ಉಡುಪಿ: ಮೂರು ಮಂದಿ ಮುಸುಕುಧಾರಿಗಳಿಂದ ಎಟಿಎಂ ಕಳವಿಗೆ ಯತ್ನ

ಉಡುಪಿ: ಕೆನರಾ ಬ್ಯಾಂಕ್‌ನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮೂವರು ಮುಸುಕುಧಾರಿಗಳು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಉಡುಪಿ ಉದ್ಯಾವರದಲ್ಲಿ ಇಂದು ಮುಂಜಾನೆ ನಡೆದಿದೆ. ಮೂರು ಮಂದಿ ಮುಸುಕುಧಾರಿ ಕಳ್ಳರು ಕೆನರಾ ಬ್ಯಾಂಕ್ ನ ಎಟಿಎಂಗೆ ನುಗ್ಗಿ ಎಟಿಎಂ ಬಾಕ್ಸ್ ಒಡೆಯಲು ಯತ್ನಿಸಿದ್ದಾರೆ. ಈ ವೇಳೆ ಎಟಿಎಂ ಸೈರನ್ ಮೊಳಗಿದ್ದು, ಕಳ್ಳರು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸೈರನ್ ಸಂದೇಶ ಕೆನರಾ ಬ್ಯಾಂಕಿನ ಸೆಕ್ಯೂರಿಟಿ ವಿಭಾಗಕ್ಕೆ ರವಾನೆಯಾಗಿದ್ದು, ಬ್ಯಾಂಕ್ ಸಿಬ್ಬಂದಿ ಕೂಡಲೇ ಕಾಪು ಪೋಲಿಸರಿಗೆ ಮಾಹಿತಿ ರವಾನಿಸಿದ್ದಾರೆ. ಅಲ್ಲದೆ, ಬ್ಯಾಂಕಿನ […]
ಜೆ.ಇ.ಇ (ಮೈನ್) ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್.ಎಸ್ 99.4676491, ಸಾನಿಕ ಕೆ.ಎನ್ 99. 2028725, ಎಂ. ಮಂಜುನಾಥ್ 99.0174525, ಮೋಹಿತ್ ಎಂ 99.1632262, ಎಚ್. ಎ ರಾಜೇಶ್ 99.1055485, ಪರ್ಸಂಟೈಲ್ ಗಳಿಸಿರುತ್ತಾರೆ. ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ […]
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಡಗಬೆಟ್ಟುವಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿರುದ್ಧಿ ಯೋಜನೆ ಬಿ ಸಿ ಟ್ರಸ್ಟ್ ಉಡುಪಿ ತಾಲ್ಲೂಕು ಮಣಿಪಾಲ ವಲಯದ ಬಡ ಗಬೆಟ್ಟು ಸರಕಾರಿ ಸಂಯುಕ್ತ ಪ್ರೌಢ ಶಾಲೆ ಶೆಟ್ಟಿ ಬೆಟ್ಟು ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಪತ್ರಕರ್ತ ನಿತ್ಯಾನಂದ ಪಡ್ರೆ ಭಾಗವಹಿಸಿ ಮಾತನಾಡಿ, ಯುವಜನತೆ ದಾರಿ ತಪ್ಪ ಬಾರದು, ಟಿವಿ ಮೊಬೈಲ್ ಬಳಕೆ ಕಡಿಮೆ ಮಾಡಬೇಕು, ಶಾಲೆ ಮತ್ತು ತಂದೆ ತಾಯಿಗೆ ಕೀರ್ತಿ ಗೌರವ ತರಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ […]
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಫೆ.13ರಂದು ಮನ್ಮಹಾರಥೋತ್ಸವ.

ಬ್ರಹ್ಮಾವರ: ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಮನ್ಮಹಾರಥೋತ್ಸವ ಇದೇ 13ರಂದು ನಡೆಯಲಿದ್ದು 12ರ ಕುಂಭ ಸಂಕ್ರಮಣದಂದು ರಾತ್ರಿ ಕೆಂಡಸೇವೆ ನಡೆಯಲಿದೆ. 14ರಂದು ರಾತ್ರಿ ಕೆರೆ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಅಷ್ಟಾವಧಾನ ಸೇವೆ, ಐದೂ ಮೇಳಗಳಿಂದ ಸೇವೆ ಆಟ, 15ರಂದು ಸಂಪ್ರೋಕ್ಷಣೆ ನಡೆಯಲಿದೆ. ಕೆಂಡಸೇವೆಯ ಪ್ರಯುಕ್ತ ರಾತ್ರಿ 7 ಘಂಟೆಯ ತನಕ ದೇವರ ದರ್ಶನ ಮತ್ತು ಸೇವೆಗಳಿಗೆ ಅವಕಾಶವಿದೆ. ಸೇವಾಕರ್ತರು ಅದರ ಒಳಗೆ ದೇವರ ದರ್ಶನ ಮಾಡಿ ಮತ್ತು ಸೇವೆ ಮಾಡಿಸಿಕೊಳ್ಳಬೇಕು. ಕೆಂಡ ಸೇವೆಯ ನಂತರ ಇತರ ಭಕ್ತರಿಗೆ ದೇವರ […]
ಜೆಇಇ ಮೈನ್ ಫಲಿತಾಂಶ:ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ..ಎ ನಡೆಸಿದ ಜೆಇಇ ಮೈನ್ ಪ್ರಥಮ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪಿ.ಯು ಕಾಲೇಜಿನ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಧನುಷ್ ನಾಯಕ್ 99.7330507 ಪರ್ಸಂಟೈಲ್, ತರುಣ್ ಸುರಾನ 99.7329879 ಪರ್ಸಂಟೈಲ್, ಚಿಂತನ್ ಜೆ. ಎಂ 99.6686123 ಪರ್ಸಂಟೈಲ್, ಆಕಾಶ್ ಎಚ್. ಪ್ರಭು 99.6148310 ಪರ್ಸಂಟೈಲ್, ಹೃತ್ವಿಕ್ ಶೆಟ್ಟಿ 99.4580440 ಪರ್ಸಂಟೈಲ್, ಕೆ.ಮನೋಜ್ ಕಾಮತ್ 99.4567815 ಪರ್ಸಂಟೈಲ್, ವೇದಾಂತ್ ಶೆಟ್ಟಿ 99.2929708 ಪರ್ಸಂಟೈಲ್ ಮತ್ತು […]