ಉಡುಪಿ:ಜಲ್ ಜೀವನ್ ಮಿಷನ್ ಕಾಮಗಾರಿಯ ಬಾಕಿ ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ:ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ: ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಯೊಂದು ಮನೆ ಮನೆಗೂ ನಲ್ಲಿ ನೀರು ಪೂರೈಸುವ ಜಲ್ ಜೀವನ ಮಿಷನ್ ಕಾಮಗಾರಿಯು ಈಗಾಗಲೇ ಶೇ. 92 ಪೂರ್ಣಗೊಂಡಿದೆ. ಬಾಕಿ ಉಳಿದ ಕಾಮಗರಿಗಳನ್ನು ಆದ್ಯತೆಯ ಮೇಲೆ ತ್ವರಿತವಾಗಿಪೂರ್ಣಗೊಳಿಸಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಜಾಗ್ರತಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಅಭಿಯಂತರರಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು […]
ಉಡುಪಿ:ಕ್ಷಣಿಕ ಸುಖಕ್ಕಾಗಿ ದುಶ್ಚಟಗಳಿಗೆ ಯುವಜನರು ಬಲಿಯಾಗಬಾರದು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆವ್ಯತಿರಿಕ್ತ ಪರಿಣಾಮ ಉಂಟಾಗುವುದರ ಜೊತೆಗೆ ಮಾರಣಾಂತಿಕ ಕಾಯಿಲೆಗೆ ಬಲಿಯಾಗುತ್ತಾರೆ. ಇವುಗಳಿಂದ ದೂರವಿದ್ದು, ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು. ಅವರು ಶುಕ್ರವಾರ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕರ್ನಾಟಕ […]
ಇಂದು ಉಡುಪಿ ಶ್ರೀ ಕೃಷ್ಣಮಠಕ್ಕೆ ಖ್ಯಾತ ನಟ ಪ್ರೇಮ್, ನಟಿ ಶರಣ್ಯ ಶೆಟ್ಟಿ ಭೇಟಿ.

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ (ಮಾ.15)ಇಂದು ನೆನಪಿರಲಿ ಖ್ಯಾತಿಯ ಖ್ಯಾತ ನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಅವರು ಭೇಟಿ ನೀಡಿದರು. ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.
CA ಫೌಂಡೇಶನ್ ಪರೀಕ್ಷೆ: ಮದರ್ ತೆರೇಸಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಸಾಧನೆ.

ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜಿನ ವಿದ್ಯಾರ್ಥಿಗಳು CA ಫೌಂಡೇಶನ್ -2025 ರ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯುವುದರ ಮೂಲಕ ಜಿಲ್ಲೆಯಲ್ಲೇ ಗುರುತರ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಸಾತ್ವಿಕ್ ವಿ ಶೆಟ್ಟಿ -256, ಸಾನ್ವಿ ಆರ್ ಶೆಟ್ಟಿ -221 ಶ್ರೇಯಸ್ ಯು -208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ವಿಶೇಷ ತರಬೇತಿ ನೀಡುತ್ತಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯು ಜಿಲ್ಲೆಯಲ್ಲೇ […]
ಮೂಡ್ಲಕಟ್ಟೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆಆರ್ ಎ ಎಮ್ ಕಾಲೇಜ್‌ನ ಹೆಚ್‌ಒಡಿ ಮತ್ತು ಪ್ರೊಫೆಸರ್ ಅಥರ್ವ ಆರ್ಗ್ಯಾನಿಕ್ಸ್‌ನ ಸಂಸ್ಥಾಪಕರು ಮತ್ತು ಸಿಇಒ ಆಗಿರುವ ಡಾ.ಅಪೇಕ್ಷ ರಾವ್ ಅವರು ಆಗಮಿಸಿದ್ದು “ಇತ್ತೀಚಿನ ದಿನಗಳಲ್ಲಿ ನಾವು ದೇಹದ ಮಾತು ಕೇಳುವ ಬದಲು ಅದನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದೇವೆ. ನಾವು ವಿಶ್ವದಲ್ಲಿ ಕೇವಲ ಒಂದು ಧೂಳಿನ ಕಣವಷ್ಟೇ. ಹಾಗಾಗಿ ಇರುವಷ್ಟು ದಿನ ಆರೋಗ್ಯ ಕಾಪಾಡಿಕೊಂಡು ನೆಮ್ಮದಿಯಿಂದ ಬದುಕುವುದು ಮುಖ್ಯ, ಅದಕ್ಕಾಗಿ ನಾವು […]