ಪುಣೆ:ಕಬ್ಬಿನ ಗದ್ದೆಯಲ್ಲಿ ಅಡಗಿರುವ ಅತ್ಯಾಚಾರ ಪ್ರಕರಣದ ಆರೋಪಿ; ಡ್ರೋನ್ ಮೊರೆ ಹೋದ ಪೊಲೀಸರು

ಪುಣೆ:ಮಂಗಳವಾರ ಮುಂಜಾನೆ ನಿಂತಿದ್ದ ಬಸ್ ನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯು ತನ್ನ ಸ್ವಗ್ರಾಮದ ಬಳಿಯ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆತನನ್ನು ಪತ್ತೆ ಹಚ್ಚಲು ಡ್ರೋನ್ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ. ಮಂಗಳವಾರ ಮುಂಜಾನೆ ಸುಮಾರು 5.45ರಿಂದ 6 ಗಂಟೆಯ ನಡುವೆ ನಗರದ ಸ್ವರ್ಗತೆ ಬಸ್ ನಿಲ್ದಾಣದಲ್ಲಿ ಸತಾರ ಜಿಲ್ಲೆಯಲ್ಲಿನ ತನ್ನ ಸ್ವಗ್ರಾಮಕ್ಕೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ಗೃಹಿಣಿಯೊಬ್ಬರನ್ನು ಬಲವಂತವಾಗಿ ಬಸ್ ನಿಲ್ದಾಣದ ಕೊನೆಯಲ್ಲಿ ನಿಂತಿದ್ದ ಖಾಲಿ ಬಸ್ ಒಂದಕ್ಕೆ […]
ಉಡುಪಿ:ಮೋರಿ ನಿರ್ಮಾಣ ಕಾಮಗಾರಿ :ಮಾರ್ಚ್ 2 ರಿಂದ ಏಪ್ರಿಲ್ 30 ರ ವರೆಗೆ ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು-ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು (ಕೊಕ್ಕರ್ಣೆ-ನಾಲ್ಕೂರು ರಸ್ತೆ) ರಸ್ತೆಯ ಮಾರಾಳಿ ಎಂಬಲ್ಲಿ ರಸ್ತೆಯ ಮಧ್ಯಭಾಗದಲ್ಲಿ ಸ್ಲಾಬ್ ಮೋರಿ ನಿರ್ಮಾಣ ಕಾಮಗಾರಿ ಹಿನ್ನೆಲೆ, ಮಾರ್ಚ್ 2 ರಿಂದ ಏಪ್ರಿಲ್ 30 ರ ವರೆಗೆ ಲೋಕೋಪಯೋಗಿ ಇಲಾಖೆಗೆ ಸೇರಿದ ಜಿಲ್ಲಾ ಮುಖ್ಯ ರಸ್ತೆಯಾಗಿರುವ ಆರೂರು- ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು ರಸ್ತೆಯ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಸದರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಕೊಕ್ಕರ್ಣೆ-ಮಾರಾಳಿ-ಹೊರ್ಲಾಳಿ-ನಾಲ್ಕೂರು ಜಿಲ್ಲಾ ಪಂಚಾಯತ್ ರಸ್ತೆಯ ಬದಲಿ ಮಾರ್ಗದಲ್ಲಿ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ […]
ಉಡುಪಿ:ಸಣ್ಣ ಕೈಗಾರಿಕೆಗಳನ್ನು ಉತ್ತೇಜಿಸಲು ಸರಕಾರ ಸದಾ ಬದ್ಧವಾಗಿದೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಣ್ಣ ಕೈಗಾರಿಕೆಗಳ ಉದ್ಯಮಗಳನ್ನು ಉತ್ತೇಜಿಸಲು ಸರ್ಕಾರ ಸದಾ ಬದ್ಧವಾಗಿದೆ. ಸರ್ಕಾರಗಳು ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಉದ್ದಿಮೆದಾರರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಗುರುವಾರ ನಗರದ ಕಡಿಯಾಳಿ ಜಂಕ್ಷನ್‌ನ ದಿ ಓಷನ್ ಪರ್ಲ್ ನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕರ್ನಾಟಕ ಸರಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ […]
ಉಡುಪಿ:’ಹೀಟ್ ವೇವ್ ‘(ಶಾಖದ ಹೊಡೆತ) ಯಿಂದ ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು

ಉಡುಪಿ: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹವಾಮಾನ ಇಲಾಖೆ ಈ ಕೆಳಕಂಡಂತೆ ಸಲಹೆ-ಸೂಚನೆಗಳನ್ನು ನೀಡಿದೆ. ಸಾರ್ವಜನಿಕರು ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ಹಾಗೂ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಬೇಕು. […]