ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿಗೆ ಪ್ರಥಮ ರ‍್ಯಾಂಕ್‌

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಪದವಿ ಕಾಲೇಜಿನ ವಿದ್ಯಾರ್ಥಿನಿ ಪ್ರಾನಂಜಲಿ ಕೆ.ಹೆಚ್ ಬಿಸ್ಸಿ. ಪುಡ್ ಟೆಕ್ನಾಲಜಿ 2021-2024 ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ 90.57.% ಅಂಕಗಳೊಂದಿಗೆ ಪ್ರಥಮ ರ‍್ಯಾಂಕ್‌ ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾಳೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಸೀಮಾ ಜಿ ಭಟ್ ತಿಳಿಸಿರುತ್ತಾರೆ ಹಾಗೂ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಮಣ್ಯ ಸರ್ ಮತ್ತು ನಿರ್ದೇಶಿಕಿಯಾದ ಶ್ರೀಮತಿ ಮಮತಾ ಮತ್ತು ಎಲ್ಲಾ ಉಪನ್ಯಾಸಕ ವೃಂದದವರು ಶುಭ ಹಾರೈಕೆಯನ್ನು ತಿಳಿಸಿರುತ್ತಾರೆ.

ಉಡುಪಿ:ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ:ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ಅನುಷ್ಠಾನಗೊಳಿಸಿ, ಜನರು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬೇಸಿಗೆ ಕಾಲದಲ್ಲಿ ಜಾತ್ರೆ, ರಥೋತ್ಸವ, ಊರು ಹಬ್ಬ ಸೇರಿದಂತೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. […]

ಕಾಪು: ಯುವತಿ ನಾಪತ್ತೆ

ಉಡುಪಿ: ಕಾಪುವಿನ ಕೊಪ್ಪಲಂಗಡಿ ಹೈವೇ ಹತ್ತಿರದಲ್ಲಿರುವ ಜೂಸ್ ಅಂಗಡಿಯಲ್ಲಿ ತಾಯಿಗೆ ಸಹಾಯ ಮಾಡಲು ಹೋಗುತ್ತಿದ್ದು ಕಾಪು ತಾಲೂಕಿನ ನಿವಾಸಿ ಸಾನಿಯಾ ನಿಝ (20) ಎಂಬ ಯುವತಿಯು ಮಾರ್ಚ್ 2 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಬ್ಯಾರಿ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರತಲ್ಲಿ ಕಾಪು ಪೊಲೀಸ್ ಠಾಣೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಛೇರಿ: […]

ಪೆರ್ಡೂರು: ಕಾಲೇಜು ವಿದ್ಯಾರ್ಥಿನಿ ಮೃತ್ಯು

ಉಡುಪಿ: ಉಡುಪಿ ತಾಲೂಕಿನ ಪೆರ್ಡೂರು ಗ್ರಾಮದ ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21) ಅನಾರೋಗ್ಯದಿಂದ ಸೋಮವಾರ ನಿಧನ ಹೊಂದಿದರು. ಮಣಿಪಾಲ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಅವರು ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಕಲಾ ವಿಭಾಗದಲ್ಲಿ ಓದುತ್ತಿದ್ದರು. ಪೆರಂಪಳ್ಳಿಯಲ್ಲಿ ಎನ್.ಎಸ್.ಎಸ್.ಕ್ಯಾಂಪ್‌ ನಲ್ಲಿ ಇದ್ದಾಗ ತಲೆಯ ನರದ ರಕ್ತಸ್ರಾವದಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು.

ಹಂತ ಹಂತವಾಗಿ ನಿಮ್ಮ ಆರೋಗ್ಯವನ್ನೇ ಕಸಿಯುತ್ತೆ ಈ ಕಪ್: ಪೇಪರ್ ಕಪ್ ಬಿಡಿ, ಸ್ಟೀಲ್ ಲೋಟ ಹಿಡಿ: ದಯವಿಟ್ಟು ಈ ಸ್ಟೋರಿ ಓದಿ

ಕಬ್ಬು ಜ್ಯೂಸ್ ಕುಡೀರಿ, ಅಥವಾ ಟೀ ಕಾಫಿ ಏನೇ ಕುಡೀರಿ ಎಲ್ಲದಕ್ಕೂ ಕಾಗದದ ಕಪ್ ಎಂದು ಹೇಳುವಂತಹ ತೆಳು ಪ್ಲಾಸ್ಟಿಕ್ ಹೊದಿಕೆಯುಳ್ಳ ಕಪ್ ನಲ್ಲಿಯೇ ಟೀ ಕಾಫಿ ಎಲ್ಲವನ್ನೂ ಕೊಡುವ ಸಂಪ್ರದಾಯ ಈಗ ಎಲ್ಲೆಡೆ ಶುರುವಾಗಿದೆ. ಆದ್ರೆ ಇಂತಹ ಲೋಟಗಳಲ್ಲಿ ಬಿಸಿ ಬಿಸಿ ದ್ರವ ಪದಾರ್ಥ ಮತ್ತು ತಣ್ಣಗಿನ ದ್ರವ ರೂಪದ ವಸ್ತುಗಳನ್ನು ಹಾಕುವುದರಿಂದ ಅವೆಲ್ಲಾ ಕೆಲವೇ ಕ್ಷಣಗಳಲ್ಲಿ ಪ್ಲಾಸ್ಟಿಕ್ ಹೊದಿಕೆಯ ಜೊತೆ ಕರಗಿ ನೂರಾರು ಕಣಗಳಾಗಿ ನಮ್ಮ ದೇಹ ಸೇರಿ ಕ್ಯಾನ್ಸರ್ ನಿಂದ ಹಿಡಿದು ಕಿಡ್ನಿ […]