ಈ ವರ್ಷ ಮೈ ಸುಡಲಿದೆ ವಿಪರೀತ ಬಿಸಿಲು: ಏಪ್ರಿಲ್,ಮೇ ನಲ್ಲೂ ಮುಂಗಾರು ಪೂರ್ವ ಮಳೆ

ಬೆಂಗಳೂರು: ರಾಜ್ಯಾದ್ಯಂತ ರಣಬೀಸಿಲು ಜಾಸ್ತಿಯಾಗುತ್ತಿದೆ. ಕಳೆದ ವರ್ಷವೇ ದಾಖಲೆಯ ರಣಬಿಸಿಲು ದಾಖಲಾಗಿತ್ತು. ಸುಡು ಬಿಸಿಲಿಗೆ ಜನರು ಕಂಗೆಟ್ಟು ಹೋಗಿದ್ದರು. ಇದೀಗ ವರ್ಷವೂ ಕಳೆದ ವರ್ಷಕ್ಕಿಂತ ಹೆಚ್ಚು ಬಿಸಿಲಿರುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಶಿಯಸ್ ಬಿಸಿಲು ಅಧಿಕವಾಗಿದೆ. ಇದು ಹೀಗೆ ಮುಂದುವರೆದು ಮಾರ್ಚ್ ನಲ್ಲಿ ತಾಪಮಾನ ದಾಖಲೆ ಮಟ್ಟಕ್ಕೆ ಮುಟ್ಟಲಿದೆಯಂತೆ. ಇನ್ನು ಬಿಸಿಲಿನ ಜೊತೆ ಪೂರ್ವ ಮುಂಗಾರು ಋತುವಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು […]
ದ್ವಿತೀಯ ಪಿಯುಸಿ ಪರೀಕ್ಷೆಗೆ 7 ಲಕ್ಷ ಹಾಗೂ ಎಸೆಸೆಲ್ಸಿ ಪರೀಕ್ಷೆಗೆ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ.

ಬೆಂಗಳೂರು : ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ 7,13,862 ವಿದ್ಯಾರ್ಥಿಗಳು ಹಾಗೂ ಎಸೆಸೆಲ್ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪರೀಕ್ಷೆಗಳನ್ನು ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಗುರುವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ಮಾ.1 ರಿಂದ ಮಾ.20ರವರೆಗೆ ಎಸೆಸೆಲ್ಸಿ ಪರೀಕ್ಷೆ-1ನ್ನು ಮಾ.21 ರಿಂದ ಎ.4ರವರೆಗೆ […]