ಕಾರ್ಕಳ: ವ್ಯಕ್ತಿ ನಾಪತ್ತೆ

ಉಡುಪಿ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಕಲ್ಲೊಟ್ಟು ಮನೆ ಶಿವಾನುಗ್ರಹ ನಿವಾಸಿ ಪ್ರಕಾಶ್ ಮಡಿವಾಳ (50) ಎಂಬ ವ್ಯಕ್ತಿಯು ಜನವರಿ 8 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 167 ಸೆಂ.ಮೀ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ತನಿಖಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ: ರಕ್ಕಸ ವೇಷದಲ್ಲಿ ಮಿಂಚಿದ ಪುಟ್ಟ ಬಾಲಕ; ಲಯಬದ್ಧ ಹೆಜ್ಜೆಗಾರಿಕೆಗೆ ಪ್ರೇಕ್ಷಕರು ಫುಲ್ ಪಿಧಾ.!

ಉಡುಪಿ: ರಕ್ಕಸ ವೇಷಗಳನ್ನು ಕಂಡರೆ ಬೆಚ್ಚಿ ಬೀಳುವ ಪ್ರಾಯದಲ್ಲಿ ಪುಟ್ಟ ಕಂದಮ್ಮ ಅಬ್ಬರದ ಬಣ್ಣದ ವೇಷದ ಮುಂದೆ ತಾನೂ ವೇಷ ಹಾಕಿ ಕುಣಿಯುತ್ತಿರುವ ಕ್ಯೂಟ್ ವಿಡಿಯೋ ಒಂದು ವೈರಲ್ ಆಗುತ್ತಿದೆ. ಕರಾವಳಿ ಭಾಗದ ಹೆಮ್ಮೆಯ ಕಲೆ ಯಕ್ಷಗಾನದ ಪ್ರಭಾವ ಈ ಪುಟ್ಟ ಮಗುವಿನ ಮೇಲೆ ಅಪಾರವಾಗಿದೆ. ಯಾವುದೇ ಸ್ಟೇಜ್ ಫಿಯರ್ ಇಲ್ಲದೆ, ಈ ಐದು ವರ್ಷದ ಕಂದಮ್ಮ ಅಬ್ಬರದ ಹೆಜ್ಜೆಗಳನ್ನು ಹಾಕಿದೆ. ಜಿತಮನ್ಯು ಎಂಬ ಹೆಸರಿನ ಪುಟ್ಟ ಬಾಲಕ ಉಡುಪಿ ಜಿಲ್ಲೆಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ […]

ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾತೃವಂದನ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ.

ಕಿರಿಮಂಜೇಶ್ವರ: ಶುಭದ ಅಂಗ್ಲ ಮಾಧ್ಯಮ ಶಾಲೆ (ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್) ಯಲ್ಲಿ ಮಾತೃ ವಂದನ ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭವು ಫೆಬ್ರವರಿ 5ರಂದು ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಖ್ಯಾತ ವಾಗ್ಮಿ ದಾಮೋದರ ಶರ್ಮರವರು ತಂದೆ ತಾಯಿ ಮತ್ತು ಶಿಕ್ಷಕರನ್ನು ದೇವರೆಂದು ಏಕೆ ಕರೆಯುತ್ತಾರೆ? ಎನ್ನುವುದರ ಕುರಿತು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಬರುವ ಅಡೆತಡೆಗಳಿಗೆ ಕಿವಿಗೊಡದೆ ಬದುಕನ್ನು ಕಟ್ಟಿಕೊಂಡು ಸಮಾಜದ ಆಸ್ತಿ ಆಗಬೇಕು. ಜೀವನದಲ್ಲಿ ಚಿಕ್ಕ […]

ಉಡುಪಿ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಬೆಂಗಳೂರಿನಲ್ಲಿ ನಿಧನ

ಉಡುಪಿ: ಶಿರ್ವ ಮಂಚಕಲ್ ನಿವಾಸಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ರಾಕೇಶ್ ಕಾಮತ್ (32) ಅವರು ಅಲ್ಪಕಾಲದ ಅಸೌಖ್ಯದಿಂದ ಫೆಬ್ರವರಿ 5 ರಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಖ್ಯಾತ ಉದ್ಯಮಿ ಬಾಲಕೃಷ್ಣ ಕಾಮತ್ ಅವರ ಪುತ್ರ. ರಾಕೇಶ್ ಕೆಲಸದ ನಿಮಿತ್ತ ಹೈದರಾಬಾದ್‌ಗೆ ತೆರಳಿದ್ದು, ಮನೆಗೆ ಮರಳಿದ ಬಳಿಕ ಅಸ್ವಸ್ಥರಾಗಿದ್ದರು. ವೈದ್ಯಕೀಯ ಚಿಕಿತ್ಸೆ ಪಡೆದು ಆರಂಭದಲ್ಲಿ ಚೇತರಿಸಿಕೊಂಡರೂ ಮತ್ತೆ ಆರೋಗ್ಯ ಹದಗೆಟ್ಟಿದ್ದು, ಕುಸಿದು ಬಿದ್ದಿದ್ದಾರೆ. ಪತ್ನಿ ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. […]

ಮಣಿಪಾಲ: ಇಎಸ್‌ಐ ಆಸ್ಪತ್ರೆಗಾಗಿ ಉಪವಾಸ ಸತ್ಯಾಗ್ರಹ

ಉಡುಪಿ: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಮಂಜೂರು ಮಾಡಿದ್ದ ಇಎಸ್‌ಐ ಆಸ್ಪತ್ರೆ ಇನ್ನೂ ಉಡುಪಿಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರ ಆಸ್ಪತ್ರೆ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ ಗುರುವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು. ಕೇಂದ್ರ ಸರಕಾರ ಹಲವು ಜಿಲ್ಲೆಗಳಿಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಿದೆ. ಆದರೆ ಉಡುಪಿಗೆ ಇನ್ನೂ ಬಂದಿಲ್ಲ. ಇದರಿಂದಾಗಿ ಕಾರ್ಮಿಕರಿಗೆ, ಬಡ ಜನರಿಗೆ ಮತ್ತು ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ. ಈ ಸಂಬಂಧ […]