ಉಡುಪಿ: ಗುಜರಿ ಸಾಮಗ್ರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿ; ಆರು ಮಂದಿಗೆ ಗಾಯ

ಉಡುಪಿ: ಗುಜರಿ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಕಾರ್ಮಿಕರು ಸಹಿತ ಆರು ಮಂದಿ ಗಾಯಗೊಂಡ ಘಟನೆ ಭಾನುವಾರ ಉಡುಪಿ ಅಂಬಾಗಿಲು ಬಳಿಯ ರಾ.ಹೆ.66ರಲ್ಲಿ ಸಂಭವಿಸಿದೆ. ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ತತ್‌ಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಲಾರಿ ಚಾಲಕ, ನಾಲ್ಕು ಮಂದಿ ಕಾರ್ಮಿಕರು ಹಾಗೂ ಬೈಕ್‌ ಸವಾರನನ್ನು ತಮ್ಮ ವಾಹನದಲ್ಲಿಯೇ ಕರೆದೊಯ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ದುರ್ಘಟನೆ ಸಂಭವಿಸುವ ಮುಂಚೆ ಅದೇ ಸ್ಥಳದಲ್ಲಿ […]

ಉಡುಪಿ: ಫುಡ್ ಡೆಲಿವರಿ ಬಾಯ್ ಆತ್ಮಹತ್ಯೆ

ಬ್ರಹ್ಮಾವರ: ವೈಯಕ್ತಿಕ ಕಾರಣದಿಂದ ಮನನೊಂದ ಕಂದಾವರ ಗ್ರಾಮದ ರೇಷ್ಮಾ ಡಿಸೋಜ ಎಂಬವರ ಮಗ, ಸ್ವಿಗ್ಗಿ ಕಂಪನಿಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ರೋಹನ್ ಡಿಸೋಜ(17) ಎಂಬವರು ಚಾಂತಾರು ಗ್ರಾಮದ ಪ್ರಗತಿ ನಗರದ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರಕವಿ ಗೋವಿಂದ ಪೈಗಳ ಸಂಶೋಧನೆ, ಬರಹಗಳು ಅಧ್ಯಯನಶೀಲರಿಗೆ ಪ್ರೇರಣೆ

ಉಡುಪಿ: ರಾಷ್ಟ್ರಕವಿ ಗೋವಿಂದ ಪೈಗಳ ಸಂಶೋಧನೆ, ಬರಹಗಳು ಅಧ್ಯಯನಶೀಲರಿಗೆ ಪ್ರೇರಣೆ. ಅಧಿಕೃತ ಮತ್ತು ಮೂಲ ಆಕರಗಳನ್ನು ಇಟ್ಟುಕೊಂಡು ಬರೆದ ಅಪರೂಪದ ಸಾಹಿತಿ. ಸೃಜನಾತ್ಮಕ ಕ್ಷೇತ್ರಕ್ಕೂ ಗೋವಿಂದ ಪೈಗಳ ಕೊಡುಗೆ ದೊಡ್ಡದು. ಅವರು ಬರೆದ ದ್ರಾವಿಡ ಲಯದ ಹಾಡುಗಳು ಸಾಹಿತ್ಯದ ಮೈಲಿಗಲ್ಲು ಎಂದು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಹೇಳಿದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ […]

ಕೊಲ್ಲೂರು ದೇವಸ್ಥಾನದಲ್ಲಿ ಶ್ರೀಮನ್ಮಹಾರಥೋತ್ಸವ ಸಂಭ್ರಮ

ಉಡುಪಿ: ಇತಿಹಾಸ ಪ್ರಸಿದ್ಧ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಶನಿವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀದೇವಿಯ ವಿಜೃಂಭಣೆಯ ಉತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ದೇಗುಲದ ಪ್ರಧಾನ ತಂತ್ರಿ ನಿತ್ಯಾನಂದ ಅಡಿಗ ನೇತೃತ್ವದಲ್ಲಿ ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗಿತ್ತು. ಮುಹೂರ್ತ ಬಲಿ, ಕ್ಷಿಪ್ರ ಬಲಿ ಹಾಗೂ ರಥ ಬಲಿಯ ಬಳಿಕ 12.30 ರ ವೇಳೆಗೆ ಜೋಡಿ ಉತ್ಸವ ಮೂರ್ತಿಗಳನ್ನು ಗರ್ಭಗುಡಿಯಿಂದ ಹೊರತಂದು, ಸುತ್ತ ಪೌಳಿಯಲ್ಲಿ ಮೂರು ಸುತ್ತು ಉತ್ಸವ […]

ಉಡುಪಿ: ಕೊಲೆಗಡುಕರು, ಕಳ್ಳರನ್ನು ಹಿಡಿಯದ ಎಸ್ಪಿ, ಸುಮೊಟೋ ದಾಖಲಿಸಲಷ್ಟೇ ಯೋಗ್ಯ – ಶ್ರೀನಿಧಿ ಹೆಗ್ಡೆ

ಉಡುಪಿ: ತಾನು ದಕ್ಷ ಅಧಿಕಾರಿ ಎಂದು ಬಿಂಬಿಸುತ್ತಿರುವ ಜಿಲ್ಲಾ ಎಸ್ಪಿ ಡಾ.ಅರುಣ್ ಜಿಲ್ಲೆಯಲ್ಲಿ ನಡೆದ ಕೊಲೆ, ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿಫಲರಾದ ಅವರು ಸುಮೊಟೋ ಪ್ರಕರಣ ದಾಖಲಿಸಿ, ಪ್ರತಿಭಟಿಸುವವರ ಧ್ವನಿಯನ್ನು ಅಡಗಿಸುವ ಪ್ರಯತ್ನವನ್ನು ಮಾಡುತ್ತಿರುವುದು ನಾಚಿಕೆಗೇಡು ಎಂದು ಹೈಕೋರ್ಟ್ ವಕೀಲ, ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್ ಶ್ರೀನಿಧಿ ಹೆಗ್ಡೆ ಆರೋಪಿಸಿದ್ದಾರೆ. ಮಲ್ಪೆ ಠಾಣೆಯಲ್ಲಿ ರಾಜಿಯಾದ ಪ್ರಕರಣದಲ್ಲಿ ತನಿಖೆಗೆಂದು ಕರೆಸಿ, ಕುತಂತ್ರದಿಂದ ಮಹಿಳಾ ಮೀನುಗಾರರು ಹಾಗು ಪುರುಷ ಮೀನುಗಾರರನ್ನು ಬಂಧಿಸಲಾಗಿದೆ. ಅವರ ಪರವಾಗಿ ಧ್ವನಿಎತ್ತಿದ ಮಾಜಿ ಸಚಿವ […]