪಾಲರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ. ಇದರ ಜೊತೆಗೆ 10 ವರ್ಷಗಳ ಶಿಕ್ಷೆ ಮತ್ತು […]

ಪ್ರವಾಸಿಗರೇ ದಯವಿಟ್ಟು ಗಮನಿಸಿ: ಮಡಿಕೇರಿಯಲ್ಲಿ ಇನ್ಮುಂದೆ ವಾಟರ್ ಬಾಟಲ್ ಕೊಡಲ್ಲ

ಮಡಿಕೇರಿ, ಫೆಬ್ರವರಿ 07:  ಪ್ರವಾಸಿಗರ ಸ್ವರ್ಗವಾದ ಮಡಿಕೇರಿಯಲ್ಲಿ ವಾರಾಂತ್ಯದಲ್ಲಿ ರಜಾದಿನದಲ್ಲಿ ಹಲವರ ನೆಚ್ಚಿನ ಸ್ಪಾಟ್. ಈ ಪ್ರವಾಸಿಗರ ಕಾರಣಕ್ಕಾಗಿಯೇ ಇದೀಗ ಮಡಿಕೇರಿಯ ಅಂದ ಹಾಳಾಗಿದ್ದು ವಿಪರೀತ ಪ್ಲಾಸ್ಟಿಕ್ ಬಾಟಲಿ ತ್ಯಾಜ್ಯಗಳು ಒಟ್ಟಾಗಿದೆ.  ಪರಿಸರಕ್ಕೂ ಹಾನಿಕಾರಕವಾಗಿದೆ. ಇದನ್ನು ವಿಲೇವಾರಿ ಮಾಡುವುದೇ ನಗರಸಭೆಗೆ ತಲೆನೋವಾಗಿದ್ದು.  ಈಗ ನಗರಸಭೆ ಹೊಸ ಯೋಜನೆ ರೂಪಿಸಿದೆ. ಈ ಕುರಿತು ಆದೇಶ ಹೊರಡಿಸಿದೆ. ಈ ಆದೇಶದಲ್ಲಿ ಮಡಿಕೇರಿ ನಗರದಲ್ಲಿ ಎರಡು ಲೀಟರ್​ವರೆಗಿನ ಪ್ಲಾಸ್ಟಿಕ ವಾಟರ್ ಬಾಟಲಿಗಳ ಮಾರಾಟವನ್ನ ನಿಷೇಧಿಸಿ ಆದೇಶ ಹೊರಡಿಸಿದೆ. ಮಡಿಕೇರಿಯ ವರ್ತಕರು, ಹೋಮ್ […]

ಉಡುಪಿ:ಯಕ್ಷಗಾನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

udupixpress

ಉಡುಪಿ: ಯಕ್ಷಗಾನ ಕೇಂದ್ರ ಇಂದ್ರಾಳಿ (ಯಕ್ಷ ಗುರುಕುಲ ಶಿಕ್ಷಣ ಟ್ರಸ್ಟ್), ಶಿವಪ್ರಭಾ, ಶ್ರೀ ವಾದಿರಾಜವನಂ, ಹಯಗ್ರೀವ ನಗರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಯಕ್ಷಗಾನ ಕೇಂದ್ರದ 52 ನೇ ವಾರ್ಷಿಕೋತ್ಸವ ಸಮಾರಂಭವು ಫೆಬ್ರವರಿ 8 ರಂದು ಸಂಜೆ 6 ಗಂಟೆಗೆ ನಗರದ ಇಂದ್ರಾಳಿಯ ಯಕ್ಷಗಾನ ಕೇಂದ್ರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್ ಬಲ್ಲಾಳ್ ಉದ್ಘಾಟಿಸಲಿದ್ದು, ಯಕ್ಷಗಾನ ಕೇಂದ್ರದ ಸಲಹಾ ಸಮಿತಿಯ […]