ಡಾ.ಬಿ.ಆರ್.ಅಂಬೇಡ್ಕರ್ ಮಹಾನ್ ಮಾನವತಾವಾದಿ- ಮಾಜಿ ಸ್ಪೀಕರ್ ರಮೇಶ್ ಕುಮಾರ್

ಉಡುಪಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರನ್ನು ಕೇವಲ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸುವುದು ತಪ್ಪು. ಅವರೊಬ್ಬ ಮಹಾನ್ ಮಾನವತಾವಾದಿ ಎಂಬುದಾಗಿ ನಾವೆಲ್ಲ ಸ್ವೀಕರಿಸಬೇಕು ಎಂದು ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ವಿವಿಧ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ನ ಸಹಯೋಗದೊಂದಿಗೆ ‘ಜೈ ಬಾಪು ಜೈ ಭೀಮ್ ಜೈ ಸಂವಿಧಾನ’ ಅಭಿಯಾನದ ಪ್ರಯುಕ್ತ ಉಡುಪಿ ಮಿಷನ್ ಕಂಪೌಂಡ್‌ನ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಲಾದ ‘ಗಾಂಧಿ ಭಾರತ’ ಸಮಾವೇಶದಲ್ಲಿ ಅವರು ದಿಕ್ಸೂಚಿ […]
ಕುಂದಾಪುರ:ಕಾಡಲ್ಲಿ ಸಿಕ್ಕಿದ್ದ ಚಿನ್ನಾಭರಣ ಸ್ವಂತಕ್ಕೆ ಬಳಕೆ ಪ್ರಕರಣ: ಸನ್ನಡತೆಗಾಗಿ ಆರೋಪಿಗೆ ಶಿಕ್ಷೆಯಿಂದ ವಿನಾಯಿತಿ ನೀಡಿದ ಕೋರ್ಟ್

ಕುಂದಾಪುರ: ಸರಕಾರಿ ಹಾಡಿಯಲ್ಲಿ ಮಣ್ಣಿನ ಮಡಿಕೆಯೊಂದರಲ್ಲಿ ಸಿಕ್ಕ ಹಳೆಯ ಕಾಲದ ಚಿನ್ನಾಭರಣಗಳನ್ನು ತನ್ನ ಸ್ವಂತಕ್ಕೆ ಬಳಸಿದ ಸಾಧು ಪೂಜಾರ್ತಿ(45) ಎಂಬವರ ವಿರುದ್ಧದ ಆರೋಪ ಸಾಬೀತಾಗಿದ್ದು, ಆಕೆಯನ್ನು ದೋಷಿ ಎಂಬುದಾಗಿ ಕುಂದಾಪುರದ 2ನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ. ಆದರೆ ಕಳೆದ 13 ವರ್ಷಗಳಿಂದ ಈ ಪ್ರಕರಣದಲ್ಲಿ ಆರೋಪಿತೆ ತೋರಿದ ಸನ್ನಡತೆ ಆಧಾರದಲ್ಲಿ ಅವರಿಗೆ ನ್ಯಾಯಾಧೀಶರು ಕಾರಾಗೃಹ ವಾಸದ ಶಿಕ್ಷೆಯಿಂದ ವಿನಾಯಿತಿ ನೀಡಿದ್ದಾರೆ. ಅಮಾಸೆಬೈಲು ಠಾಣಾ ವ್ಯಾಪ್ತಿಯ ಮಚ್ಚಟ್ಟು ಎಂಬಲ್ಲಿನ ಸರಕಾರಿ ಹಾಡಿಯಲ್ಲಿ ದರಲೆ ಗುಡಿಸುವಾಗ 2012ರ ಡಿ.15 […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 15ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

