ಉಡುಪಿ:ಮಾ. 11 ರಂದು ಮಿನಿ ಉದ್ಯೋಗ ಮೇಳ

ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, […]
ಉಡುಪಿ:ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವ ಮನೋಭಾವ ಹೊಂದಲಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ

ಉಡುಪಿ: ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಉತ್ತಮವಾಗಿ ಬರೆಯುವಂತೆ ಅವರುಗಳ ಮನಸ್ಥಿತಿಯನ್ನು ಹೊಂದುವAತೆ ಪೂರಕ ಕಾರ್ಯಗಳನ್ನು ಶಾಲಾ ಶಿಕ್ಷಕರು ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪಠ್ಯಕ್ರಮಗಳನ್ನು ಪೂರ್ಣಗೊಳಿಸಿದ್ದು, ಅಂತಿಮವಾಗಿ […]
ಸರಕಾರದ ಸುತ್ತೋಲೆ, ಕಾಯ್ದೆಗೆ ಆಗುವ ತಿದ್ದುಪಡಿ ಬಗ್ಗೆ ಅರಿತುಕೊಳ್ಳಿ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಪ್ರತಿಯೊಂದು ಸಹಕಾರಿ ಸಂಸ್ಥೆಗೆ ಅದರದ್ದೇ ಆದ ಬೈಲಾ ಇದೆ. ಅದನ್ನು ಓದಿ ಅದರ ವಿಚಾರ ತಿಳಿದುಕೊಳ್ಳಬೇಕು. ಸರಕಾರದಿಂದ ಬರುವ ಸುತ್ತೋಲೆ, ಕಾಲಕಾಲಕ್ಕೆ ಆಗುವ ತಿದ್ದುಪಡಿ ಅರಿತು ಆಡಳಿತ ಮಂಡಳಿಯ ಸಭೆಯಲ್ಲಿ ಇಡಬೇಕು. ಅದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜವಾಬ್ದಾರಿ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ […]
ಮಾ. 8 ರಂದು MSDC ಯಲ್ಲಿ ಮಹಿಳಾ ದಿನಾಚರಣೆಯ ಕುರಿತು ವಿಶೇಷ ಕಾರ್ಯಕ್ರಮ

ಮಣಿಪಾಲ: ವಿವಿಧ ವೃತ್ತಿಪರ ಕೋರ್ಸ್ ಗಳನ್ನು ನೀಡುತ್ತ ಬಂದಿರುವ ಮಣಿಪಾಲದಲ್ಲಿರುವ MSDC (ಮಣಿಪಾಲ ಕೌಶಲ್ಯ ಅಭಿವೃದ್ದಿ ಕೇಂದ್ರ)ದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಮಾ. 8 ರಂದು ಬೆಳಿಗ್ಗೆ 10.30 ರಿಂದ ವಿಶೇಷ ಕಾರ್ಯಕ್ರಮವನ್ನು MSDC Conference hall ನಲ್ಲಿ ಹಮ್ಮಿಕೊಳ್ಳಲಾಗಿದೆ. ವಿವಿಧ ಕ್ಷೇತ್ರದ ಐದು ಸಾಧಕ ಮಹಿಳೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ಪೂರ್ತಿದಾಯಕ ಕಾರ್ಯಕ್ರಮ ಇದಾಗಿದ್ದು, ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು MSDC ಪ್ರಕಟಣೆಯಲ್ಲಿ ತಿಳಿಸಿದೆ.
ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಅಣಕು ಶವ ಯಾತ್ರೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಆರಂಭಗೊಂಡು ವರ್ಷ ಕಳೆದಿದ್ದು, ಇದುವರೆಗೂ ಸೇತುವೆ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬ ಖಂಡಿಸಿ ಉಡುಪಿ ನಾಗರಿಕ ಸಮಿತಿ ನೇತೃತ್ವದಲ್ಲಿ ಇಂದು ಅಣಕು ಶವ ಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಅಣಕು ಶವ ಯಾತ್ರೆ ಮೂಲಕ ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದರು. ತಕ್ಷಣವೇ ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಲಾಯಿತು. ನಾಗರಿಕ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು […]