ಹೆಬ್ರಿ: ವ್ಯಕ್ತಿ ನಾಪತ್ತೆ.

ಹೆಬ್ರಿ: ಶಿವಪುರ ಗ್ರಾಮದ ಹರೀಶ(35) ಎಂಬವರು ಫೆ.14ರಂದು ಬೆಳಗ್ಗೆ ಕೆಲಸಕ್ಕೆ ಎಂದು ಮನೆಯಲ್ಲಿ ಹೇಳಿ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ:ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯ ಉದ್ಘಾಟನೆ

ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ತೆರೆಯಲಾದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮಾಜಿ ಸಚಿವ […]

ಉಡುಪಿ:ಜನ ಸಾಮಾನ್ಯರ ಆರ್ಥಿಕ ಸ್ಥಿತಿ ಉತ್ಪನ್ನಗೊಳಿಸಲು ಗ್ಯಾರಂಟಿ ಯೋಜನೆ ಸಹಕಾರಿ : ಹೆಚ್.ಎಂ ರೇವಣ್ಣ

ಉಡುಪಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ರಾಜ್ಯದ ಜನರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವುದರೊಂದಿಗೆ ಅವರಿಗೆ ನೆಮ್ಮದಿ ನೀಡಿ, ಸಾಮಾಜಿಕ ಪರಿವರ್ತನೆ ಮಾಡಲಾಗಿದೆ. ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಗ್ಯಾರಂಟಿ ಯೋಜನೆಯ […]