ಉಡುಪಿಯ ಶಿಕ್ಷಾ ಮಾಂಟೆಸರಿಯಲ್ಲಿ ಶಿಕ್ಷಕರಾಗಬಯಸುವವರಿಗೆ ಒಂದು ಅದ್ಭುತ ಅವಕಾಶ

ಉಡುಪಿ:ಇದೀಗ ಉಡುಪಿಯಲ್ಲಿ ಆರಂಭಗೊಂಡ ಶಿಕ್ಷ ಮಾಂಟೆಸ್ಸರಿ ತರಬೇತಿ ಸಂಸ್ಥೆಯಲ್ಲಿ ಮಾಂಟೆಸ್ಸರಿ ತರಬೇತಿಗಾಗಿ ಪ್ರವೇಶಾತಿ ಆರಂಭವಾಗಿದೆ .100% ಉದ್ಯೋಗಾವಕಾಶವಿದ್ದು, ಪಿಯುಸಿ ಅಥವಾ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಸಂಪರ್ಕಿಸಿ:📞9880093063 📩@[email protected] ಶಿಕ್ಷಾ ಮಾಂಟೆಸ್ಸರಿ ತರಬೇತಿ ಸಂಸ್ಥೆ, ರಮೇಶ್ ಭಟ್ ಕಾಂಪ್ಲೆಕ್ಸ್, 2 ನೇ ಮಹಡಿ, ಎದುರು. ವೈಕುಂಠ ಬಾಳಿಗಾ ಕಾನೂನು ಕಾಲೇಜು, ಕುಂಜಿಬೆಟ್ಟು, ಉಡುಪಿ

ಉಡುಪಿಯ ಹೀರೋ ಮೋಟೋಕಾರ್ಪ್ ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯ ಹೀರೋ ಮೋಟೋಕಾರ್ಪ್ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು:▪ಪಿಡಿಐ ಮ್ಯಾನೇಜರ್▪ಸೇಲ್ಸ್ ಎಕ್ಸಿಕ್ಯೂಟಿವ್▪ಸೇಲ್ಸ್ ಮ್ಯಾನೇಜರ್▪ಡೆಲಿವರಿ ಎಕ್ಸಿಕ್ಯೂಟಿವ್ – (ಪುರುಷ)▪HR -( ಪುರುಷ)▪ಹೆಲ್ಪರ್▪ITI ಫ್ರೆಶರ್ ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ವಾಟ್ಸಪ್ ನಂಬರ್ ಗೆ ಅಥವಾ ಇಮೇಲ್ ಗೆ ಕಳುಹಿಸಿ.📩[email protected]+91 7996855666/9590983687 https://docs.google.com/forms/d/e/1FAIpQLSd0RJe9MRm70Khqh1Ryx-EN8VJODcuqhwWa-ATvjcLuIaXZaA/viewform?usp=sf_link ಸ್ಥಳ: ಶಕ್ತಿ ಮೋಟಾರ್ಸ್, ರಾಷ್ಟ್ರೀಯ ಹೆದ್ದಾರಿ 66, ಕರಾವಳಿ ಜಂಕ್ಷನ್ ಹತ್ತಿರ ಅಂಬಲಪಾಡಿ, ಉಡುಪಿ, 576101

2020ರ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಪ್ರಜ್ವಲ್ ದೇವರಾಜ್, ಅಕ್ಷತಾ ಪಾಂಡವಪುರ ಅತ್ಯುತ್ತಮ ನಟ-ನಟಿ.

ಬೆಂಗಳೂರು: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು ಜಂಟಲ್​ಮ್ಯಾನ್ ಚಿತ್ರದ ಅಭಿನಯಕ್ಕಾಗಿ ಪ್ರಜ್ವಲ್ ದೇವರಾಜ್ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ. ಇನ್ನು ಅತ್ಯುತ್ತಮ ನಟಿ ವಿಭಾಗದಲ್ಲಿ ಪಿಂಕಿ ಎಲ್ಲಿ ಚಿತ್ರದಲ್ಲಿ ನಟಿಸಿದ್ದು ಅಕ್ಷತಾ ಪಾಂಡವಪುರ ಆಯ್ಕೆಯಾಗಿದ್ದಾರೆ. ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ ಪಿಂಕಿ ಎಲ್ಲಿ ಚಿತ್ರ ಆಯ್ಕೆಯಾಗಿದ್ದರೆ, ವರ್ಣಪಟಲ ಚಿತ್ರಕ್ಕೆ 2ನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಸಿಕ್ಕಿದೆ. ಹರಿವ ನದಿಗೆ ಮೈಯೆಲ್ಲ ಕಾಲು ಚಿತ್ರಕ್ಕೆ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ. 2020ನೇ ಸಾಲಿನ ರಾಜ್ಯ […]

ಬೆಂಗಳೂರು: ಬಿಜೆಪಿ ನಾಯಕಿ ಆತ್ಮಹತ್ಯೆಗೆ ಶರಣು.

ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಮಂಜುಳ ಎಂಬುವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದ ಮಂಜುಳಾ ಅವರು ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಮಧ್ಯಾಹ್ನ 2:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ. ಯಶವಂತಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಮಂಜುಳಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ.

UCEED ಸಾಮಾನ್ಯ ಪ್ರವೇಶ ಪರೀಕ್ಷೆ: ಅಖಿಲ ಭಾರತ ಮಟ್ಟದಲ್ಲಿ ಉನ್ನತ ಸ್ಥಾನ ಪಡೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಅಮೂಲ್ಯ.

ಕುಂದಾಪುರ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನಡೆಸುವ UCEED(ವಿನ್ಯಾಸಕ್ಕಾಗಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ) ಪ್ರವೇಶ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು| ಅಮೂಲ್ಯ ಅಖಿಲ ಭಾರತ ಮಟ್ಟದಲ್ಲಿ AIR-3827 Rank ಪಡೆಯುವುದರ ಮೂಲಕ ಅತ್ಯುನ್ನತ ಸಾಧನೆ ಮೆರೆದಿದ್ದಾಳೆ. ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ‌ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.