ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಶನಿವಾರ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು‌ ಭೇಟಿ ನೀಡಿ ದೇವರ ದರ್ಶನ ಮಾಡಿದರು. ಬಳಿಕ ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಪಡೆದರು. ಬಳಿಕ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, […]

ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ

ಉಡುಪಿ: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದರು. ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಕೆಗೆ ರಾಜ್ಯ ಸರ್ಕಾರದ ಅಧಿಕಾರಿಗಳು ಎಸ್ಕಾರ್ಟ್ ಕೊಟ್ಟಿದ್ದಾರೆ. ಪ್ರೋಟೋಕಾಲ್ ವ್ಯವಸ್ಥೆ ಮಾಡಿ ಚೆಕ್ಕಿಂಗ್ ಇಲ್ಲದೆ ಬಿಟ್ಟಿದ್ದಾರೆ. ಅಲ್ಲದೆ, ಈ ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರು ಕೇಳಿ ಬರುತ್ತಿದೆ. ಮಂತ್ರಿಗಳ ಪಾತ್ರ ಇದೆ ಎನ್ನಲಾಗುತ್ತಿದೆ. […]

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಸಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬಹೃತ್ ವಿದ್ಯುತ್ ಸ್ಥಾವರ ಇದ್ದರೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನದ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಹೀಗಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಮಾರ್ಚ್ ತಿಂಗಳೊಳಗೆ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರೊಂದಿಗೆ ಮಾತುಕತೆ ನಡೆಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನದ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಬೇಡಿಕೆ ಸಲ್ಲಿಸಲಿದೆ ಎಂದು ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಶೆಟ್ಟಿ ತಿಳಿಸಿದರು. […]

ಉಡುಪಿ ಜಿಲ್ಲೆಯಲ್ಲೂ ಪ್ಲಾಸ್ಟಿಕ್ ಫ್ಲೆಕ್ಸ್, ನಿಷೇಧಕ್ಕೆ ಹೆಚ್ಚಿತು ಒತ್ತಡ, ಕಾರ್ಕಳ, ಕುಂದಾಪುರದಲ್ಲಿ ಪ್ಲಾಸ್ಟಿಕ್ ಫ್ಲೆಕ್ಸ್ ಗಳಿಗೆ ಲೆಕ್ಕವೇ ಇಲ್ಲ, ಪರಿಸರ ಸ್ನೇಹಿ ಬಟ್ಟೆ ಫ್ಲೆಕ್ಸ್ ಗಳಿಗೆ ಸಾರ್ವಜನಿಕರ ತಾಕೀತು

ಮಂಗಳೂರು ಮಹಾನಗರಪಾಲಿಕೆ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ನಿಷೇಧಗೊಳಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಬೆನ್ನಲ್ಲಿಯೇ ಉಡುಪಿ ಜಿಲ್ಲೆಯಲ್ಲೂ ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ನಿಷೇಧಿಸಬೇಕು ಎನ್ನುವ ಕೂಗು ಬಲವಾಗಿ ಎದ್ದಿದೆ. ಲೋಡುಗಟ್ಟಲೇ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ವಿಲೇವಾರಿಮಾಡದೇ ಅಲ್ಲಲ್ಲಿ ಎಸೆಯುವ ದೃಶ್ಯಗಳು ಕಾರ್ಕಳ, ಉಡುಪಿ, ಕುಂದಾಪುರ ಭಾಗಗಳಲ್ಲಿ ಅತೀಯಾಗಿ ಕಂಡುಬಂದಿರುವ ಕುರಿತು ಸಾರ್ವಜನಿಕ ದೂರುಗಳು ದಾಖಲಾಗಿದೆ. ಅಲ್ಲದೇ ಈ ಪ್ಲಾಸ್ಟಿಕ್  ಫ್ಲೆಕ್ಸ್ ಗಳೆ ಮಣ್ಣನ್ನು ಸೇರಿ, ನೀರನ್ನು ಸೇರಿ ಪರಿಸರವನ್ನು ಹಾನಿಗೊಳಿಸುದಷ್ಟೇ ಅಲ್ಲದೇ ಬರೋಬ್ಬರಿ 400 ವರ್ಷ […]

ಕಾರ್ಕಳ: ಮೀನು ತುಂಬಿದ ಲಾರಿ ಪಲ್ಟಿ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಮೀನು ತುಂಬಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪುಕ್ಕೇರಿ ಬೈಪಾಸ್‌ನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಮಲ್ಪೆಯಿಂದ ಮೀನು ಸಾಗಿಸುತ್ತಿದ್ದ ಲಾರಿ ಕಾರ್ಕಳ ಮತ್ತು ಮೂಡುಬಿದಿರೆಯ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.ಕಾರ್ಕಳ ಪಟ್ಟಣ ಪೊಲೀಸರು ಸ್ಥಳಕ್ಕೆ ಧಾವಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.