ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಹೋಳಿ ಸಂಭ್ರಮ: ಪರಸ್ಪರ ಬಣ್ಣ ಎರಚಿಕೊಂಡು ಕುಣಿದು ಕುಪ್ಪಳಿಸಿದ ಯುವಕ ಯುವತಿಯರು

ಉಡುಪಿ: ದೇಶಾದ್ಯಂತ ಇಂದು ಹೋಳಿ ಹಬ್ಬದ ಆಚರಣೆ ನಡೆದಿದೆ. ಉಡುಪಿ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಹಾಗೂ ಮಣಿಪಾಲ ವಿವಿಯ ವಿದ್ಯಾರ್ಥಿಗಳು ಎಂಐಟಿ ಕಾಲೇಜಿನ ಮೈದಾನದಲ್ಲಿ ಹೋಳಿ ಹಬ್ಬ ಆಚರಿಸಿದರು. ಇವತ್ತು ಕಾಲೇಜಿಗೆ ರಜೆ ನೀಡಲಾಗಿದ್ದು, ಸಾವಿರಾರು ಮಂದಿ ಹೋಳಿ ಸೆಲೆಬ್ರೇಷನ್‍ನಲ್ಲಿ ಪಾಲ್ಗೊಂಡರು. ಪರಸ್ಪರ ಒಬ್ಬರಿಗೊಬ್ಬರು ಬಣ್ಣ ಎರಚುತ್ತಾ ಯುವಕ ಯುವತಿಯರು ಸಂಭ್ರಮಿಸಿದರು. ಡಿಜೆ ಹಾಡಿಗೆ ವಿದ್ಯಾರ್ಥಿಗಳು ಸಖತ್ ಸ್ಟೆಪ್ ಹಾಕಿದ್ರು. ಬಣ್ಣದ ನೀರನ್ನು ಮೈಗೆ ಸುರಿದುಕೊಂಡು ಕುಣಿದು ಕುಪ್ಪಳಿಸಿದರು.

ಸರಕಾರಿ ಯೋಜನೆಗಳ ಸಮರ್ಪಕ‌ ಅನುಷ್ಠಾನದಲ್ಲಿ‌ ಆಶಾ ಕಾರ್ಯಕರ್ತೆಯರ ಶ್ರಮ ಅಪಾರ: ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ

ಉಡುಪಿ: ವಯಸ್ಸಾಗಿದೆ ಎಂಬ ಕಾರಣಕ್ಕೆೆ ವೃದ್ಧರನ್ನು ಮೂಲೆಗುಂಪು ಮಾಡಬಾರದು. ಅವರಿಗೂ ಸರಿಯಾದ ಸಮಯವನ್ನು ಮೀಸಲಿಟ್ಟು ಆರೈಕೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಬಹಳಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಉಡುಪಿ ಶಾಖೆಯ ಆಶ್ರಯದಲ್ಲಿ ಜಿಲ್ಲೆೆಯ ಆಶಾ ಕಾರ್ಯಕರ್ತೆಯರಿಗೆ ನಗರದ ಪುರಭವನದಲ್ಲಿ ಶುಕ್ರವಾರ ಆಯೋಜಿಸಿದ “ವೃದ್ಧರ ಸಮಗ್ರ ಆರೈಕೆ” ವಿಷಯದ ಕುರಿತ ತರಬೇತಿ ಕಾರ್ಯಕ್ರಮವನ್ನು […]

ಬೆಂಗಳೂರು:ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು: ಮುಂದಿನ ವಾರ ಪೂರ್ವೋತ್ತರ ಮಾರುತಗಳ ಹಿನ್ನೆಲೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಗುರುವಾರ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಯ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಇರಲಿದೆ. ಒಳನಾಡಿನ ಒಂದೆರಡು ಕಡೆ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾ.12 ರಂದು […]

ಎನ್.ಸಿ.ಸಿ ಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರ ನೇಮಕ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಎನ್.ಸಿ.ಸಿ ನಿರ್ದೇಶನಾಲಯ (ಕರ್ನಾಟಕ ಮತ್ತು ಗೋವಾ) ಇವರು ಎನ್.ಸಿ.ಸಿ ಬೆಟಾಲಿಯನ್‌ಗಳಿಗೆ ಹೆಚ್ಚುವರಿ ತರಬೇತಿ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲು ಉದ್ದೇಶಿಸಿದ್ದು, ಆಸಕ್ತ 2022 ರ ಅಕ್ಟೋಬರ್ ನಂತರ ನಿವೃತ್ತಿ ಹೊಂದಿದ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ [email protected] ಅಥವಾ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ದೂರವಾಣಿ ಸಂಖ್ಯೆ: 0824-2450933 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ […]