ಮಲ್ಪೆ ಬಂದರಿನಲ್ಲಿ ಮಹಿಳೆಗೆ ಹಲ್ಲೆ; ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ- ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆಗೆ ಹಲ್ಲೆ ನಡೆಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಈ ಕುರಿತು ಪ್ರತಿಕ್ರಿಯಿಸಿದ ಅವರು, ಹಲ್ಲೆ ನಡೆಸುವುದು ತಪ್ಪು. ಸಣ್ಣ ತಪ್ಪಿಗೆ ಆ ರೀತಿ ಹೊಡೆಯುವುದು ಸರಿಯಲ್ಲ. ಮಹಿಳೆಗೆ ಹೊಡೆಯುತ್ತಿದ್ದಾರೆ ಅಲ್ಲಿ ಸೇರಿರುವ ಜನರು ನಗುತ್ತಾ ನಿಂತಿದ್ದಾರೆ. ಯಾರು ತಡೆಯಲು ಮುಂದಾಗುತ್ತಿಲ್ಲ. ಈ ರೀತಿಯಾಗಿ ನಮ್ಮ ಮನಸ್ಥಿತಿ ಹೋದರೆ […]
ಕಾರ್ಕಳದ ಕರ್ವಾಲು ವಿಷ್ಣುಮೂರ್ತಿ ದೇವಾಲಯಕ್ಕೆ ಖ್ಯಾತ ಕ್ರಿಕೆಟಿಗ ರವಿ ಶಾಸ್ತ್ರಿ ಭೇಟಿ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣುಮೂರ್ತಿ ದೇವಾಲಯಕ್ಕೆ ಖ್ಯಾತ ಕ್ರಿಕೆಟಿಗ ರವಿಶಾಸ್ತ್ರಿ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮೂಲ ನಾಗದೇವರಿಗೆ ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ, ಕಲ್ಪೋಕ್ತ ಪೂಜೆ, ನಾಗತಂಬಿಲ ಸೇವೆ ಅರ್ಪಣೆ ಮಾಡಲಾಯಿತು. ಬಳಿಕ ವಿಷ್ಣುಮೂರ್ತಿ ದೇವರಿಗೆ ಮಹಾಪೂಜೆ ಸಲ್ಲಿಸಲಾಯಿತು. ತಮ್ಮ ಸಂಬಂಧಿಗಳಾದ ಸಂತೋಷ್ ಶಾಸ್ತ್ರಿ, ಕವಿತಾ ಶಾಸ್ತ್ರೀ ಹಾಗೂ ಕುಟುಂಬದವರೊಂದಿಗೆ ರವಿ ಶಾಸ್ತ್ರಿ ಆಗಮಿಸಿದ್ದರು. ಅವರು 2007 – 2025ರ ವರೆಗೆ ಒಟ್ಟು ಹದಿಮೂರು ಬಾರಿ […]
ಉಡುಪಿ:ಮರಳು, ಮಣ್ಣು ಸಾಗಾಟ ಮಾಡುವ ವಾಹನಗಳ ಚಾಲಕರು/ ಮಾಲೀಕರಿಗೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಮರಳು ಮತ್ತು ಮಣ್ಣು ಸಾಗಾಟ ಮಾಡುವ ವಾಹನಗಳು ಟರ್ಪಾಲ್‌ನಿಂದ ಮುಚ್ಚದೇಸಾಗಾಟ ಮಾಡುತ್ತಿರುವುದರಿಂದ ಇತರ ವಾಹನ ಚಾಲಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಸಾಕಷ್ಟು ದೂರುಗಳು ಬಂದಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಮರಳು ಮತ್ತು ಮಣ್ಣು ಸಾಗಾಟ ಮಾಡುವ ವಾಹನಗಳು ಕಡ್ಡಾಯವಾಗಿ ಟರ್ಪಾಲ್‌ನಿಂದ ಮುಚ್ಚಿ ಸಾಗಾಟ ಮಾಡುವಂತೆ ಸಂಬಂಧಪಟ್ಟ ಎಲ್ಲಾ ವಾಹನ ಚಾಲಕರು ಹಾಗೂ ಮಾಲೀಕರು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ದಂಡ ವಿಧಿಸಿ ಅಂತಹ ವಾಹನಗಳ ಪರವಾನಿಗೆಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮಹಿಳಾ ಸಲೀಕರಣ ಘಟಕವು ಕಾಲೇಜಿನ ಆಂತರಿಕ ದೂರು ಘಟಕದ ಸಹಯೋಗದೊಂದಿಗೆ 13 ಮಾರ್ಚ್ 2025 ರಂದು ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿತು. ಶ್ರೀಮತಿ ಚಂದ್ರಾಣಿ ಸರ್ಕಾರ್, ಮಾನವ ಸಂಪನ್ಮೂಲ ಮುಖ್ಯಸ್ಥರು, ಯುನಿಕೋರ್ಟ್, ಮಂಗಳೂರು ಇವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಮುಖ್ಯ ಅತಿಥಿಗಳು ಮಾತನಾಡಿ ಇಂಧನ ಕಾರ್ಪೋರೇಟ್ ಜಗತ್ತಿನಲ್ಲಿ ಗಂಡು ಹೆಣ್ಣಿಗಿಂತ ಅವರ ಜ್ಞಾನ ಮತ್ತು ಕೌಶಲ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ವ್ಯಕ್ತಿಗಳಲ್ಲಿ ಅಡಗಿರುವ ಪ್ರತಿಭೆಗಳು ಅವರ ಲಿಂಗ ಭೇದವನ್ನು […]
ಉಡುಪಿ:ಮೂರು ದಿನಗಳ ಕಮ್ಮಟ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ ಮೂರು ದಿನಗಳ ಕಮ್ಮಟವನ್ನು ಏಪ್ರಿಲ್ 21 ರಿಂದ 23 ರ ವರೆಗೆ ಹಾವೇರಿ ಜಿಲ್ಲೆಯ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ 20 ರಿಂದ 45 ವರ್ಷ ವಯೋಮಿತಿ ಒಳಗಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಲು ಏಪ್ರಿಲ್ […]