ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯ ಅಧ್ಯಕ್ಷರಾಗಿ ಡಾ.ನಿಕಿನ್ ಶೆಟ್ಟಿ ಆಯ್ಕೆ.

ಉಡುಪಿ: ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದ 54 ವರ್ಷಗಳ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ವೈದ್ಯಾಧಿಕಾರಿಯೊಬ್ಬರು ಅಧ್ಯಕ್ಷರಾಗಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ತಜ್ಞ ವೈದ್ಯರಾಗಿ ಕಾರ್ಯನಿರ್ವಹಿ ಸುತ್ತಿರುವ ಡಾ.ನಿಕಿನ್ ಶೆಟ್ಟಿ ಅವರು ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದ 2027-29ನೇ ಸಾಲಿಗೆ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಂದಾವರದವರಾದ ಡಾ.ನಿಕಿನ್ ಶೆಟ್ಟಿ ಅವರನ್ನು ಉಡುಪಿ ಜಿಲ್ಲಾ ಸಂಘ ಹಾಗೂ ಕರ್ನಾಟಕ ಸರಕಾರಿ ನೌಕರರ ಸಂಘದ ಕುಂದಾಪುರ ಅಧ್ಯಕ್ಷ ಡಾ.ನಾಗೇಶ್ ಅಭಿನಂದಿಸಿದ್ದಾರೆ. ಇದೇ ವೇಳೆ ವಿಜಯಪುರದಲ್ಲಿ ನಡೆದ ಸರಕಾರಿ […]
ಉಡುಪಿ:ಸಂಭವನೀಯ ಪ್ರಕೃತಿ ವಿಕೋಪದ ಮಾಹಿತಿಗಳನ್ನು ಸಾರ್ವಜನಿಕರಿಗೆ ನೀಡಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಸಂಭವನೀಯ ಪ್ರಕೃತಿ ವಿಕೋಪದ ಬಗ್ಗೆ ಹವಾಮಾನ ಇಲಾಖೆಯಿಂದ ನೀಡುವ ಮಾಹಿತಿಗಳನ್ನು ಸಾರ್ವಜನಿಕರಿಗೆ ತಲುಪಿಸಿ, ಅವುಗಳಿಂದ ರಕ್ಷಣೆ ಪಡೆಯುವ ಹಾಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರಸ್ತುತ ಜಿಲ್ಲೆಯಲ್ಲಿ ಬಿಸಿ ಶಾಖದ ಮಾರುತಗಳು ಬೀಸುತ್ತವೆ ಎಂಬ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದೆ. ಈ […]
ಉಡುಪಿ:ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯು ಭವಿಷ್ಯದ ವಿಜ್ಞಾನಿಗಳು ಮತ್ತು ನಾವಿನ್ಯಕಾರರಿಗೆ ಸ್ಪೂರ್ತಿ ನೀಡುವ ವೇದಿಕೆಯಾಗಲಿದೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ:ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯು ಭವಿಷ್ಯದ ಪೀಳಿಗೆಯ ವಿಜ್ಞಾನಿಗಳು ಮತ್ತು ನಾವಿನ್ಯಕಾರರಿಗೆ ಸ್ಪೂರ್ತಿ ನೀಡುವ ವೇದಿಕೆಯಾಗಿಯೂ ಹಾಗೂ ಯುವ ಮನಸ್ಸುಗಳಲ್ಲಿ ವಿಜ್ಞಾನ ಮತ್ತು ಪರಿಶೋಧನೆಯ ಬಗ್ಗೆ ಉತ್ಸಾಹ ತುಂಬುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಒಳಕಾಡು ಸಂಯುಕ್ತ ಪ್ರೌಢಶಾಲೆಯಲ್ಲಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ಮಂಡಳಿ, ಬಾರತೀಯ ವಿಜ್ಞಾನ ಸಂಸ್ಥೆ ಆವರಣ ಬೆಂಗಳೂರು ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ […]