ಮಹಿಳೆಯರು ನಾಡಿನ ಸಾಂಸ್ಕೃತಿಕ ರಾಯಭಾರಿಗಳು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಜನಪದ ಉತ್ಸವದಲ್ಲಿ ಡಾ. ಕೆ. ವಿದ್ಯಾಕುಮಾರಿ

ಉಡುಪಿ 21: ನಮ್ಮ ನಾಡು, ನುಡಿ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತುಕೊಂಡು ಜೀವನ ನಡೆಸಬೇಕು. ವೈವಿಧ್ಯಮಯ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ನಮ್ಮ ನಾಡಿನ ಹಿರಿಮೆಯನ್ನು ತಿಳಿದುಕೊಂಡು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಅದನ್ನು ಗೌರವಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಾನ್ಯ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಭಿಪ್ರಾಯ ಪಟ್ಟರು. ಇವರು ಉಡುಪಿ ಜಿಲ್ಲೆಯ ಲೀಡ್ ಕಾಲೇಜು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ […]

ಮಾ.23ರಂದು “ಗೋವಿಂದ ಪೈ ಸಂಶೋಧನ ಸಂಪುಟ” ಭಾಗ-2ರ ಅನಾವರಣ, ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ “ಗೋವಿಂದ ಪೈ ಸಂಶೋಧನ ಸಂಪುಟ” ಪರಿಷ್ಕೃತ ದ್ವಿತೀಯ ಮುದ್ರಣ ಭಾಗ-2ರ ಅನಾವರಣ ಕಾರ್ಯಕ್ರಮ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಮಾ.23ರಂದು ಬೆಳಿಗ್ಗೆ 10 ಗಂಟೆಗೆ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದರು. ಈ […]

ಬೆಳ್ತಂಗಡಿ: ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಬಿದ್ದು ಸವಾರ ಮೃತ್ಯು.

ಬೆಳ್ತಂಗಡಿ: ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ. ಮೃತ ಯುವಕ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್‌ (25) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಅವರು ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಜಾರಿಗೆ ಬೈಲು ಎಂಬಲ್ಲಿ […]

ಮಾ.23 ರಂದು ಪ್ರಸಾದ್ ಶೆಣೈ ಅವರ “ನೇರಳೆ ಐಸ್ ಕ್ರೀಂ” ಕೃತಿ ಬಿಡುಗಡೆ.

ಬೆಂಗಳೂರು: ಯುವ ಕತೆಗಾರ, ಟೋಟೋ ಪ್ರಶಸ್ತಿ ಪುರಸ್ಕೃತ ಬರಹಗಾರ, ಉಡುಪಿಜಿಲ್ಲೆಯ ಕಾರ್ಕಳದ ಪ್ರಸಾದ್ ಶೆಣೈ ಅವರ ಹೊಸ ಕಥಾ ಸಂಕಲನ “ನೇರಳೆ ಐಸ್ ಕ್ರೀಂ” ಮಾ.23 ರಂದು ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಬಿಡುಗಡೆಗೊಳ್ಳಲಿದೆ. ನಾಡಿನ ಪ್ರತಿಷ್ಠಿತ, ಜನಪ್ರಿಯ ಪ್ರಕಾಶನ ಸಂಸ್ಥೆಯಾಗಿರುವ ವೀರಲೋಕ ಬುಕ್ಸ್ ಈ ಕಥಾ ಸಂಕಲನವನ್ನು ಪ್ರಕಟಿಸುತ್ತಿದೆ. ಮಾ‌23 ರಂದು ವೀರಲೋಕ ಸಂಸ್ಥೆ ಸಾಹಿತ್ಯ ಯುಗಾದಿ ಕಾರ್ಯಕ್ರಮದಲ್ಲಿ ಹತ್ತು ಲೇಖಕರ ವಿಶಿಷ್ಟ ಕೃತಿಗಳನ್ನು ಬಿಡುಗಡೆ ಮಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಸಾದ್ ಶೆಣೈ  ಅವರ “ನೇರಳೆ […]

ತ್ರಿಶಾ ಕ್ಲಾಸಸ್ ಉಡುಪಿ ಸಿಎ ಫೌಂಡೇಶನ್ ಸಾಧಕರಿಗೆ ಸಮ್ಮಾನ;ಸಿಎ ಇಂಟರ್‌ಮೀಡಿಯಟ್ ಕಾಯಾಗಾರ

ಕಟಪಾಡಿ: ತ್ರಿಶಾ ಕ್ಲಾಸಸ್ ವತಿಯಿಂದ ಸಿಎ ಫೌಂಡೇಶನ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಮ್ಮಾನ ಹಾಗೂ ಸಿಎ ಇಂಟರ್‌ಮೀಡಿಯಟ್ ಮಾಹಿತಿ ಕಾರ್ಯಾಗಾರವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಮಾರ್ಚ್ 9 ರಂದು ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಹೆತ್ತವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು ಹಾಗೂ ವಿದ್ಯಾರ್ಥಿ ಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಅನಂತರ ಪ್ರಾಧ್ಯಾಪಕರಾದ ಆಲ್ಬನ್ ಆಂತೋನಿ ಅವರು ವಿದ್ಯಾರ್ಥಿಗಳಿಗೆ ಸಿಎ ಇಂಟರ್‌ಮೀಡಿಯಟ್ ಕೋರ್ಸ್‌ನ ಬಗ್ಗೆ ಹಾಗೂ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲರು […]