ಉಡುಪಿ:ಕೋಟ್ಪಾ ಕಾಯಿದೆಯ ಉಲ್ಲಂಘನೆ : ಪರವಾನಿಗೆ ರದ್ದು

udupixpress

ಉಡುಪಿ: ಜಿಲ್ಲಾ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡಕೋಟ್ಪಾ ತನಿಖಾ ದಳ ತಂಡವು ಪುನರಾವರ್ತಿತ ದಾಳಿಗಳನ್ನು ನಡೆಸಿ, ದಂಡಗಳನ್ನು ವಿಧಿಸಿ, ಅರಿವನ್ನು ಮೂಡಿಸಿದರೂ ಸಹ, ಕೆಲವು ಅಂಗಡಿಗಳು ಕಾಯಿದೆಯನ್ನು ಉಲ್ಲಂಘನೆ ಮಾಡುತ್ತಿದ್ದು, ಅಂತಹ ಅಂಗಡಿಗಳ ಉದ್ದಿಮೆಯ ಪರವಾನಗಿಯನ್ನು ರದ್ದುಪಡಿಸಲಾಗಿರುತ್ತದೆ. ಜಿಲ್ಲೆಯಾದ್ಯಂತ ಮುಂದಿನ ಯುವ ಪೀಳಿಗೆಯನ್ನು ತಂಬಾಕು ದುರುಪಯೋಗದಿಂದ ರಕ್ಷಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ:ಸಾಹಿತ್ಯದಲ್ಲಿ ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆ ಅತಿ ಮುಖ್ಯ: ಡಾ.ಗಣನಾಥ ಶೆಟ್ಟಿ ಎಕ್ಕಾರು

ಉಡುಪಿ: ಸಾಹಿತ್ಯದಲ್ಲಿ ವೈಜ್ಞಾನಿಕ ಹಾಗೂ ವೈಚಾರಿಕ ಪ್ರಜ್ಙೆಗಳ ಕೊರತೆ ಇದ್ದಲ್ಲಿ ಅದು ಸಮಾಜಕ್ಕೆ ಎಂದಿಗೂ ದಾರಿ ದೀಪವಾಗಲು ಸಾಧ್ಯವಿಲ್ಲ. ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಙೆಯನ್ನು ಕಾರಂತರ ಕಾದಂಬರಿಗಳಲ್ಲಿ ಕಾಣಬಹುದಾಗಿದ್ದು, ಆ ನಿಟ್ಟಿನಲ್ಲಿ ಅವರ ಕಾದಂಬರಿಗಳ ಓದುವಿಕೆ ಅತಿ ಮುಖ್ಯ ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು. ಅವರು ಗುರುವಾರ ನಗರದ ಕಡೆಕಾರಿನ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರಿಂದ ರಾಷ್ಟ್ರೀಯ […]

ಉಡುಪಿ:ಬಿ.ಎಸ್.ಎನ್.ಎಲ್ ಟವರ್ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿ :ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ವ್ಯಾಪ್ತಿಗಳಲ್ಲಿರುವ ಬಿ.ಎಸ್.ಎನ್.ಎಲ್ ಟವರ್‌ಗಳನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡಲು ಬಿ.ಎಸ್.ಎನ್.ಎಲ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಮಂಗಳವಾರ ನಗರದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೆಟ್ವರ್ಕ್ ಹಾಗೂ ಟವರ್ಸಮಸ್ಯೆ ಕುರಿತು ಬಿ.ಎಸ್.ಎನ್.ಎಲ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯ ಗ್ರಾಮೀಣ ಭಾಗದ ಬಿ.ಎಸ್.ಎನ್.ಎಲ್ ಟವರ್‌ಗಳ ಸೇವೆ ಲಭ್ಯತೆ ಇದ್ದರೂ […]

ಉಡುಪಿ:ವಿಶ್ವ ಶ್ರವಣ ದಿನ ಆಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಉಡುಪಿ ಹಾಗೂ ವಿದ್ಯಾರತ್ನ ಸ್ಕೂಲ್ ಆಂಡ್ ಕಾಲೇಜು ಆಫ್ ನರ್ಸಿಂಗ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಶ್ರವಣ ದಿನಾಚರಣೆಯ ಅಂಗವಾಗಿ ಸೋಮವಾರ ಜಾಥಾ ಕಾರ್ಯಕ್ರಮ, ಮಾಹಿತಿ ಕಾರ್ಯಾಗಾರದೊಂದಿಗೆ ಕಿರುಪ್ರಹಸನ ಪ್ರದರ್ಶಿಸಿ ಜನಜಾಗೃತಿ ಮೂಡಿಸಲಾಯಿತು. ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರತ್ನ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ […]

ಉಡುಪಿ:ತೋಟಗಾರಿಕಾ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಉಪನಿರ್ದೇಶಕರು, […]