ಇಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಶಿವರಾತ್ರಿ ಸಂಭ್ರಮ.

ಮಂಗಳೂರು: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ (ಇಂದು)ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಶ್ರೀ ಮಂಗಳಾದೇವಿ ಕ್ಷೇತ್ರ, ಶರವು ಶ್ರೀ ಮಹಾಗಣಪತಿ ಕ್ಷೇತ್ರ, ಕಾವೂರು ಶ್ರೀ ಮಹಾಲಿಂಗೇಶ್ವರ ದೇಗುಲ, ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾ ನ ಸೇರಿದಂತೆ ನಗರದ ವಿವಿಧ ಸನ್ನಿಧಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ. ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನದಲ್ಲಿ ಈಗಾಗಲೇ ಜಾತ್ರೆ ಆರಂಭಗೊಂಡಿದ್ದು, ಶಿವರಾತ್ರಿ ಹಿನ್ನೆಲೆ, ಧಾರ್ಮಿಕ ಕಾರ್ಯಕ್ರಮ, […]