ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಾ. 1 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪುವಿನಲ್ಲಿ ಕಾಪುವಿನ ಅಮ್ಮನ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಾ. 1ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ರಾತ್ರಿ 8 ಗಂಟೆಯಿಂದ ನಡೆಯಲಿದೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 300 ವಿದ್ಯಾರ್ಥಿಗಳಿಂದ 3 ಗಂಟೆಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ನೃತ್ಯ – ಭೋ ಶಂಭೋ, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಬಡಗುತಿಟ್ಟು ಯಕ್ಷಗಾನ-ಶ್ರೀರಾಮ ಪಟ್ಟಾಭಿಶೇಕ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ-ನವದುರ್ಗೆಯರು, ಮಲ್ಲಕಂಬ ಹಾಗೂ ರೋಪ್ ಕಸರತ್ತು, […]

ಉಡುಪಿ:ರೂ.1200 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಬೆಳ್ಮಣ್‌ನಲ್ಲಿ ಉದ್ಘಾಟನೆ

113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು, 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45 ಕೋಟಿಯಾಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಅತ್ಯಂತ ಹೆಚ್ಚಿನ ಲಾಭವಾಗಿರುತ್ತದೆ. ಕಳೆದ 6 ವರ್ಷಗಳಿಂದ ಪ್ರಸ್ತುತ ಆಡಳಿತ ಮಂಡಳಿಯು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಮುಂದಾಳತ್ವದಲ್ಲಿ ಬ್ಯಾಂಕ್ ಪ್ರಗತ್ತಿಯತ್ತ […]

ರಾಜ್ಯ ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಮೀಸಲಿಟ್ಟ ಹಣ ದುರ್ಬಳಕೆ: ಸಂಸದ ರಮೇಶ್ ಜಿಗಜಿಣಗಿ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ದಲಿತರಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿದೆ. ಒಟ್ಟು 29 ಸಾವಿರ ಕೋಟಿ ಹಣ ದುರ್ಬಳಕೆ ಮಾಡಿದೆ. 7D ಹಣ ಕಿತ್ತು ಹಾಕಿದ್ದಾರೆ ಇದು ದಲಿತರ ಮೇಲಿನ ಅನ್ಯಾಯ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರದ ದಲಿತ ಕಾಂಗ್ರೆಸ್ ನಾಯಕರು ಬಾಯಿ ಬಿಡುತ್ತಿಲ್ಲ ಎಂದು ಸಂಸದ ರಮೇಶ್ ಜಿಗಜಿಣಗಿ ಅಸಮಾಧಾನ ಹೊರಹಾಕಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಸಿ- ಎಸ್ ಟಿ ಅನುದಾನ ದುರ್ಬಳಕೆ ಕುರಿತಂತೆ ಬಿಜೆಪಿಯ 14 ತಂಡಗಳು ರಾಜ್ಯಾದ್ಯಂತ […]

ಮಾ.3ರಿಂದ 6ರ ವರೆಗೆ ಪರೀಕ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ

ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳದ ಆಡಳಿತಕ್ಕೆ ಒಳಪಟ್ಟಿರುವ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ, ಸೌಖ್ಯವನ ಪರೀಕ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾರಂಭವು ಮಾರ್ಚ್ 3ರಿಂದ 6ರವರೆಗೆ ನಡೆಯಲಿದೆ ಎಂದು ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ ಸೀತಾರಾಮ ತೋಳ್ವಾಡಿತ್ತಾಯ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ವೇದಮೂರ್ತಿ ಹೆರ್ಗ ಜಯರಾಮ ತಂತ್ರಿ‌ ಅವರ ನೇತೃತ್ವದಲ್ಲಿ […]

ಉಡುಪಿ: ಡಿಕೆಶಿ ಕುಂಭಮೇಳಕ್ಕೆ ಹೋಗಿದ್ದು ಒಳ್ಳೆಯ ನಡೆ- ಡಿಕೆಶಿ ಹಾಡಿ ಹೊಗಳಿದ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿವೆ.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಂಭಮೇಳಕ್ಕೆ ಹೋಗಿ ಬಂದ ನಂತರ ಮತ್ತು ಇಶಾ ಫೌಂಡೇಶನ್‌ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಚಟುವಟಿಕೆಗಳು ಬಿರುಸುಗೊಂಡಿವೆ. ಇದೇ ವೇಳೆ ಬಿಜೆಪಿ ಮುಖಂಡರು ಕೂಡ ಡಿಕೆಶಿ ನಡೆಯನ್ನು ಕೊಂಡಾಡುತ್ತಿರುವುದು ಹೊಸ ಬೆಳವಣಿಗೆ. ಉಡುಪಿ ಶಾಸಕ ಯತ್ಪಾಲ್ ಸುವರ್ಣ ಅವರು ಕೂಡ ಇವತ್ತು ಮಾಧ್ಯಮದ ಜೊತೆ ಮಾತನಾಡಿ ಡಿಕೆಶಿ ಅವರ ನಡೆಯನ್ನು ಹಾಡಿ ಹೊಗಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ಡಿಕೆಶಿ ಅವರು ಸತ್ಯವನ್ನು ಹೇಳಿದ್ದಾರೆ. […]