ಉಡುಪಿ:ಎಸ್.ಎಸ್.ಎಲ್.ಸಿ ಪರೀಕ್ಷೆ-1 : ನಿಷೇಧಾಜ್ಞೆ ಜಾರಿ- ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ

ಉಡುಪಿ: 2025 ನೇ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2003 […]
ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ ಸುನಿತಾ ವಿಲಿಯಮ್ಸ್.!

ಬಾಹ್ಯಾಕಾಶದಲ್ಲಿ ಸಿಲುಕಿಕೊಂಡ ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಮರಳಿದ್ದು, 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ವಾಪಸ್ಸಾಗಿದ್ದಾರೆ. ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ 9 ತಿಂಗಳಿಗೆ ವಿಸ್ತರಣೆಗೊಂಡಿತ್ತು. ಕೇವಲ ಒಂದು ವಾರದ ಮಟ್ಟಿಗೆ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಅಲ್ಲಿಗೆ […]
ಉಡುಪಿಯಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರಣೆ

ಉಡುಪಿ:ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು (ಜನ್ಮ ತಿಥಿಯಾನುಸರವಾಗಿ )ಛತ್ರಪತಿ ಶಿವಾಜಿ ವಿವಿದೊದ್ದೇಶ ಸಹಕಾರ ಸಂಘ ಉಡುಪಿಯಲ್ಲಿ ಸಂಘದ ಅಧ್ಯಕ್ಷರಾದ ದಿನೇಶ್ ಸಿ ನಾಯ್ಕ್ ದೀಪ ಪ್ರಜ್ವಲನೆ ಹಾಗೂ ಮಾಲಾರ್ಪಣೆ ಮಾಡಿ ಶಿವಾಜಿ ಮಹಾರಾಜರ ತತ್ವ ಸಿದ್ದಂತಗಳ ಬಗ್ಗೆ ಮಾತನಾಡಿದರು. ಸಂಘದ ಉಪಾಧ್ಯಕ್ಷರಾದ ಗಣೇಶ್ ನಾಯ್ಕ್, ಲಕ್ಷ್ಮಣ ನಾಯ್ಕ್, ಹರೀಶ್ ನಾಯ್ಕ್, ಕರುಣಾಕರ ಕಾಂಚನ್, ಶೇಖರ್ ಡಿ ಶೆಟ್ಟಿ, ಸತೀಶ್ ನಾಯ್ಕ್, ಹಾಗೂ ವಿವಿಧ ಸಹಕಾರಿಗಳು ಮತ್ತು ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶಿರೂರು […]
ಉಡುಪಿ:ಸರಕಾರಿ ಜಾಗ ಒತ್ತುವರಿ : ಶಿಕ್ಷಾರ್ಹ ಅಪರಾಧ

ಉಡುಪಿ: ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಅಂಗಡಿ ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಸ್ಥಳಗಳನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಜಿಲ್ಲಾ ಆಡಳಿತದ ವತಿಯಿಂದ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು. ಸರ್ಕಾರದ ಜಾಗವನ್ನು ಯಾವುದೇ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುವಂತಿಲ್ಲ. ಒಂದು ವೇಳೆ ಒತ್ತುವರಿ ಮಾಡಿದ್ದಲ್ಲಿ ಸದ್ರಿಯವರ ವಿರುದ್ಧ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 192(ಎ) ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011 […]
ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಕಟೀಲಿನಲ್ಲಿ ದ್ವಿದಿನ ಯಕ್ಷಗಾನ ತಾಳಮದ್ದಲೆ ಕಮ್ಮಟ

ಉಡುಪಿ : ಕಟೀಲು ಕ್ಷೇತ್ರದಲ್ಲಿ ಇವತ್ತು 6 ಯಕ್ಷಗಾನ ಮೇಳಗಳಿವೆ. ಆರು ಮೇಳಗಳಿಗೂ ಪ್ರತಿರಾತ್ರಿ ಯಕ್ಷಗಾನ ಕಾರ್ಯಕ್ರಮವಿದೆ. ಅಲ್ಲದೆ ಹಲವಾರು ವರ್ಷಗಳವರೆಗೆ ಯಕ್ಷಗಾನ ಕಾರ್ಯಕ್ರಮ ನಿಗದಿಯಾಗಿದೆ. ಇದು ದುರ್ಗಾ ಮಾತೆಯ ಲೀಲೆಯೂ ಹೌದು, ಯಕ್ಷಗಾನದ ಶಕ್ತಿಯೂ ಹೌದು. ಯಕ್ಷಗಾನದ ಬೆಳವಣಿಗೆಗೆ ಕಟೀಲು ಕ್ಷೇತ್ರದ ಕೊಡುಗೆ ಶ್ಲಾಘನೀಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮಂಗಳವಾರ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಥಮ ಧರ್ಜೆ […]