ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ ಅವರಿಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’.

ಕುಂದಾಪುರ: ಸ್ಪೇಸ್ ಮೀಡಿಯಾ ಡಿಸಿಎಕ್ಸ್ ಸಿಸ್ಟಮ್ಸ್ ಲಿಮಿಟೆಡ್ ಅರ್ಷಿಸುವ, ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ದಾನ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಂತ್ರಾಲಯ, ಪರಮಪೂಜ್ಯ ಶ್ರೀ ಶ್ರೀ ಶ್ರೀ 1008 ಶ್ರೀ ಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಶ್ರೀ ಮಂತ್ರಾಲಯಪರಿಮಳ ಪ್ರಶಸ್ತಿ 2025ನ್ನು ಪ್ರಶಸ್ತಿಗೆ ಆಯ್ಕೆ ಪ್ರಕ್ರಿಯೆಯ ಮೂಲಕ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ (ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ) ಶ್ರೀ […]
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ

ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11ರ ಮಂಗಳವಾರ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಂದು (ಮಾ.11ರ ಮಂಗಳವಾರ) ಮತ್ತು ನಾಳೆ (ಮಾ.12ರ ಬುಧವಾರ) ಕ್ಷೇತ್ರದಲ್ಲಿ ಇದ್ದುಕೊಂಡು ಸೇವೆಯಲ್ಲಿ ಭಾಗಿಯಾಗಲಿದ್ದಾರೆ.ಸ್ನೇಹಿತರೊಂದಿಗೆ ಕುಕ್ಕೆಗೆ ಆಗಮಿಸಿರುವ ಬಾಲಿವುಡ್ ನ ಖ್ಯಾತ ನಟಿ ಕತ್ರೀನಾ ಕೈಫ್ ಅವರು ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನ ಪಡೆದು, ಸೇವೆಯಲ್ಲಿ […]
ಬಿಕಾಂ ಪದವಿಯಲ್ಲಿ ಮಂಗಳೂರಿನ ತ್ರಿಶಾ ಕಾಲೇಜಿಗೆ 8ನೇ ರ್ಯಾಂಕ್

ಮಂಗಳೂರು:2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಬಿ.ಕಾಂ ಪರೀಕ್ಷೆಯಲ್ಲಿ ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ನ ವಿದ್ಯಾರ್ಥಿನಿ ಮೇಘನಾ ಅವರು 8 ನೇ ರ್ಯಾಂಕ್ ಪಡೆದಿದ್ದಾರೆ. ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ,ಮತ್ತು ಬೋಧಕ ಬೋಧೆಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ತ್ರಿಶಾ ಕ್ಲಾಸಸ್ : ಸಿ ಎ ಫೌಂಡೇಷನ್ ಮತ್ತು ಸಿ ಎ ಇಂಟರ್ ಸಾಧಕರಿಗೆ ಸನ್ಮಾನ

ಮಂಗಳೂರು: ಸಿ.ಎ ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗಾಗಿ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ ಎ ಫೌಂಡೇಷನ್ ಮತ್ತು ಸಿ ಎ ಇಂಟರ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಸಿ ಎ ಇಂಟರ್ ಮಾಹಿತಿ ಕಾರ್ಯಗಾರವನ್ನು ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್ 8 ರಂದು ಆಯೋಜಿಸಲಾಯಿತು. ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ ಕಾಯರ್ಕಟ್ಟೆ ಇವರು […]
ದೆಂದೂರುಕಟ್ಟೆ ಮನೋಜ್ ಬಾರ್ ಬಳಿ ಯುವಕನ ಮೃತದೇಹ ಪತ್ತೆ

ಉಡುಪಿ: ಉಡುಪಿ ತಾಲೂಕಿನ ಮಣಿಪುರ ಗ್ರಾಮದ ದೆಂದೂರುಕಟ್ಟೆಯ ಮನೋಜ್ ಬಾರ್ ಬಳಿ ಯುವಕನೋರ್ವ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಶೋಕ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಬಾರ್ ಸಮೀಪದ ಪೊದೆಯಲ್ಲಿ ಯುವಕ ಪ್ರಜ್ಞಾಹಿನ ಸ್ಥಿತಿಯಲ್ಲಿ ಬಿದ್ದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದೊಂದಿಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಯುವಕ ಅದಾಗಲೇ ಮೃತಪಟ್ಟಿದ್ದಾರೆ ಎಂದು ದೃಢೀಕರಿಸಿದ್ದಾರೆ.