ಬಂಟಕಲ್: ಬಂಟಕಲ್ ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 15ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಶನಿವಾರ, 22 ಮಾರ್ಚ್ 2025 ರಂದು ಸಂಸ್ಥೆಯ ಆವರಣದಲ್ಲಿ ವಿಜೃಂಭಣೆಯಿಂದ ಜರಗಿತು. ಸಮಾರಂಭದಲ್ಲಿ ಮೂಡಬಿದ್ರಿಯ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶ್ರೀಗಳು ತಮ್ಮ ಆಶೀರ್ವಚನದಲ್ಲಿ ಶ್ರೀ ಸೋದೆ ಮಠದ ಜ್ಞಾನ ದಾಸೋಹದ ಕುರಿತು ಪ್ರಶಂಶಿಸಿದರು. ಪರಮಾತ್ಮನೇ ಪ್ರಪಂಚದ ಶ್ರೇಷ್ಠ ಇಂಜಿನಿಯರೆಂದು ಅಭಿಪ್ರಾಯ ಪಟ್ಟರು ಹಾಗು ಇಂಜಿನಿಯರಿಂಗ್ ರಂಗಅನಾದಿಕಾಲದಿಂದ ನಡೆದು […]
ಉಡುಪಿ:ಬನ್ನಂಜೆಯಲ್ಲಿ ಏ.01 ರಿಂದ 30 ರವರೆಗೆ ಬಾಲಂಗೋಚಿ ಬೇಸಿಗೆ ಶಿಬಿರ ಕಾರ್ಯಕ್ರಮ

ಬನ್ನಂಜೆ:ಮಾಸ್ಟರ್ ಡ್ರಾಮಾ ಆರ್ಟ್ಸ್ (ರಿ).ಉಡುಪಿ ಇದರ ಸಾರಥ್ಯದಲ್ಲಿ ಬಾಲಂಗೋಚಿ ಬೇಸಿಗೆ ಶಿಬಿರವು ಏ.01 ರಿಂದ30 ರವರೆಗೆ ನಡೆಯಲಿದೆ. ಮಕ್ಕಳಿಗೆ ಅನೇಕ ಚಟುವಟಿಕೆಗಳನ್ನು ಏರ್ಪಡಿಸಿದ್ದು ಸ್ವಿಮ್ಮಿಂಗ್, ಚಿತ್ರಕಲೆ, ಕ್ರಾಫ್ಟ್, ದೇಸಿ ಆಟಗಳು, ಸಂಗೀತ, ವೆಸ್ಟರ್ನ್ ಡ್ಯಾನ್, ಡ್ರಾಮಾ (ನಾಟಕ)ಗಳು ಇರಲಿವೆ. ಮಕ್ಕಳ ವಯೋಮಿತಿ 6 ರಿಂದ 16 ವರ್ಷ. ಹಾಗೂ ಮೇಲಿನ ಎಲ್ಲಾ ಚಟುವಟಿಕೆಗಳು ಬೆಳಿಗ್ಗೆ 9 ರಿಂದ ಸಂಜೆ 4.30 ರವರೆಗೆ ಇರಲಿದೆ. ಊಟ ಉಪಹಾರದ ವ್ಯವಸ್ಥೆ ಇದ್ದು, ಕೊನೆಯ ದಿನ ಮಕ್ಕಳಿಗೆ ವೇದಿಕೆಗೆ ಅವಕಾಶ ನೀಡಲಿದೆ. […]
ರಾಜ್ಯಮಟ್ಟದ ಕಡಲತೀರ ಚಾರಣ, ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರದ ಸಮಾರೋಪ.

ಉಡುಪಿ: ಜೀವಿತಾವಧಿಯಲ್ಲಿ ನಾವುಗಳು ಎಲ್ಲಿ ಹೋದರೂ ಕೂಡ ಅಲ್ಲಿನ ವಾತಾವರಣಕ್ಕೆ ಅನುಗುಣವಾಗಿ ಬದುಕಬೇಕಾಗುತ್ತದೆ. ನೂರಾರು ವರ್ಷಗಳ ಇತಿಹಾಸವಿರುವ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಇದಕ್ಕೆ ಬೇಕಾದ ತರಬೇತಿ ಜತೆಗೆ ಮಾಹಿತಿಯನ್ನು ನೀಡುತ್ತದೆ. ರಾಷ್ಟ್ರ ಪ್ರೇಮವಿರುವ ಯುವಜನರಿಗೆ ಅಲ್ಲಲ್ಲಿ ಶಿಬಿರಗಳನ್ನು ಆಯೋಜಿಸಿ ಆ ಮೂಲಕ ಒಳ್ಳೆಯ ವಿಚಾರಗಳನ್ನು ಹಾಗೂ ಜೀವನಾನುಭವಗಳನ್ನು ಕಲಿಸುತ್ತದೆ ಎಂದು ಭಾರತ್ ಸೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ ಹೇಳಿದರು. ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ಶನಿವಾರ […]