ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ; ಬಿಜೆಪಿ ಘೋಷಣೆ.

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯ ಪದಗ್ರಹಣಕ್ಕೆ ನಾಳೆ ಮುಹೂರ್ತ ನಿಗದಿಯಾಗಿದ್ದರೂ ಮುಖ್ಯಮಂತ್ರಿಯ ಹೆಸರನ್ನು ಮಾತ್ರ ಬಿಜೆಪಿ ಬಿಟ್ಟುಕೊಟ್ಟಿರಲಿಲ್ಲ. ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಭಾರೀ ಬಹುಮತ ಪಡೆಯುವ ಮೂಲಕ ದಿಗ್ವಿಜಯ ಸಾಧಿಸಿದಾಗಿನಿಂದಲೂ ಈ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿ ಗೆದ್ದ ಪರ್ವೇಶ್ ವರ್ಮಾ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಿಶ್ ಸೂದ್, ಜಿತೇಂದ್ರ ಮಹಾಜನ್, ರೇಖಾ ಗುಪ್ತಾ ಮುಂತಾದವರ ಹೆಸರು ಸಿಎಂ ರೇಸ್ನಲ್ಲಿ ಕಾಣಿಸಿಕೊಂಡಿತ್ತು. ದೆಹಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ […]
ಕಟಪಾಡಿ:ತ್ರಿಶಾ ವಿದ್ಯಾ ಪಿಯು ಕಾಲೇಜು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಕಟಪಾಡಿ: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಹೆಚ್ಚಿಸಲು “ಲಿಸನ್ ಲರ್ನ್ ಲೀಡ್” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಡುಪಿಯ ಚಿತ್ತಾರ ಕಂಫರ್ಟ್ ನಲ್ಲಿ11 ಫೆಬ್ರವರಿ 2025 ರಂದು ಆಯೋಜಿಸಲಾಯಿತು. ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಸಿಎ ಗೋಪಾಲ ಕೃಷ್ಣ ಭಟ್ ಅವರು ಆತ್ಮ ವಿಶ್ವಾಸ ಮತ್ತು ಸ್ವಯಂ ಪ್ರೇರಣೆಯ ಮಹತ್ವವನ್ನು ಒತ್ತಿ ಹೇಳಿದರು. “ಆತ್ಮವಿಶ್ವಾಸವು ಯಶಸ್ಸಿನ ಪ್ರಮುಖ ಕೀಲಿಕೈ ಎಂದರೆ ಅದರಲ್ಲಿ ಸಂಶಯವಿಲ್ಲ. ಆತ್ಮವಿಶ್ವಾಸವಿದ್ದಾಗ, […]
ಉಡುಪಿ: ಶೇ.60ರಷ್ಟು ಕನ್ನಡ ಬಳಕೆ ಮಾಡದ ನಾಮಫಲಕಗಳಿಗೆ ಮಸಿ ಬಳಿಯುತ್ತೇವೆ: ಕರ್ನಾಟಕ ಯುವರಕ್ಷಣಾ ವೇದಿಕೆ ಎಚ್ಚರಿಕೆ

ಉಡುಪಿ: ಉಡುಪಿ ನಗರದ ಅಂಗಡಿ ಮುಂಗಟ್ಟು, ಶೋರೂಂ, ಹೊಟೇಲ್‌ಗಳು ಮತ್ತು ಶಾಲಾ ಕಾಲೇಜುಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು. ಒಂದು ತಿಂಗಳ ಗಡುವು ನೀಡುತ್ತೇವೆ. ಆ ಬಳಿಕವೂ ಅಳವಡಿಕೆ ಮಾಡದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ ಅಂತಹ ಫಲಕಗಳಿಗೆ ಮಸಿ ಬಳಿಯುವ ಕೆಲಸ ಮಾಡುತ್ತೇವೆ ಎಂದು ಕರ್ನಾಟಕ ಯುವರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯ ರಾಜ್ಯ ಪ್ರಚಾರ ಸಮಿತಿ ಕಾರ್ಯದರ್ಶಿ ಸಂದೀಪ್ ಮಾತನಾಡಿ, ರಾಜ್ಯ ಸರಕಾರ ಕನ್ನಡ ಭಾಷೆ ಅಳವಡಿಸಲು […]
ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಟೆಸ್ಲಾ ಇವಿ ಕಾರು :ಭಾರತದಲ್ಲಿ ಟೆಸ್ಲಾ ಕಂಪೆನಿಯ ನೇಮಕಾತಿ ಶುರು

ನವದೆಹಲಿ: ಅಮೇರಿಕಾದ ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಅತ್ಯಂತ ದೈತ್ಯ ಕಂಪೆನಿಯಾಗಿರುವ ಟೆಸ್ಲಾ ಕಂಪೆನಿ ಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ ಕೊಡಲು ಭರ್ಜರಿ ತಯಾರಿ ನಡೆಸಿದ್ದು ಭಾರತದ ರಸ್ತೆಗಳಲ್ಲಿ ತನ್ನ ಇವಿ ಕಾರುಗಳನ್ನು ತರಲು ಉತ್ಸುಕಗೊಂಡಿದೆ. ಅದಕ್ಕೋಸ್ಕರ ಈಗಾಗಲೇ ಭಾರತದಲ್ಲಿ ನೇಮಿಕಾತಿಯನ್ನು ಕಂಪೆನಿ ಚುರುಕುಗೊಳಿಸಿದ್ದು ಲಿಂಕ್ಡ್‌ಇನ್ ಮತ್ತು ಟೆಸ್ಲಾದ ವೆಬ್‌ಸೈಟ್‌ನಲ್ಲಿನ ಉದ್ಯೋಗ ಜಾಹೀರಾತು ಪ್ರಕಾರ, ಕಂಪನಿಯು ಭಾರತದಲ್ಲಿ ಕನಿಷ್ಠ 13 ಬಗೆಯ ವಿವಿಧ ಉದ್ಯೋಗಾವಕಾಶಗಳನ್ನು ಪೋಸ್ಟ್ ಮಾಡಿದೆ. ಸಿಇಒ ಎಲೋನ್ ಮಸ್ಕ್ ಭಾರತಕ್ಕೆ ಟೆಸ್ಲಾ ಕಂಪೆನಿಯ ಎಂಟ್ರಿ ಕುರಿತು […]
ಪರ್ಕಳ ಮಂಗಳ ಕಲಾ ಸಾಹಿತ್ಯ ವೇದಿಕೆ: ಫೆ.23ರಂದು 21ನೇ ವರ್ಷದ ಸಂಭ್ರಮ ‘ಕಲಾ ಸಂಗಮ’

ಉಡುಪಿ: ಪರ್ಕಳ ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ಸಂಭ್ರಮ ‘ಕಲಾ ಸಂಗಮ’ ಕಾರ್ಯಕ್ರಮವು ಫೆ. 23ರಂದು ಪರ್ಕಳ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದೆ ಎಂದು ವೇದಿಕೆಯ ಸಂಚಾಲಕ ಎಂ. ಮಂಜುನಾಥ ಉಪಾಧ್ಯ ಪರ್ಕಳ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್ ಪರ್ಕಳ ಹಾಗೂ ಸ್ವಾಗತ್ ಹೋಟೆಲ್ ಮಾಲಕರಾದ ಮೋಹನದಾಸ ನಾಯಕ್ ಉದ್ಘಾಟಿಸಲಿದ್ದಾರೆ ಎಂದರು. 2.15ಕ್ಕೆ […]