ಉಡುಪಿ:ಮಲ್ಪೆಯ ದ್ವೀಪಗಳಲ್ಲಿ ಪ್ರವಾಸಿಗರ ಅನುಕೂಲಕ್ಕೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯ ಕೈಗೊಳ್ಳಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಚಟುವಟಿಕೆಗಳು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪಗಳು ಪ್ರಾಕೃತಿಕವಾಗಿ ಇದ್ದು, ಇಲ್ಲಿನ ಪ್ರಾಕೃತಿಕ ಸೌಂದರ್ಯ ಸೊಬಗು ಪ್ರವಾಸಿಗರನ್ನು […]
ಉಡುಪಿ:ಯುವಜನರ ಕೌಶಲ್ಯ ಹೊರತರುವಲ್ಲಿ ಉದ್ಯೋಗ ಮೇಳಗಳು ಮಹತ್ತರ ಪಾತ್ರ ವಹಿಸುತ್ತವೆ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ: ಭಾರತ ದೇಶವು ಜಗತ್ತಿನಲ್ಲಿ ಅತಿ ಹೆಚ್ಚು ಯುವ ಸಂಪತ್ತನ್ನು ಹೊಂದಿರುವ ರಾಷ್ಟ್ರವಾಗಿದ್ದು, ಸೃಜನಾತ್ಮಕ ಕೌಶಲ್ಯಗಳನ್ನು ನಮ್ಮ ಯುವಪೀಳಿಗೆ ಹೊಂದಿದ್ದಾರೆ. ಅವರುಗಳ ಕೌಶಲ್ಯವನ್ನು ಹೊರತರುವಲ್ಲಿ ಉದ್ಯೋಗ ಮೇಳಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ […]
ಮಹಿಳಾ ಯಕ್ಷಗಾನ ತಂಡಗಳು ಪ್ರಾರಂಭವಾಗುತ್ತಿರುವುದು ಕಲೆಗೆ ಹೆಚ್ಚಿನ ಶಕ್ತಿ ತುಂಬಿದೆ: ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಅಭಿಮತ

ಉಡುಪಿ: ಯಕ್ಷಗಾನ ಕರಾವಳಿಯ ಮಣ್ಣಿನ ಕಲೆ. ಇದರ ಬಗ್ಗೆ ಕೀಳರಿಮೆ ಬಿಟ್ಟು, ಅಬಾಲವೃದ್ಧರಾಗಿ ಯಕ್ಷಗಾನವನ್ನು ಆರಾಧಿಸುವ ಲಕ್ಷಾಂತರ ಮಂದಿ ಯಕ್ಷಗಾನ ಪ್ರೇಮಿಗಳಿದ್ದಾರೆ. ಅದರಲ್ಲೂ ಮಹಿಳಾ ಯಕ್ಷಗಾನ ತಂಡಗಳು ಪ್ರಾರಂಭಗೊಳ್ಳುತ್ತಿರುವುದು ಯಕ್ಷಗಾನ ಕಲೆಗೆ ಹೆಚ್ಚಿನ ಶಕ್ತಿ ತುಂಬಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮಂಗಳವಾರ ಮಂಗಳೂರಿನ ಸಮತಾ ಮಹಿಳಾ ಬಳಗದ ಆಶ್ರಯದಲ್ಲಿ ಮಂಗಳೂರು ಜೈಲ್ ರೋಡ್‌ನ ಸುಬ್ರಹ್ಮಣ್ಯ ಸಭಾ ಭವನದಲ್ಲಿ ಯಕ್ಷ ಮಂಜುಳಾ ಕದ್ರಿ ಬಳಗದಿಂದ ಮಹಿಳಾ ಯಕ್ಷಗಾನ ಬಯಲಾಟ […]