ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ […]
ಉಡುಪಿ ಏಂಜಲ್ಸ್ ಜುಂಬಾ ವತಿಯಿಂದ ಮಾ.30 ರಂದು ಬೆಲ್ಲಿ ಡಾನ್ಸ್ ಕಾರ್ಯಾಗಾರ

ಉಡುಪಿ ಯ ಸಿಟಿ ಬಸ್ ನಿಲ್ದಾಣ ಬಳಿಯ ರಾಜ್ ಟವರ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಏಂಜೆಲ್ಸ್ ಜುಂಬಾ ಫಿಟ್ನೆಸ್ನಲ್ಲಿ ,ಬೆಲ್ಲಿ ಡಾನ್ಸರ್ ಹಾಗೂ ಮಿಸ್ ಟೀನ್ ವಿನ್ನರ್ 2023 ಖ್ಯಾತಿಯ ಸಿಂಚನ ಪ್ರಕಾಶ್ ಅವರಿಂದ ಬೆಲ್ಲಿ ಡಾನ್ಸ್ ಕಾರ್ಯಗಾರ ಮಾ.30 ರ ಭಾನುವಾರದಂದು ಹಮ್ಮಿಕೊಳ್ಳಲಾಗಿದೆ .ಆಸಕ್ತರು ಹೆಚ್ಚಿನ ಮಾಹಿತಿಗಾಗಿ :9380135408,9380323108ಸಂಪರ್ಕಿಸಬಹುದು.
ಮಾ.27ರಂದು ವಿಶ್ವ ರಂಗಭೂಮಿ ದಿನಾಚರಣೆ, ವಿಶ್ವ ರಂಗಭೂಮಿ ಸನ್ಮಾನ ‘ಅಂಬಾತನಯ ಮುದ್ರಾಡಿ ಸಂಸ್ಕರಣಾ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ

ಉಡುಪಿ: ರಂಗಭೂಮಿ ಉಡುಪಿ ಆಶ್ರಯದಲ್ಲಿ ಎಂಜಿಎಂ ಕಾಲೇಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇದರ ಸಹಯೋಗದಲ್ಲಿ ‘ವಿಶ್ವ ರಂಗಭೂಮಿ ದಿನಾಚರಣೆ’, ವಿಶ್ವ ರಂಗಭೂಮಿ ಸನ್ಮಾನ’ ಹಾಗೂ ”ಅಂಬಾತನಯ ಮುದ್ರಾಡಿ ಸಂಸ್ಕರಣಾ ಪುಸ್ತಕ ಪ್ರಶಸ್ತಿ ಪ್ರದಾನ’ ಸಮಾರಂಭವು ಇದೇ ಮಾ. 27ರಂದು ಸಂಜೆ 5ಗಂಟೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಂಗಭೂಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅವರು, ಅಂದು ಸಂಜೆ […]
ಎಪ್ರಿಲ್ 9 ರಿಂದ 13 ರವರೆಗೆ ಪೆರ್ಣಂಕಿಲ ದೇವಸ್ಥಾನದಲ್ಲಿ “ಭಕ್ತಿ ಸಿದ್ಧಾಂತೋತ್ಸವ – ರಾಮೋತ್ಸವ”

ಉಡುಪಿ: ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಎಪ್ರಿಲ್ 9ರಿಂದ 13ರ ವರೆಗೆ ‘ಭಕ್ತಿ ಸಿದ್ಧಾಂತೋತ್ಸವ – ಶ್ರೀ ರಾಮೋತ್ಸವ’ ಶೀರ್ಷಿಕೆಯಡಿ ವೈಭವದ ಮಹೋತ್ಸವ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ವಿದ್ವಾನ್ ನಿಟ್ಟೆ ಪ್ರಸನ್ನಾಚಾರ್ಯ ಅವರು, ಶ್ರೀ ಪೇಜಾವರ ಮಠ, ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ, ಅಖಿಲ ಭಾರತ ಮಾಧ್ವ ಮಹಾಮಂಡಲ ಇವುಗಳ ಆಶ್ರಯದಲ್ಲಿ ಹಾಗೂ ಇತರೆ ಸಂಘಟನೆಗಳ ಸಹಯೋಗದಲ್ಲಿ ಈ ಸಮ್ಮೇಳನ ನಡೆಯಲಿದೆ. ಎ. 10ರಂದು […]
ಯಕ್ಷಶಿಕ್ಷಣ ಸನಿವಾಸ ಶಿಬಿರ ಉದ್ಘಾಟನೆ

ಉಡುಪಿ: ಉಡುಪಿಯ ಖ್ಯಾತ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರ ಯಕ್ಷಗಾನ ಜೀವನ ಸಾಧನೆ ಬಗ್ಗೆ ಸಮಗ್ರ ದಾಖಲೀಕರಣಕ್ಕೆ ರಾಜ್ಯ ಯಕ್ಷಗಾನ ಅಕಾಡೆಮಿ ಮುಂದಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಉಡುಪಿಯ ಯಕ್ಷಗಾನ ಕಲಾರಂಗದ ವತಿಯಿಂದ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಂಡ ಭೀಮ ಗೋಲ್ಡ್ ಬೆಂಗಳೂರು ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಒಂದು ವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ – 2025 ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಯಕ್ಷ ಗುರು […]