ಸಾಲಿಗ್ರಾಮದಲ್ಲಿ ಹೊಟೇಲ್ ತವಾ ಪಂಜಾಬ್ ಉದ್ಘಾಟನೆ

ಕೋಟ: ಸಾಲಿಗ್ರಾಮದ ವಾಣಿಜ್ಯ ಸಂಕೀರ್ಣದಲ್ಲಿ ಮಾಂಸಾಹಾರಿ ಹೋಟೆಲ್ ಫೆ.21ರಂದು ಉದ್ಘಾಟನೆಗೊಂಡಿತು. ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಆನಂದ ಸಿ ಕುಂದರ್ ಹೋಟೆಲ್ ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು. ಸಂಸ್ಥೆಯ ಮುಖ್ಯಸ್ಥ ವಿಜಯ ಶೆಟ್ಟಿ ಹವರಾಲು ಮಾತನಾಡಿ, ಸಂಸ್ಥೆ ಮಾಂಸಾಹಾರಿ ಹೊಟೇಲ್ ಉದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಹೆಸರುಗಳಿಸಿದ್ದು ರಾಜ್ಯದ ನಾಲ್ಕು ಶಾಖೆಗಳನ್ನು ಹೊಂದಿದೆ ಎಂದರು. ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು, ಚಿತ್ರ ಸಾಹಿತ್ಯ ಪ್ರಮೋದ್ ಮರವಂತೆ,ಬಿಗ್ ಬಾಸ್ ರನ್ನರ್ ಅಪ್ ತ್ರಿವಿಕ್ರಮ್, ಝೀ ಕನ್ನಡ […]
ಬೆಳ್ತಂಗಡಿ :ನದಿಗೆ ಬಿದ್ದು ಬಾಲಕ ಮೃತ್ಯು

ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಎಂಬಲ್ಲಿ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ತುಳು ನಟ ನವೀನ್ ಡಿ. ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ.

ಉಡುಪಿ: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ ಅನುಸರಿಸುತ್ತಾರೆ. ಹಲವರು ಬಾರ್‌ಗೆ ಹೋಗುತ್ತಾರೆ. ಅದರಿಂದ ಹಣ ವ್ಯರ್ಥವಾಗುತ್ತದೆಯೇ ಹೊರತು ಬೇರೇನೂ ಸಿಗದು. ಆದರೆ, ನಾಟಕಗಳ ವೀಕ್ಷಣೆಯಿಂದ, ಅಲ್ಲಿನ ಧನಾತ್ಮಕ ಹಾಗೂ ಹಾಸ್ಯ ದೃಶ್ಯಗಳಿಂದ ಮನಸ್ಸಿಗೆ ಅಂಟಿಕೊಂಡ ಒತ್ತಡ ನಿವಾರಣೆಯಾಗಲು ಸಾಧ್ಯ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಹಾಗೂ ಪ್ರಭಾವತಿ […]
ಶಿವಪಾಡಿ ದೇವಸ್ಥಾನದಲ್ಲಿ ಶಿವಪಾಡಿ ವೈಭವಕ್ಕೆ ಅದ್ಧೂರಿ ಚಾಲನೆ

ಉಡುಪಿ: ಯುವಜನತೆ ಕೃಷಿಯಿಂದ ವಿಮುಖರಾಗುತ್ತಿರುವ ಸಂದರ್ಭದಲ್ಲಿ ಮಕ್ಕಳಲ್ಲಿ ಕೃಷಿ ಆಸಕ್ತಿ ಬೆಳೆಸುವುದು ಅಗತ್ಯ. ಶಿವಪಾಡಿ ವೈಭವ ಮೂಲಕ ಆರೋಗ್ಯ, ಕೃಷಿ, ಮನೋರಂಜನ ಮೇಳ ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯ ಎಂದು ಧರ್ಮಸ್ಥಳದ ಧಮಾರ್ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಶಿವರಾತ್ರಿಯ ಅಂಗವಾಗಿ ದೇವಳದ ಅಭಿವೃದ್ಧಿ ಟ್ರಸ್ಟ್ ಹಾಗು ಶಿವಪಾಡಿ ವೈಭವ ಆಚರಣಾ ಸಮಿತಿಯ ವತಿಯಿಂದ ಆಯೋಜಿಸಿರುವ ಐದು ದಿನಗಳ ಯಕ್ಷಗಾನ, ಕೃಷಿ, ಆರೋಗ್ಯ, ಆಹಾರ ಮೇಳ ಸಂಯುಕ್ತ ಕಾರ್ಯಕ್ರಮ […]
ಹೆಬ್ರಿ: ದೇವಾಲಯದ ಹಣ ಲೆಕ್ಕಾಚಾರ ವಿಚಾರದಲ್ಲಿ ಹೊಡೆದಾಟ: ಪ್ರಕರಣ ದಾಖಲು

ಹೆಬ್ರಿ: ನಾಡ್ಪಾಲು ಗ್ರಾಮದ ನಂದಲ ದುರ್ಗಾ ಪರಮೇಶ್ವರಿ ದೇವಸ್ಥಾನದ ಹಣದ ಲೆಕ್ಕಾಚಾರದ ವಿಷಯದಲ್ಲಿ ಪರಸ್ಪರ ಹೊಡೆದಾಡಿಕೊಂಡು ದೊಂಬಿ, ನಿರ್ಮಾಣ ಮಾಡಿರುವುದಾಗಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.20ರಂದು ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಕಾರ್ಯಕ್ರಮವಿದ್ದು ಫೆ.21ರಂದು ಲೆಕ್ಕಚಾರದ ವಿಷಯವಾಗಿ ದೇವಸ್ಥಾನದ ಅನುವಂಶಿಕ ಆಡಳಿತ ವರ್ಗದ ಮನೋರಮಾ, ಅವರ ಗಂಡ ಶೇಖರ, ಮಗ ಪ್ರವೀಣ್ ಕುಮಾರ್ ಹಾಗೂ ಅನಿಲ್, ಸುಪ್ರೀತ್ ಹಾಗೂ ಇತರರು ಮತ್ತು ದೇವಸ್ಥಾನವನ್ನು ಹಿಂದು ಧಾರ್ಮಿಕ ದತ್ತಿ ಇಲಾಖೆಯ ಸುಪರ್ದಿಗೆ ಕೊಡುವ ಬಗ್ಗೆ ಅರ್ಜಿ ನೀಡಿದ […]