ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಫೋಟಕ ಬ್ಯಾಟರ್ ರಜತ್ ಪಾಟಿದಾರ್’ಗೆ ನಾಯಕನ ಪಟ್ಟ- ಅಧಿಕೃತ ಘೋಷಣೆ.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಟೂರ್ನಿ ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಉತ್ಸಾಹ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ನಡುವೆ ಐಪಿಎಲ್ 2025ರ ಟೂರ್ನಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ 8ನೇ ಹೊಸ ನಾಯಕನ ಅಧಿಕೃತ ಘೋಷಣೆ ಆಗಿದೆ. ಫಾಫ್ ಡು ಪ್ಲೆಸಿಸ್ ಬಿಡುಗಡೆಯಾದ ನಂತರ ಆರ್‌ಸಿಬಿ ಹೊಸ ನಾಯಕನ ಹುಡುಕಾಟದಲ್ಲಿತ್ತು. ಇದೀಗ ಆರ್‌ಸಿಬಿ ತಂಡಕ್ಕೆ ರಜತ್ ಪಾಟಿದಾರ್ ಹೊಸ ನಾಯಕನ್ನಾಗಿ ನೇಮಕಗೊಂಡಿದ್ದಾರೆ. ರಜತ್ ಪಾಟಿದಾರ್ ಕಳೆದೆರಡು ವರ್ಷಗಳಿಂದ ಆರ್‌ಸಿಬಿ ಪರ […]
MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ ‘ವ್ಯಾಲೆಂಟೈನ್ಸ್ ಡೇ’ ಪ್ರಯುಕ್ತ ವಿವಿಧ ಕೋರ್ಸ್ ಗಳಿಗೆ ಶೇ.50 ರಿಯಾಯಿತಿ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಓರೇನ್ ಇಂಟರ್ನ್ಯಾಷನಲ್ ನಲ್ಲಿ ಪ್ರೇಮಿಗಳ ದಿನದ ಪ್ರಯುಕ್ತ ವಿವಿಧ ಕೋರ್ಸ್ ಗಳಿಗೆ ವಿಶೇಷ ಕೊಡುಗೆ ನೀಡಲಾಗಿದೆ. ಮೇಕಪ್, ಕೂದಲು, ಚರ್ಮ ಮತ್ತು ಉಗುರುಗಳ ಕೋರ್ಸ್ ಮೇಲೆ ಶೇ.50 ರಿಯಾಯಿತಿ ನೀಡಲಾಗಿದೆ. ಈ ಆಫರ್‌ಗಳು ಫೆಬ್ರವರಿ 14 ರಂದು ಮಾತ್ರ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ: ವಿದ್ಯಾರ್ಥಿಗಳಿಗೆ ವಿವಿಧ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಪಟ್ಲ ಯುಎಸ್ ನಾಯಕ್ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಒಂದು ವರ್ಷ ಅವಧಿಯ ವಿವಿಧ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರವು ಬುಧವಾರ ಮುಕ್ತಾಯಗೊಂಡಿತು. ಓರೇನ್ ಇಂಟರ್ನ್ಯಾಷನಲ್’ನ ಬ್ಯೂಟಿ ಆ್ಯಂಡ್ ವೆಲ್‌ನೆಸ್, ಐಟಿ ಸ್ಕಿಲ್ಸ್, ಡ್ರೋನ್ ಟೆಕ್ನಾಲಜಿ, ಡ್ರೀಮ್ಸ್ ಜೋನ್ ಫ್ಯಾಶನ್ ಡಿಸೈನಿಂಗ್, ಎಲೆಕ್ಟ್ರಿಕ್ ವೆಹಿಕಲ್ & ಆಟೋಮೆಟಿವ್ ಸ್ಕಿಲ್ ವಿಷಯಗಳ ಕುರಿತು ಕಾರ್ಯಾಗಾರ ನಡೆಸಲಾಯಿತು. ಸುಮಾರು 37 ಪಟ್ಲ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದು, ಎಲ್ಲರಿಗೂ ಪ್ರಮಾಣ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಟ್ಲ […]
ಹೇಮಲತಾ ಆರ್.ಶೆಟ್ಟಿ ವಿಧಿವಶ

ಕುಂದಾಪುರ:ಆನಗಳ್ಳಿ ಆಸೇೂಡರ ಮನೆಯ ಹೇಮಲತಾ ರಾಜೀವ್ ಶೆಟ್ಟಿಯವರು (85) ಫೆ.12 ರಂದು ಸ್ವಗೃಹ ಆಸೇೂಡಿನಲ್ಲಿ ನಿಧನರಾದರು. ಕೊಕ್ಕರ್ಣೆ ಬಂಡ್ಸಾಲೆ ಮನೆ ರಾಜೀವ್ ಶೆಟ್ಟಿ ನಿವೃತ್ತ ಶಿಕ್ಷಣ ಅಧಿಕಾರಿ ಕುಂದಾಪುರ ಇವರ ಪತ್ನಿ.ಇಬ್ಬರು ಪುತ್ರರು ಓರ್ವ ಪುತ್ರಿಯರನ್ನು ಅಗಲಿದ್ದಾರೆ. ಮೃತರ ಸ್ವಗೃಹಕ್ಕೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ;ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಮಾಜಿ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹಾಗೂ ಸ್ಥಳೀಯ ಅನೇಕ ಮಂದಿ ಗಣ್ಯರು ಆಗಮಿಸಿ ಸಂತಾಪ ಸೂಚಿಸಿದರು.
ಸುರತ್ಕಲ್ ಹೊಸಬೆಟ್ಟುವಿನಲ್ಲಿ ಪಾದಚಾರಿಗೆ ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆ ಮೃತ್ಯು.

ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿ ದಾಟಲು ನಿಂತಿದ್ದ ಮಹಿಳೆಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಮಂಗಳವಾರ ಹೊಸಬೆಟ್ಟು ನೀಲಗಿರೀಸ್ ಮುಂಭಾಗ ವರದಿಯಾಗಿದೆ. ಮೃತರನ್ನು ಹೊಸಬೆಟ್ಟು ರಿಜೇಂಟ್ ಪಾರ್ಕ್ ನವ ನಗರ ನಿವಾಸಿ ಉಷಾ (62) ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ದ್ವಿಚಕ್ರ ಸವಾರ ರವಿಚಂದ್ರನ್ ಅವರಿಗೂ ಗಾಯಗಳಾಗಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಉಷಾ ಅವರು ಮಂಗಳವಾರ ಬೆಳಗ್ಗೆ 11:30ರ ಸುಮಾರಿಗೆ […]