ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ; ದೇಶಾದ್ಯಂತ ಸಂಭ್ರಮಾಚರಣೆ.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ ಗಳ ಅಂತರದಲ್ಲಿ ಮಣಿಸಿದ ಭಾರತ ಮೂರನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಮೂಲಕ ಪ್ರಬಲ ಆಸ್ಟ್ರೇಲಿಯಾದ ದಾಖಲೆ ಮುರಿದಿದೆ. ಮಾ.9 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ನೀಡಿದ್ದ 252 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಭಾರತ ತಂಡ 49 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 254 ರನ್ […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಕಟಪಾಡಿಯಲ್ಲಿರುವ ಮಹೇಶ್ ಫರ್ನಿಚರ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಕುತ್ಪಾಡಿಯ ಜಗದೀಶ್(42) ಎಂಬವರು ಮಾ.6ರಂದು ರಾತ್ರಿ ಊಟ ಮಾಡಿ ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.