ಜೀವರಕ್ಷಕ ಇಮ್ಯುನೊಥೆರಪಿ ಚಿಕಿತ್ಸೆ ಮೂಲಕ ಬಾಲ್ಯದ ಕ್ಯಾನ್ಸರ್ ಗೆ ಮುಕ್ತಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊಸ ಹೆಗ್ಗಳಿಕೆ

ಮಣಿಪಾಲ: ಮಣಿಪಾಲ—ಮಕ್ಕಳ ಆಂಕೊಲಾಜಿ ವಿಭಾಗದ ಐತಿಹಾಸಿಕ ಬೆಳವಣಿಗೆಯಲ್ಲಿ, ಹೆಚ್ಚಿನ ಅಪಾಯದ ನ್ಯೂರೋಬ್ಲಾಸ್ಟೊಮಾದಿಂದ ಬಳಲುತ್ತಿರುವ 3 ವರ್ಷದ ಬಾಲಕಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಡೈನುಟುಕ್ಸಿಮಾಬ್ ಬೀಟಾ ಎಂಬ ಜೀವ ಉಳಿಸುವ ಇಮ್ಯುನೊಥೆರಪಿಯನ್ನು ನೀಡಲಾಗಿದೆ. ಈ ಇಮ್ಯುನೊಥೆರಪಿ ಪ್ರಸ್ತುತ ಈ ಆಕ್ರಮಣಕಾರಿ ಕ್ಯಾನ್ಸರ್ ಅನ್ನು ಗುಣಪಡಿಸುವ ಏಕೈಕ ಚಿಕಿತ್ಸೆಯಾಗಿದೆ. ಹೆಚ್ಚಿನ ಅಪಾಯದ ನ್ಯೂರೋಬ್ಲಾಸ್ಟೊಮಾ ಬಾಲ್ಯದಲ್ಲಿ ಬರುವ ಅಪರೂಪದ ಮತ್ತು ಸಂಕೀರ್ಣವಾದ ಕ್ಯಾನ್ಸರ್ ಆಗಿದ್ದು, ಇದಕ್ಕೆ ಸಾದಾರಣವಾಗಿ ನೀಡುವ ಕಿಮೊಥೆರಪಿ, ಶಸ್ತ್ರಚಿಕಿತ್ಸೆ, ವಿಕಿರಣ ಚಿಕಿತ್ಸೆಯ ಜೊತೆಗೆ ಮೂಳೆ ಮಜ್ಜೆಯ ಕಸಿ, ಮತ್ತು […]

ಮತ್ಸ್ಯಗಂಧ ಎಕ್ಸ್ಪ್ರೆಸ್’ನಲ್ಲಿ ಕಳಪೆ ಎಲ್‌ಎಚ್‌ಬಿ ಕೋಚ್‌ಗಳ ಅಳವಡಿಕೆ; ಕೂಡಲೇ ಸರಿಪಡಿಸುವಂತೆ ಸಚಿವರಿಗೆ ಕೋಟ ಶ್ರೀನಿವಾಸ್ ಪೂಜಾರಿ ಮನವಿ.

ಉಡುಪಿ: ಮುಂಬಯಿ ಮತ್ತು ಮಂಗಳೂರು ನಡುವೆ ಕಳೆದ ಮೂರು ದಶಕಗಳಿಂದ ಸಂಚರಿ ಸುತ್ತಿರುವ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿಗೆ ಕಳೆದ ತಿಂಗಳು ಅಳವಡಿಸಿದ ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ಗಳು ಕಳಪೆಯಾಗಿದ್ದು, ಅವುಗಳಲ್ಲಿರುವ ಲೋಪಗಳ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣರನ್ನು ಭೇಟಿ ಮಾಡಿದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೋಚ್‌ಗಳಲ್ಲಿರುವ ಲೋಪಗಳನ್ನು ಕೂಡಲೇ ಸರಿಪಡಿಸುವಂತೆ ಮನವಿ ಅರ್ಪಿಸಿ ಒತ್ತಾಯಿಸಿದರು. ಮತ್ಸ್ಯಗಂಧ ರೈಲಿಗೆ 2024ರಲ್ಲಿ ತಯಾರಾದ ಹೊಸ ಎಲ್‌ಎಚ್‌ಬಿ ಕೋಚ್‌ಗಳ […]

