ಮುಕ್ತ ವಿವಿ ವಿಜ್ಞಾನ ವಿಷಯದ ಪ್ರಾಯೋಗಿಕ ತರಗತಿಗಳನ್ನು ನಡೆಸಲು ಆಳ್ವಾಸ್ ಆಯ್ಕೆ.

ವಿದ್ಯಾಗಿರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶಾತಿ ಪಡೆದಿರುವ ಸ್ನಾತಕ ಮತ್ತು ಸ್ನಾತಕೋತ್ತರ ವಿಜ್ಞಾನ ವಿಷಯಗಳ ವಿದ್ಯಾರ್ಥಿಗಳಿಗೆ ಆಳ್ವಾಸ್ ಪದವಿ ಕಾಲೇಜಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರವರ್ತಿತ ‘ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ದಲ್ಲಿ ಈ ಶೈಕ್ಷಣಿಕ ಸಾಲಿನಿಂದ ಪ್ರವೇಶಾತಿ ಪಡೆಯುವ ಅಭ್ಯರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ‘ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ವು ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ರಾಜ್ಯದಲ್ಲಿ ಕಲಬುರಗಿ, ದಾವಣಗೆರೆ, ಬೆಂಗಳೂರು ಹಾಗೂ ಮೈಸೂರು […]

ಉಡುಪಿ:ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಯೊಬ್ಬರ ಸ್ವಾಭಿಮಾನ ಗೌರವಾನ್ವಿತ ಬದುಕಿನ ಮೂಲ ಪ್ರೇರಣೆ: ಡಾ. ಗಣನಾಥ ಎಕ್ಕಾರು

ಉಡುಪಿ:ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆಯಿಂದಾಗಿ ಶಿಕ್ಷಣದಿಂದ ವಂಚಿತರಾದ ಪ್ರತಿಯೊಬ್ಬರು ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗುವುದರ ಜೊತೆಗೆ ಬದುಕನ್ನು ಸ್ವಾಭಿಮಾನ ಹಾಗೂ ಗೌರವಯುತವಾಗಿ ನಡೆಸಲು ಪ್ರೇರೆಪಿಸಿತು ಎಂದು ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು. ಅವರು ಇಂದು ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ಇವರ […]

ಉಡುಪಿ:ಹೊಲಿಗೆ ಯಂತ್ರ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ನಗರೋತ್ಥಾನ 4 ನೇ ಹಂತದ ಅನುದಾನದಡಿ ಶೇ.24.10, ಶೇ. 7.25 ಮತ್ತು ಶೇ. 5 ಕ್ಕೆ ಮಂಜೂರಾದ ಮೊತ್ತದಲ್ಲಿ ವ್ಯಕ್ತಿ ಸಂಬಂಧಿತ ಸೌಲಭ್ಯಗಳಲ್ಲಿ ಹೊಲಿಗೆ ಯಂತ್ರ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಾತಿ ಮತ್ತು ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ ಪ್ರತಿ, ಆಧಾರ್‌ಕಾರ್ಡ್, ಅರ್ಜಿದಾರರ ಭಾವಚಿತ್ರ, ಹೊಲಿಗೆ ತರಬೇತಿ ಪಡೆದ ಬಗ್ಗೆ ದೃಢಪತ್ರದ ಪ್ರತಿಯೊಂದಿಗೆ ಮಾರ್ಚ್ 10 ರ ಒಳಗಾಗಿ ಪೌರಾಯುಕ್ತರು, […]

ಉಡುಪಿ:ತೆಂಗು ಬೆಳೆಗಾರರಿಗೆ ಎಚ್ಚರಿಕೆ

ಉಡುಪಿ: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಲ್ಲಿ ವಿವಿಧ ಜಾತಿಯ ತೆಂಗು ಸಸಿಗಳೆಂದು ಹೊರ ರಾಜ್ಯದ ನರ್ಸರಿಗಳವರು ಅನಧಿಕೃತವಾಗಿ ಗ್ಯಾರಂಟಿ ಇಲ್ಲದೆ ಗಿಡಗಳನ್ನು ತಂದು ರೋಡು ಬದಿಗಳಲ್ಲಿ, ಎರಡು ವರ್ಷಗಳಲ್ಲಿ ಪಸಲು ಬರುವುದಾಗಿ ನಂಬಿಸಿ ಅತಿ ಹೆಚ್ಚು ದರದಲ್ಲಿ ಪ್ರತಿ ತೆಂಗಿನ ಸಸಿಗಳಿಗೆ 1500 ರೂ. ವರೆಗೂ ಮಾರಾಟ ಮಾಡಿ ರೈತರಿಗೆ ಮೋಸ ಮಾಡುತ್ತಿರುವುದು ತೋಟಗಾರಿಕೆ ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಸಾರ್ವಜನಿಕರು, ಜಿಲ್ಲೆಯಲ್ಲಿರುವ ಅಧಿಕೃತ ನರ್ಸರಿಗಳು, ತೋಟಗಾರಿಕಾ ಇಲಾಖೆ ನರ್ಸರಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದಲ್ಲಿ […]