ಕ್ರಿಕೆಟ್ ಆಡುತ್ತಿದ್ದ ವೇಳೆ ಸಿಡಿಲು ಬಡಿದು ಯುವಕ ಮೃತ್ಯು.

ಕೇರಳದ ಕರಾವಳಿ ಜಿಲ್ಲೆ ಅಲಪ್ಪುಳದಲ್ಲಿ ಭಾನುವಾರ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಸಿಡಿಲು ಬಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಅಲಪ್ಪುಳದ ಕೊಡುಪ್ಪುನ್ನ ಮೂಲದ ಅಖಿಲ್ ಪಿ ಶ್ರೀನಿವಾಸನ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ್ದಾನೆ ಎಂದು ಅವರು ಹೇಳಿದ್ದಾರೆ. ಸಿಡಿಲು ಬಡಿದ ನಂತರ ಅಖಿಲ್ ಅವರನ್ನು ತಕ್ಷಣ ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಪೊಲೀಸರು […]