ಉಡುಪಿ:ನಾನ್ ಎಕ್ಸಿಕ್ಯೂಟಿವ್ ಕೇಡರ್‌ನಲ್ಲಿ ನೇಮಕಾತಿ : ಅರ್ಜಿ ಆಹ್ವಾನ

ಉಡುಪಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರು ಇವರ ವತಿಯಿಂದ ರಾಜಸ್ಥಾನ್, ತಮಿಳುನಾಡು, ಗುಜರಾತ್, ಉತ್ತರ ಪ್ರದೇಶ್ ಮತ್ತು ಹರಿಯಾಣದ ವಿವಿಧೆಡೆ ಏರ್‌ಕ್ರಾಪ್ಟ್ ಡಿವಿಷನ್, ಹೆಚ್‌ಏಎಲ್ ಮೂಲಕ ನಾನ್ ಎಕ್ಸಿಕ್ಯೂಟಿವ್ ಕೇಡರ್‌ನಲ್ಲಿ 4 ವರ್ಷಗಳ ಅವಧಿಗೆ ಅಧಿಕಾರಾವಧಿ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಐ.ಟಿ.ಐ ಮತ್ತು ಡಿಪ್ಲೋಮಾ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 90 ಹುದ್ದೆಗಳು ಖಾಲಿ ಇದ್ದು, ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳೊಂದಿಗೆ […]
ಉಡುಪಿ:ಶಕ್ತಿ ಸದನ ಪ್ರಾರಂಭಿಸಲು ಸ್ವಯಂ ಸೇವಾ ಸಂಸ್ಥೆೆಗಳಿಂದ ಅರ್ಜಿ ಆಹ್ವಾನ

ಉಡುಪಿ: ಭಾರತ ಸರ್ಕಾರದ ವತಿಯಿಂದ ಸ್ವಾಧಾರ ಮತ್ತು ಉಜ್ವಲ ಯೋಜನೆಗಳು ಅನುಷ್ಟಾನಗೊಳ್ಳುತ್ತಿದ್ದು, ಸ್ವಾಧಾರ ಗೃಹ ಯೋಜನೆಯ ಮುಖ್ಯ ಉದ್ದೇಶ ಕಷ್ಟಕರ ಪರಿಸ್ಥಿತಿಯಲ್ಲಿರುವ ಮಹಿಳೆಯರಿಗೆ ಆಶ್ರಯ, ತರಬೇತಿ ಹಾಗೂ ಶಿಕ್ಷಣ ನೀಡುವುದರ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಸಶಕ್ತರನ್ನಾಗಿ ಮಾಡುವುದಾಗಿರುತ್ತದೆ. ಉಜ್ವಲ ಯೋಜನೆಯು ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟಲು ಹಾಗೂ ಸಾಗಾಣಿಕೆ ಮತ್ತು ವಾಣಿಜ್ಯ ಲೈಂಗಿಕ ದುರುಪಯೋಗಕ್ಕೆ ಒಳಪಟ್ಟವರನ್ನು ರಕ್ಷಿಸಲು ಮತ್ತು ಪುನರ್ವಸತಿ ಕಲ್ಪಿಸಲು ಹಾಗೂ ಇವರುಗಳ ಕುಟುಂಬದವರೊಂದಿಗೆ ಪುನರ್ ವಿಲೀನಗೊಳಿಸುವ ಉದ್ದೇಶವನ್ನು ಹೊಂದಿರುತ್ತದೆ. ಕೇಂದ್ರ ಸರ್ಕಾರದ ಮಿಷನ್ […]
ಹೆಬ್ರಿ: ನಾಳೆ(ಮಾ.8) ಮಹಿಳಾ ದಿನಾಚರಣೆಯ ಪ್ರಯುಕ್ತ ಸ್ತನ ಕ್ಯಾನ್ಸರ್ ಹಾಗೂ ಗರ್ಭ ಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ.

ಹೆಬ್ರಿ: ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಕಾರ್ಕಳ ಮಂಡಲ, ಮಹಾ ಶಕ್ತಿಕೇಂದ್ರ ಹೆಬ್ರಿ ಇವರಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾಹೆ ಸಂಸ್ಥೆ, ಮಣಿಪಾಲ ಇವರ ಸಹಯೋಗದೊಂದಿಗೆ ಬಿಜೆಪಿ ಮಹಿಳಾ ಕಾರ್ಯಕರ್ತರಿಗಾಗಿ ಸ್ತನ ಕ್ಯಾನ್ಸರ್ ಹಾಗೂ ಗರ್ಭ ಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ ಕಾರ್ಯಕ್ರಮವು ನಾಳೆ (08 ಮಾರ್ಚ್) ಬೆಳಿಗ್ಗೆ 8.00 ರಿಂದ ಹೆಬ್ರಿಯ ಶ್ರೀರಾಮ ಮಂದಿರದಲ್ಲಿ ನಡೆಯಲಿದೆ. ನೋಂದಣಿ ಸಮಯ ಬೆಳಿಗ್ಗೆ 8.30 ರಿಂದ 11 ಗಂಟೆಯವರೆಗೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆ ತಿಳಿಸಿದೆ.
ಉಡುಪಿ:ನಾಳೆ ಮಾ.08 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 8 ರಂದು ಬೆಳಗ್ಗೆ 10 ಗಂಟೆಗೆ ನಗರದ ರಾಜಾಂಗಣದ ಶ್ರೀ ಕೃಷ್ಣ ಮಠದ ಆವರಣದಲ್ಲಿ ನಡೆಯಲಿದೆ. […]
ಉಡುಪಿ:ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ ಕುಂಠಿತಗೊಳ್ಳುತ್ತಿದೆ. ಕಾಮಗಾರಿಯನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ […]