ಉಡುಪಿ:ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ಬ್ಯಾಂಕ್ ವತಿಯಿಂದ ರಸಪ್ರಶ್ನೆ ಕಾರ್ಯಕ್ರಮ.

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಆವರಣದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಸಂಸ್ಥಾಪಕತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ಬ್ಯಾಂಕ್ ಕುಂಜಿಬೆಟ್ಟು ಶಾಖೆ ಇದರ ವತಿಯಿಂದ ಶಾಲಾ ಮಕ್ಕಳಿಗಾಗಿ ಕರ್ನಾಟಕ ಬ್ಯಾಂಕ್ ರಸಪ್ರಶ್ನೆ ಕಾರ್ಯಕ್ರಮ ಜರಗಿತು. ಶಾಲಾ ಸಂಸ್ಥಾಪಕ ಶ್ರೀ ಶ್ರೀ ರಮಾನಂದ ಗುರೂಜಿ ದೀಪ ಪ್ರಜ್ವಲನೆ ಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.. ಕುಂಜಿಬೆಟ್ಟು ಬ್ರಾಂಚ್ ನ ಶಾಖಾಧಿಕಾರಿ ಶ್ರೀ ಪ್ರತೀಕ್ […]

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಸಹಕಾರದೊಂದಿಗೆ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ , ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳ ಪ್ರಾರಂಭ

ಬೈಂದೂರು: ಪ್ರದೇಶದ ಪ್ರಸಿದ್ಧ ಆರೋಗ್ಯ ಸಂಸ್ಥೆಯಾದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು , ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಮತ್ತು ಆರೈಕೆ, ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳನ್ನು ಪ್ರಾರಂಭಿಸುವ ಮೂಲಕ ತನ್ನ ಆರೋಗ್ಯ ಸೇವೆಗಳನ್ನು ವಿಸ್ತರಿಸುತ್ತಿದೆ. ಹೊಸ ಸೌಲಭ್ಯಗಳನ್ನು ಇಂದು ಉದ್ಘಾಟಿಸಲಾಯಿತು, ಇದು ಈ ಪ್ರದೇಶದಲ್ಲಿ ವೈದ್ಯಕೀಯ ಸೇವೆಗಳನ್ನು ಹೆಚ್ಚಿಸುವತ್ತ ಮಹತ್ವದ ಹೆಜ್ಜೆಯಾಗಿದೆ. ಬೈಂದೂರು ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಮಾಹೆ ಬೋಧನಾ ಆಸ್ಪತ್ರೆಯ ಸಿಒಒ ಡಾ. ಆನಂದ್ ವೇಣುಗೋಪಾಲ್; […]

ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರ ಆಯ್ಕೆ.

ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಿಂದೂ ಧಾರ್ಮಿಕ ಇಲಾಖೆ ಕರ್ನಾಟಕ ಸರ್ಕಾರ ಅಧೀನದಲ್ಲಿರುವ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ತೃತೀಯ ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆ ಹಾಗೂ ಸಹಾಯಕ ಆಯುಕ್ತರು ಸಭೆ ನಡೆಸಿ 9 ಮಂದಿಯನ್ನು ದೇವಳದ ವ್ಯವಸ್ಥಾಪನ ಸದಸ್ಯರಾಗಿ ಆಯ್ಕೆ ಮಾಡಿದರು. ಅರ್ಚಕ ವರ್ಗದಲ್ಲಿ ಪ್ರಧಾನ ಅರ್ಚಕ, ಪರಿಶಿಷ್ಟ ಪಂಗಡ ವರ್ಗದಲ್ಲಿ ಗಣೇಶ್ ನಾಯ್ಕ್ ಪೈಯ್ಯಾರು, ಮಹಿಳಾ ವರ್ಗದಲ್ಲಿ ಮಮತಾ ಆಚಾರ್ಯ, ಮಮತಾ ಕಿರಣ್ ಪಾದೂರು, ಹಿಂದುಳಿದ ವರ್ಗದಲ್ಲಿ […]

ಕೋಲ್ಕತ್ತ ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಭೇಟಿಗೆ ಮೃತಳ ತಾಯಿ ಮನವಿ.!

ಕೋಲ್ಕತ್ತ: ಆರ್‌.ಜಿ. ಕರ್‌ ಆಸ್ಪತ್ರೆಯ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಮೃತಳ ತಾಯಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಬೇಕೆಂದು ಕೋರಿಕೆ ವ್ಯಕ್ತಪಡಿಸಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆಯೂ ಪ್ರಶ್ನಿಸಿದ್ದಾರೆ. ‘ಪ್ರಧಾನಿಯವರನ್ನು ಭೇಟಿಯಾಗಿ ನನ್ನ ಮಗಳ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಮಾಡುವುದಾಗಿ’ ಮೃತಳ ತಾಯಿ ತಿಳಿಸಿದ್ದಾರೆ. ‘ನನ್ನ ಮಗಳು ದೊಡ್ಡ ಕನಸು ಕಂಡಿದ್ದಳು. ಅವಳು ಇಷ್ಟು […]

ಮುಂದಿನ ವಾರ ಉಡುಪಿ, ದ.ಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಮಾ.09: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಬ್ಬನಿ ಜತೆಗೆ ಚಳಿಯೂ ಕೂಡ ಇದೆ, ಮುಂದಿನ ವಾರ ಮೂರು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.