ಉಡುಪಿ:ಅಮಾನುಷ ಘಟನೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ – ರೆನೋಲ್ಡ್ ಪ್ರವೀಣ್ ಕುಮಾರ್

ಉಡುಪಿ: ಸಾತ್ವಿಕರ ನೆಲೆವೀಡಾದ ಕೃಷ್ಣನೂರಿನ ಮಲ್ಪೆ ಬಂದರಿನಲ್ಲಿ ಮೀನು ಕದ್ದಿದ್ದಾರೆ ಎಂಬ ಆರೋಪದಡಿ ದಲಿತ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಅಮಾನುಷ ಘಟನೆಯು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮಹಿಳೆ ಮೀನು ಕದ್ದಿದ್ದರೇ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸುವ ಹಕ್ಕು ಮೀನಿನ ಮಾಲೀಕರಿಗಿತ್ತು. ಆದರೆ ಕಾನೂನನ್ನು ಕೈಗೆತ್ತಿಕೊಂಡು ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ […]
ಉಡುಪಿಯ ಅತಿದೊಡ್ಡ ಹೆಸರಾಂತ ಮೆರೈನ್ ಎಕ್ಸ್ ಪೋರ್ಟ್ ಕಂಪೆನಿಯಲ್ಲಿ ಕೂಡಲೇ ಬೇಕಾಗಿದ್ದಾರೆ!

ಉಡುಪಿ:ಉಡುಪಿಯ ಅತಿದೊಡ್ಡ ಹೆಸರಾಂತ ಮೆರೈನ್ಎಕ್ಸ್ ಪೋರ್ಟ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: ◾ಮೆಕ್ಯಾನಿಕಲ್ ಇಂಜಿನೀಯರ್ (B.E/Diploma) ◾ಪ್ರೊಡಕ್ಷನ್ ಸೂಪರ್ ವೈಸರ್ (Degree/Diploma) ◾ಅಕೌಂಟ್ ಎಪ್ಲಿಕ್ಯೂಟಿವ್ – (B.Com) ◾QA/QC ಎಕ್ಸಿಕ್ಯೂಟಿವ್ ◾ಲ್ಯಾಬ್ ಅಸಿಸ್ಟೆಂಟ್ ◾ಮೆಷಿನ್ ಆಪರೇಟರ್ (ITI). ಅತ್ಯುತ್ತಮ ವೇತನದೊಂದಿಗೆ PF- ESI ಸೌಲಭ್ಯವಿದೆ. ಆಸಕ್ತರು ಕೂಡಲೇ ಸಂಪರ್ಕಿಸಿ7019891796, 7975861846
ಮಾ.21ರಿಂದ ಎ.4ರವರೆಗೆ SSLC ಪರೀಕ್ಷೆ; ಉಡುಪಿ ಜಿಲ್ಲೆಯಲ್ಲಿ ಒಟ್ಟು 14153 ವಿದ್ಯಾರ್ಥಿಗಳಿಗೆ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಗಳು ಮಾ.21ರಿಂದ ಎ.4ರವರೆಗೆ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 14,153 ಪರೀಕ್ಷಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಮಾಹಿತಿಗಳನ್ನು ಹಂಚಿಕೊಂಡರು. ಜಿಲ್ಲೆಯಲ್ಲಿ 115 ಸರಕಾರಿ, 68 ಅನುದಾನಿತ ಹಾಗೂ 89 ಅನುದಾನ ರಹಿತ ಸೇರಿದಂತೆ ಒಟ್ಟು 272 ಪ್ರೌಢಶಾಲೆಗಳಿದ್ದು, ಇವುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಜಿಲ್ಲೆಯಲ್ಲಿ ಒಟ್ಟು 51 […]
ಉಡುಪಿ: ಮಲ್ಪೆ ಬಂದರಿನಲ್ಲಿ ಮಹಿಳೆಗೆ ಹಲ್ಲೆ ಪ್ರಕರಣ; ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ.

ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆ ಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಹಿಂದೆ ಇನ್ನೂ ಯಾರಿದ್ದಾರೆ ಎಂದು ತನಿಖೆ […]
ಉಡುಪಿ:ಕನ್ನಡ ಪುಸ್ತಕ ಸೊಗಸು ಬಹುಮಾನ : ಅರ್ಜಿ ಆಹ್ವಾನ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ(ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಬಹುಮಾನಕ್ಕಾಗಿ ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದ್ದು, ಪುಸ್ತಕದಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ […]