ಮಲ್ಪೆ: ದಕ್ಕೆಯಲ್ಲಿ ನಿಲ್ಲಿಸಿದ್ದ ಮೀನುಗಾರಿಕಾ ಬೋಟ್ ನಲ್ಲಿ ಅಗ್ನಿ ಅವಘಡ; 15 ಲಕ್ಷ ರೂ.ನಷ್ಟ

ಉಡುಪಿ: ಮಲ್ಪೆಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು, ಬೋಟು ಸಂಪೂರ್ಣ ಸುಟ್ಟು ಹೋದ ಘಟನೆ ಸಂಭವಿಸಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯ ದೋಣಿಯವರು ಗಮನಿಸಿ ಸಕಾಲದಲ್ಲಿ ಮಾಹಿತಿ ನೀಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಆ ಬೋಟಿನ ಮೀನುಗಾರರು ಮೀನುಗಾರಿಕೆ ಮುಗಿಸಿಬಂದು ಬೋಟನ್ನು ಬಾಪುತೋಟದ ಬಳಿಯ ದಕ್ಕೆಯಲ್ಲಿ ನಿಲ್ಲಿಸಿದ್ದರು. ಸ್ಥಳೀಯರು ಮತ್ತು ಅಗ್ನಿಶಾಮಕ […]

ಒಂದು‌ ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು […]

ಉಡುಪಿ: ಫೆ.23ರಿಂದ ಮಾ.1 ರವರೆಗೆ ಸುಮನಸಾ ಕೊಡವೂರು ಸಂಸ್ಥೆಯ “ರಂಗಹಬ್ಬ-13” ನಾಟಕೋತ್ಸವ

ಉಡುಪಿ: ಸುಮನಸಾ ಕೊಡವೂರು ಸಂಸ್ಥೆಯ “ರಂಗಹಬ್ಬ – 13” ನಾಟಕೋತ್ಸವ ಇದೇ ಫೆ.23ರಿಂದ ಮಾ.1 ರವರೆಗೆ ಪ್ರತಿದಿನ ಸಂಜೆ 6.30ಕ್ಕೆ ಅಜ್ಜರಕಾಡಿನ ಭುಜಂಗ ಪಾರ್ಕ್‌ನ ಬಯಲುರಂಗ ಮಂದಿರದಲ್ಲಿ ನಡೆಯಲಿದೆ ಎಂದು ಸಂಸ್ಥೆಯ‌ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ತಿಳಿಸಿದರು. ಈ ಬಗ್ಗೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಫೆ.23ರಂದು ಸಂಜೆ 6.30ಕ್ಕೆ ಸಾಹಿತಿ ಅರವಿಂದ ಮಾಲಗತ್ತಿ ನಾಟಕೋತ್ಸವವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರತಿದಿನ ರಂಗಸಾಧಕರಿಗೆ ಸನ್ಮಾನ, ಅದೃಷ್ಟ ಪ್ರೇಕ್ಷಕರಿಗೆ ಟ್ರಾವೆಲಿಂಗ್ ಬ್ಯಾಗ್‌ನ […]

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ 14 ಕೋಟಿ ರೂ. ವಂಚನೆ ಪ್ರಕರಣದ ತನಿಖೆ ವಿಳಂಬ

ಉಡುಪಿ: ಬ್ರಹ್ಮಾವರದ ದ.ಕ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2021-22 ರ ನಡುವಿನ ಅವಧಿಯಲ್ಲಿ ನಡೆದಿರುವ 14 ಕೋಟಿ ರೂ. ವಂಚನೆ ಪ್ರಕರಣದ ತನಿಖೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಫೆ.22ರಂದು ಬೆಳಿಗ್ಗೆ 9.30ರಿಂದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗೇಟಿನ ಬಳಿಯಲ್ಲಿ ಅನಿರ್ದಿಷ್ಟವಧಿ ಧರಣಿ ಸತ್ಯಾಗ್ರಹ ನಡೆಸಲು ಉಡುಪಿ ಜಿಲ್ಲಾ ರೈತ ಸಂಘ ನಿರ್ಧರಿಸಿದೆ. ಈ ಬಗ್ಗೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಣಿ ಮಾತನಾಡಿ, ಈ ಧರಣಿ ಸತ್ಯಾಗ್ರಹದಲ್ಲಿ ಪ್ರತಿದಿನ ಕನಿಷ್ಠ 25 ಜನರಂತೆ, […]

ಉಡುಪಿ: ಫೆ.22ರಿಂದ 26ರ ವರೆಗೆ ದಾದ್ವಶ ಜ್ಯೋರ್ತಿಲಿಂಗಗಳ ದರ್ಶನ ಹಾಗೂ ಆಧ್ಯಾತ್ಮಿಕ ರಾಜಯೋಗ ಚಿತ್ರ ಪ್ರದರ್ಶನ ಕಾರ್ಯಕ್ರಮ

ಉಡುಪಿ: ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ ಉಡುಪಿ ಶಾಖೆ ವತಿಯಿಂದ ಶಿವರಾತ್ರಿ ಉತ್ಸವ ಅಂಗವಾಗಿ ಫೆ.22ರಿಂದ 26 ರವರೆಗೆ ಜ್ಯೋರ್ತಿಲಿಂಗಗಳ ದರ್ಶನ ಹಾಗೂ ಆಧ್ಯಾತ್ಮಿಕ ರಾಜಯೋಗ ಚಿತ್ರ ಪ್ರದರ್ಶನ ಕಾರ್ಯಕ್ರಮವನ್ನು ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಆಯೋಜಿಸಲಾಗಿದೆ. ಈ ಬಗ್ಗೆ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಸಂಸ್ಥೆಯ ಪ್ರತಿನಿಧಿ ರಘುರಾಮ್ ಮಾತನಾಡಿ, ಫೆ.22 ರಂದು ಸಂಜೆ 5.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ, ನಗರಸಭೆ […]