ಉಡುಪಿ:ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ

udupixpress

ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಸದ್ರಿ ಆಯ್ಕೆ ಪಟ್ಟಿಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ ಫೆಬ್ರವರಿ 24 ರ ಒಳಗಾಗಿ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದಾಗಿದೆ. […]

ಉಡುಪಿ:ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದರು: ಪ್ರಭಾಕರ ಪೂಜಾರಿ

ಉಡುಪಿ: ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮೂಲಕ ಸಮಾಜದಲ್ಲಿ ಸಮಾನತೆಯನ್ನು ಸಾರಿದರು ಎಂದು ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದರು. ಅವರು ಇಂದು ನಗರದ ಕಡಿಯಾಳಿಯ ಯು.ಕಮಲಬಾಯಿ ಪ್ರೌಢಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುಲಾಲ ಸಂಘಗಳ ಒಕ್ಕೂಟ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ವಜ್ಙರ ವಚನಗಳು ಅರ್ಥಪೂರ್ಣವಾಗಿದ್ದು, ಪ್ರತಿಯೊಬ್ಬರು ಅವರ ವಚನಗಳನ್ನು […]

ಉಡುಪಿ ಕ್ಷೇತ್ರದ ಯೋಜನೆಗಳಿಗೆ ವಿಶೇಷ ಬಜೆಟ್‌ ಮಂಜೂರು ಮಾಡುವಂತೆ ಸಿಎಂಗೆ ಶಾಸಕ ಯಶಪಾಲ್‌ ಸುವರ್ಣ ಮನವಿ.

ಉಡುಪಿ, ಫೆ.20: ಮುಂಬರುವ ರಾಜ್ಯ ಬಜೆಟ್‌ನಲ್ಲಿ ಉಡುಪಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಹಣ ಮೀಸಲಿಡಬೇಕು ಮತ್ತು ತುಳುನಾಡಿನ ಧಾರ್ಮಿಕ ಸಂಪ್ರದಾಯಗಳನ್ನು ಮುಂದುವರಿಸಲು ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಸಾಧನೆ ಮಾಡುತ್ತಿರುವ ಉಡುಪಿ ಜಿಲ್ಲೆಯ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸುಧಾರಿಸಲು ವಿಶೇಷ ಅನುದಾನದ ಅಗತ್ಯವನ್ನು ಶಾಸಕ ಸುವರ್ಣ ಅವರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡದ ಕಾರ್ಯನಿರ್ವಹಣೆಗೆ ಹೆಚ್ಚುವರಿಯಾಗಿ 48.36 ಕೋಟಿ […]

ಫೆ.23ರಂದು ಕಾರ್ಕಳದಲ್ಲಿ ಮಡಿವಾಳ ಮಾಚಿದೇವ ಟ್ರೋಫಿ-2025

ಉಡುಪಿ: ಕಾರ್ಕಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘ ಹಾಗೂ ಮಡಿವಾಳ ಯುವ ಘಟಕ, ಮಡಿವಾಳ ಮಹಿಳಾ ಘಟಕದ ನೇತೃತ್ವದಲ್ಲಿ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಪುರುಷರ ಪ್ರೊ ಕಬಡ್ಡಿ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಟ “ಮಡಿವಾಳ ಮಾಚಿದೇವ ಟ್ರೋಫಿ-2025” ಅನ್ನು ಇದೇ ಫೆ. 23ರಂದು ಕಾರ್ಕಳ ಕಾಬೆಟ್ಟು ಸಮುದಾಯ ಭವನದ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯುವ ಘಟಕ ಅಧ್ಯಕ್ಷ ಸಂಪತ್ ಕುಮಾರ್ ಕಣಂಜಾರು ತಿಳಿಸಿದ್ದಾರೆ. ಅವರು ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಡಿವಾಳ ಸಮಾಜ […]

ಮಣಿಪಾಲ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡಿ ಹಲವರಿಗೆ ಜೀವದಾನ ನೀಡಿದ ಯುವಕ

ಉಡುಪಿ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ಯುವಕನ ಕುಟುಂಬಸ್ಥರು ಅಂಗಾಂಗ ದಾನ ನಿರ್ಧಾರದ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಹೌದು, ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕುಂದಾಪುರದ ನಿವಾಸಿ ರಾಘವೇಂದ್ರ(35)ಅವರನ್ನ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ನಂತರ ರಾಘವೇಂದ್ರ ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣ ಕಂಡುಬರಲಿಲ್ಲ. ಮಾನವ ಅಂಗಾಂಗ ಕಸಿ ಕಾಯಿದೆ 1994 ರ ಪ್ರಕಾರ ಪರಿಣಿತ ವೈದ್ಯರ ಸಮಿತಿ ಎರಡು ಬಾರಿ ಅಧಿಕೃತವಾಗಿ ಬ್ರೈನ್ ಡೆಡ್ ಎಂದು ಘೋಷಿಸಿತು. ಈ […]