ಉಡುಪಿ: ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ಉಡುಪಿ: ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿಯನ್ನು ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಅವರಿಗೆ ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ಧ್ವನ್ಯಾಲೋಕ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಜಬ್ಬಾರ್ ಸಮೊ ಮಾತನಾಡಿ, ಯಕ್ಷಗಾನಕ್ಕೆ ಜಾತಿ, ಧರ್ಮದ ತೊಡಕು ಇಲ್ಲ. ಕಲೆ ನಮ್ಮನ್ನು ಈ ಮಟ್ಟಕ್ಕೆ ಬೆಳೆಸಿದೆ. ಕನ್ನಡದ ಹಸಿರು ಬೆಳೆಸುವಲ್ಲಿ […]

ಉಡುಪಿ: ಪೊಲೀಸ್ ವಸತಿ ಗೃಹದಲ್ಲಿ ಕಳ್ಳತನ

ಉಡುಪಿ: ಡಿಎಆರ್ ಪೊಲೀಸ್ ವಸತಿ ಗೃಹಕ್ಕೆ ಸೋಮವಾರ ನಸುಕಿನ ವೇಳೆ ನುಗ್ಗಿದ ಕಳ್ಳರು ಕೆಲವು ಸೊತ್ತುಗಳನ್ನು ಕಳವು ಮಾಡಿದ್ದಾರೆ‌. ಉಡುಪಿ ನಗರದ ಚಂದು ಮೈದಾನದ ಬಳಿ ಇರುವ ಡಿಎಆರ್ ಪೊಲೀಸ್ ವಸತಿ ಗೃಹದಲ್ಲಿ ಕಳ್ಳತನ ನಡೆದಿದೆ. ಇಲ್ಲಿನ ಮೂರು ವಸತಿ ಸಮುಚ್ಚಯದಲ್ಲಿ ಒಟ್ಟು 28 ಮನೆಗಳಿದ್ದು, ಇದರಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯಾದ ರಾಘವೇಂದ್ರ ಹಾಗೂ ರವಿರಾಜ್ ಎಂಬವರ ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಕಪಾಟಿನ ಬೀಗ ತೆರೆದು ಸೊತ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದು ಕಂಡುಬಂದಿದೆ. […]

ಮಣಿಪಾಲ ಶ್ರೀ ಶಾರದ ಟೀಚರ್ಸ್ ಟ್ರೈನಿಂಗ್’ನಲ್ಲಿ ವಾರ್ಷಿಕೋತ್ಸವ ಹಾಗೂ ವೇದ ಗಣಿತ, ಅಬಾಕಸ್ ಪ್ರಶಸ್ತಿ ವಿತರಣೆ.

ಮಣಿಪಾಲ: ಶ್ರೀ ಶಾರದ ಶಿಕ್ಷಕಿಯರ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವವು ಫೆ. 22ರಂದು ಸಂಸ್ಥೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ರೂಪಾ ಡಿ. ಕಿಣಿಯವರು ಮಾತನಾಡಿ “ಪೂರ್ವ ಪ್ರಾಥಮಿಕ ಶಿಕ್ಷಕಿಯರು ಶಾಲೆಯ ಮೊದಲ ಕೆಲವು ವಾರಗಳನ್ನು ಹೇಗೆ ನಿಭಾಯಿಸುವುದು” ಎಂದು ವಿವರವಾಗಿ ತಿಳಿಯಪಡಿಸಿದರು. ಶಿಕ್ಷಕಿಯರು ಮೊಟ್ಟ ಮೊದಲು ತಾಯಿಯಂಂತೆ ಮಗುವನ್ನು ಪ್ರೀತಿಬೇಕು ಹಾಗೂ ಪ್ರತಿಯೊಂದು ತರಗತಿಯೂ ವಿಶಿಷ್ಠವಾಗಿರಬೇಕೆಂದರು. ಮಕ್ಕಳ ಮನವೊಲಿಸಲು ಮತ್ತು ಅವರ ಗಮನವನ್ನು ತಮ್ಮ ಕಡೆಗೆ ಸೆಳೆಯಲು ಪ್ರಯತ್ನಿಸಿ […]

ಲೈನ್ ಸೇಲ್ಸ್ ಹುದ್ದೆಗೆ ಡ್ರೈವರ್ ಬೇಕಾಗಿದ್ದಾರೆ

ಬ್ರಹ್ಮಾವರ:ಬ್ರಹ್ಮಾವರದ ಶೆಣೈ ಹೋಮ್ ಪ್ರಾಡಕ್ಟ್ನಲ್ಲಿ ತಿಂಡಿ ತಿನಿಸುಗಳ ಲೈನ್ ಸೇಲ್ ಮಾಡಲು ಅನುಭವಿ ಡ್ರೈವರ್/ ಸೇಲ್ಸ್ ಮ್ಯಾನ್ ಬೇಕಾಗಿದ್ದಾರೆ.ಮಾಹಿತಿಗಾಗಿ ಸಂಪರ್ಕಿಸಿ:9741761153

ಬ್ರಹ್ಮಾವರ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್: ದೀಪ ಬೆಳಗಿಸುವ ಪ್ರತಿಜ್ಞಾವಿಧಿ ಸ್ವೀಕಾರ ಹಾಗೂ ಪದವಿ ಪ್ರದಾನ ಸಮಾರಂಭ

ಬ್ರಹ್ಮಾವರ: ಫಾರ್ಚ್ಯೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಡಳಿತ ಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್‌ನ ಜನರಲ್ ನರ್ಸಿಂಗ್ ಮತ್ತು ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವ, ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪದವಿ ಪ್ರದಾನ ಸಮಾರಂಭ ಕಾರ್ಯಕ್ರಮ ದಿನಾಂಕ 16.02.2025 ರಂದು ಕಾಲೇಜಿನ ಆಡಿಟೋರಿಯಂನಲ್ಲಿ ಜರುಗಿತು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ರೊ| ಡಾ| ಕೆ. ಸುರೇಶ್ ಶೆಣೈ, ಅಧ್ಯಕ್ಷರು, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಉಡುಪಿ ಕರಾವಳಿ ಇವರು ಆಗಮಿಸಿ, ವಿದ್ಯಾರ್ಥಿಗಳಿಗೆ […]