ಪರೀಕ ಸೌಖ್ಯವನ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಳದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ

ಉತ್ತಮ ಆರೋಗ್ಯದಿಂದ ಮಾತ್ರ ಸತ್ಕಾರ್ಯ ಸಕಾರ; ಡಾ.ಡಿ.ವೀರೇಂದ್ರ ಹೆಗ್ಗಡೆ ಉಡುಪಿ: ಉತ್ತಮ ಆರೋಗ್ಯದಿಂದ ಮಾತ್ರ ಸತ್ಕಾರ್ಯಗಳನ್ನು ಮಾಡಲು ಸಾಧ್ಯ. ಎಲ್ಲರೂ ಭಗವಂತನಲ್ಲಿ ಪ್ರಾರ್ಥಿಸುವ ದೀರ್ಘಾಯುಷ್ಯಕ್ಕೆ ಉತ್ತಮ ಆರೋಗ್ಯ ಇದ್ದರೆ ಮಾತ್ರ ಪ್ರಯೋಜನ. ಆರೋಗ್ಯ ಸರಿ ಇಲ್ಲದಿದ್ದಲ್ಲಿ ದೀರ್ಘಾಯುಷ್ಯ ಹೊರೆಯಾಗಲಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಪರೀಕ ಸೌಖ್ಯವನ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಳದಲ್ಲಿ ಗುರುವಾರ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಂಜನೇಯನ […]

ಉಡುಪಿ: ದೀಪಕ್ ನಾಯಕ್ ಅವರಿಗೆ ಪಿಎಚ್.ಡಿ. ಪದವಿ

ಉಡುಪಿ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (MAHE)‌ನ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಲ್ಲಿ “ಕೋಸ್ಟಲ್ ಕರ್ನಾಟಕದ ಲಿಥೋಮಾರ್ಜಿಕ್ ಮಣ್ಣಿನ ಭೌತಿಕ ಹಾಗೂ ಖನಿಜಶಾಸ್ತ್ರೀಯ ಗುಣಲಕ್ಷಣಗಳ ಅಧ್ಯಯನ ಮತ್ತು ತೆಂಗಿನ ನಾರನ್ನು ಬಳಸಿ ಅದರ ಸುಧಾರಣೆ” ಎಂಬ ವಿಷಯದ ಕುರಿತಾಗಿ ಸಂಶೋಧನೆ ನಡೆಸಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಈ ಸಂಶೋಧನೆ ಡಾ.ಪುರುಷೋತ್ತಮ್ ಜಿ ಸರ್ವದೆ ಮತ್ತು ಡಾ. ಎಚ್ ಎನ್ ಉದಯಶಂಕರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಂಡಿದೆ. […]

ಕುಂದಾಪುರ:ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು

ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ವಿಘ್ನೇಶ್, ಶ್ರದ್ಧಾ, ಸಿಂಚನ, ಮನೀಷ್, ಕೌಶಲ್, ಸುರಕ್ಷಾ ಹಾಗೂ ಶ್ರೇಯಸ್ ಇವರು ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆಗಳು ಹಾಗೂ ನುರಿತ ತರಬೇತುದಾರರಿಂದ […]