ಬಜರಂಗದಳ ಮುಖಂಡ ವಿಜೇಶ್ ಕುಮಾರ್ ಹೃದಯಾಘಾತದಿಂದ ನಿಧನ

ಮೂಡುಬಿದಿರೆ : ಮೂಡುಬಿದಿರೆ ನಗರ ಬಜರಂಗದಳದ ಸಂಯೋಜಕ ವಿಜೇಶ್ ಕುಮಾರ್ (30 ವ) ರವರು ಮಾ.11ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಮಂಗಳವಾರದಂದು ಕೆಲಸ ಮಾಡುತ್ತಿದ್ದ ವೇಳೆ ವಿಜೇಶ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಅವರು ಕೊನೆಯುಸಿರೆಳೆದರು.ಇಂದು 10.30ಕ್ಕೆ ವಿದ್ಯಾಗಿರಿಯಲ್ಲಿರುವ ಸ್ವಗೃಹದಲ್ಲಿ ಮೃತರ ಅಂತ್ಯಕ್ರಿಯೆ ನಡೆದಿದೆ.

ಕೋಟ: ಶಿರಿಯಾರ ಕಲ್ಮರ್ಗಿ ರಾಮಮಂದಿರದಿಂದ ಕದ್ದ ಮೂರ್ತಿಗಳು ಹೊಳೆ ಬದಿಯಲ್ಲಿ ಪತ್ತೆ

ಕೋಟ: ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಕಲ್ಮರ್ಗಿಯ ರಾಮಾಂಜನೇಯ ಸೇವಾ ಟ್ರಸ್ಟ್‌ನ ಶ್ರೀರಾಮ ಮಂದಿರ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ (ಮಾ.11) ಕಳವಾದ ಮೂರ್ತಿಗಳು ಬುಧವಾರ ಬೆಳಗ್ಗೆ ಹೊಳೆ ಬದಿಯಲ್ಲಿ ಪತ್ತೆಯಾಗಿವೆ. ಕಳೆದ ರಾತ್ರಿ 9:30ಕ್ಕೆ ರತ್ನಾಕರ ಎಂಬವರು ದೇವಸ್ಥಾನದ ಪೂಜೆ ಮುಗಿಸಿ ಬೀಗ ಹಾಕಿ ಮನೆಗೆ ತೆರಳಿದ್ದು, ಇಂದು ಬೆಳಗ್ಗೆ ನಿತ್ಯದಂತೆ ಬೆಳಗ್ಗೆ 6:00ಗಂಟೆಗೆ ಪೂಜೆಗೆಂದು ಬಂದು ನೋಡುವಾಗ ರಾಮ ಮಂದಿರದ ಪ್ರಧಾನ ಬಾಗಿಲು ಹಾಗೂ ಗರ್ಭಗುಡಿಯ ಬಾಗಿಲನ್ನು ಯಾರೋ ಕಳ್ಳರು ಬಲಾತ್ಕಾರವಾಗಿ ಒಡೆದು ಗರ್ಭಗುಡಿ ಪ್ರವೇಶಿಸಿ […]

ಉಡುಪಿ:ರೇಣುಕಾಚಾರ್ಯರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ರೇಣುಕಾಚಾರ್ಯರ ಜೀವನದ ಮೌಲ್ಯಗಳನ್ನು ಅರಿತುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸುತ್ತಮತ್ತಲಿನ ಸಮಾಜವನ್ನು ಸಮೃದ್ದಿಯತ್ತ ಅಥವಾ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಇಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಕನ್ನಡ ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇವರ ಸಂಯುಕ್ತ ಆಶ್ರಯಲ್ಲಿ […]