ಉಡುಪಿ ಅಂಬಾಗಿಲಿನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಗುಜರಿ ಗೋಡೌನ್

ಉಡುಪಿ: ಗುಜರಿ ಸಾಮಾನು ದಾಸ್ತಾನು ಇರಿಸಿದ್ದ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ಅಂಬಾಗಿಲಿನ ಸಂತೋಷ್ ನಗರದಲ್ಲಿ ಇಂದು ಸಂಭವಿಸಿದೆ. ಹನಿಫ್ ಎಂಬರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಗುಜರಿ ಸಾಮಾನು ಸುಟ್ಟು ಹೋಗಿವೆ. ಬೆಂಕಿಯ ಕೆನ್ನಾಲಿಗೆ ಗೋಡೌನ್ ತುಂಬಾ ವ್ಯಾಪಿಸಿದ್ದು, ಗೋಡೌನ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿಯ ಕೆನ್ನಾಲಿಗೆ ತೀವ್ರಗೊಂಡ ಹಿನ್ನಲೆಯಲ್ಲಿ ಅಕ್ಕ ಪಕ್ಕದ ಮನೆ ಯವರನ್ನು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ತೆರವು ಮಾಡಿದ್ದಾರೆ. ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ […]
ಪಂಡಿತ್ ದೀನದಯಾಳ್ ಅವರ ಜೀವನ ಆದರ್ಶ ಎಲ್ಲರಿಗೂ ಮಾದರಿ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ‘ಬಲಿದಾನ ದಿನ’ವನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು, ಪಂಡಿತ್ ದೀನದಯಾಳ್ ಅವರ ಜೀವನ ಆದರ್ಶ ಎಲ್ಲರಿಗೂ ಮಾದರಿ. ಬಿಜೆಪಿ ಪಕ್ಷ ಇಂದು ಸದೃಢವಾಗಿ ಬೆಳೆದು ನಿಂತಿದೆ ಅಂದ್ರೆ ಅದರಲ್ಲಿ ದೀನದಯಾಳ್ ಅವರಂತಹ ಹಿರಿಯರ ಕೊಡುಗೆ ಬಹಳಷ್ಟಿದೆ. ಅವರ ಸಂಸ್ಮರಣೆ ಮಾಡುವುದು ನಮ್ಮೆಲ್ಲರ […]
ಏನೇ ಶ್ರವಣ ಸಮಸ್ಯೆಗಳಿದ್ರೂ ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ ನಲ್ಲಿದೆ ಅದಕ್ಕೆ ಸೂಕ್ತ ಪರಿಹಾರ:

ಶ್ರವಣ ಸಮಸ್ಯೆಗಳು ಈ ಆಧುನಿಕ ಕಾಲದಲ್ಲಿ ಜಾಸ್ತಿಯಾಗುತ್ತಿದೆ. ಮಂದವಾಗಿ ಕಿವಿ ಕೇಳುವುದು, ಯಾರೋ ಮಾತಾಡುವಾಗ ಸರಿಯಾಗಿ ಕೇಳದೇ ಇರುವುದು ಇಂತಹ ಸಣ್ಣಪುಟ್ಟ ಸಮಸ್ಯೆಗಳೇ ಕೊನೆಗೆ ದೊಡ್ಡದ್ದಾಗಿ ಬೆಳೆದು ಮಾನಸಿಕ ಖಿನ್ನತೆಗೆ ಕಾರಣವಾಗುತ್ತದೆ. ಅದಕ್ಕೋಸ್ಕರವೇ ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ ಇಂತಹ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುತ್ತದೆ. ಯಾವೆಲ್ಲಾ ಸಮಸ್ಯೆಗಳಿಗೆ ಪರಿಹಾರ? ಹೀಗೇ ಸಮಸ್ಯೆ ಯಾವುದಾದರೂ ಪರಿಹಾರ ಇಲ್ಲಿದೆ. ಹಾಗಾದರೂ ತಡ ಮಾಡಬೇಡಿ ಕೂಡಲೇ ಸಂಪರ್ಕಿಸಿ: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ […]
ಹಿರಿಯಡಕ: 25 ಲಕ್ಷ ರೂ. ವೆಚ್ಚದ ರಸ್ತೆ ನಿರ್ಮಾಣ.

ಉಡುಪಿ: ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡ್ಡಾಂ ಗದ್ದುಗೆ ಎಂಬಲ್ಲಿ ₹25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶನಿವಾರ ಉದ್ಘಾಟಿಸಿದರು. ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶೆಟ್ಟಿ, ಉಪಾಧ್ಯಕ್ಷ ಹರೀಶ್ ಸಾಲಿಯಾನ್, ಕೊಡಿಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂದೀಪ ಮಡಿವಾಳ, ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯರಾದ ರಾಘವೇಂದ್ರ, ಸಂಗೀತಾ, ಸುನಿಲ್ ಶೆಟ್ಟಿ, ಕೊಡಿಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಶೆಟ್ಟಿ, ಗದ್ದಿಗೆ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮೋಹನದಾಸ್ ಶೆಟ್ಟಿ, […]
ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ: ಸ್ವರ್ಣಾಭರಣಗಳ ಪುರಪ್ರವೇಶ ಶೋಭಾಯಾತ್ರೆ

ಉಡುಪಿ: ಸಮಗ್ರ ಜೀರ್ಣೋದ್ಧಾರದೊಂದಿಗೆ ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿರುವ ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ನೂತನ ಸ್ವರ್ಣ ಗದ್ದುಗೆ, ರಜತ ರಥ, ಬೃಹತ್ ಗಂಟೆ ಸಹಿತ ಸ್ವರ್ಣಾಭರಣಗಳ ಪುರಪ್ರವೇಶ ಶೋಭಾಯಾತ್ರೆಯು ಭಾನುವಾರ ನಡೆಯಿತು. 15 ಕೋಟಿ ರೂ. ವೆಚ್ಚದಲ್ಲಿ ಶ್ರೀಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ನೇತೃತ್ವದಲ್ಲಿ ಭಕ್ತಾದಿಗಳ ಸಹಕಾರದೊಂದಿಗೆ ಗುಜ್ಜಾಡಿ ಸ್ವರ್ಣ ಜುವೆಲರ್ಸ್‌ನಲ್ಲಿ ಸ್ವರ್ಣ ಗದ್ದುಗೆ ಮತ್ತು ಮಾರಿಯಮ್ಮ ದೇವಿಯ ಚಿನ್ನದ ಮುಖ ನಿರ್ಮಾಣಗೊಂಡಿದೆ. ಮುಂಬೈ ಉದ್ಯಮಿ ತೋನ್ಸೆ ಆನಂದ ಎಂ. […]