ಕಾರ್ಕಳ ತಾಲೂಕಿನಲ್ಲಿ‌ ಭಾರೀ ಗಾಳಿ ಸಹಿತ ಮಳೆ: ಗಾಳಿಯ ಹೊಡೆತಕ್ಕೆ ಹಾರಿ ಹೋದ ಅಂಗಡಿಗಳ ಮೇಲ್ಛಾಣಿ

ಉಡುಪಿ: ಉಡುಪಿ ಜಿಲ್ಲೆಯಾದ್ಯಂದ ಮಂಗಳವಾರ ಸಂಜೆ ಗಾಳಿ ಸಹಿತ ಮಳೆ ಸುರಿದಿದ್ದು, ಬಿಸಿಲಿನ ಧಗೆಯಿಂದ ಸುಡುತ್ತಿದ್ದ ಇಳೆಗೆ ತಂಪೆರೆದಿದೆ. ಕಾರ್ಕಳ ತಾಲೂಕಿನ ವಿವಿಧೆಡೆ ಭಾರೀ ಗಾಳಿ ಸಹಿತ ಧಾರಾಕಾರವಾಗಿ ಮಳೆ ಸುರಿದಿದೆ. ಜೋರಾಗಿ ಬೀಸಿದ ಗಾಳಿಯ ಹೊಡೆತಕ್ಕೆ ಅಂಗಡಿಗಳ ಸೀಟು, ಟರ್ಪಾಲ್ ಗಳು ಹಾರಿ ಹೋಗಿವೆ. ಗಾಳಿಯ ರಭಸಕ್ಕೆ ಹಲವು ಕಡೆ ಮರಗಳು ರಸ್ತೆಗೆ ಉರುಳಿ ಬಿದ್ದಿದು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಕಾರ್ಕಳ ಪೇಟೆ ಭಾಗ, ಕುಕ್ಕುಂದೂರು, ಮಿಯ್ಯಾರು, ರೆಂಜಾಲ, ಬಜಗೋಳಿ, ದಿಡಿಂಬಿರಿ, ಮಾಳ, ನೆಲ್ಲಿಕಾರು, […]

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ: ಪ್ರತಿಭಟನೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆ – ಪ್ರಚಾರ ಸ್ಟಿಕ್ಕರ್ ಬಿಡುಗಡೆ

ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಇವರ ನೇತೃತ್ವದಲ್ಲಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬವನ್ನು ಖಂಡಿಸಿ ಏಪ್ರಿಲ್ 1 ಮಂಗಳವಾರದಂದು ಮದ್ಯಾಹ್ನ ಕಲ್ಸಂಕದಿಂದ ಇಂದ್ರಾಳಿಯ ತನಕ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆ ನಡೆಯಲಿದ್ದು ಈ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆಯ ಪ್ರಚಾರದ ಅಂಗವಾಗಿ ಸ್ಟಿಕರ್ ಬಿಡುಗಡೆ ಕಾರ್ಯಕ್ರಮವು ಇಂದ್ರಾಳಿಯಲ್ಲಿ ಮಂಗಳವಾರ ಕಾರಿಗೆ ಸ್ಟಿಕರ್ ಅಂಟಿಸುವುದರ ಮೂಲಕ ಚಾಲನೆ ನೀಡಲಾಯಿತು. ಕಳೆದ ಹಲವು ವರ್ಷಗಳಿಂದ ನಡೆಯುತ್ತಿರುವ ಜನರ ಹೋರಾಟ, ಪ್ರತಿಭಟನೆಗೆ […]

ಬೆಳ್ಮಣ್, ನಂದಳಿಕೆ, ಗೊರಟ್ಟಿ ಶಾಲೆಗಳಲ್ಲಿ ಕಳ್ಳತನ; ಓರ್ವ ಆರೋಪಿಯ ಬಂಧನ

ಉಡುಪಿ: ಕಾರ್ಕಳ ತಾಲೂಕಿನ ಬೆಳ್ಮಣ್, ನಂದಳಿಕೆ ಮತ್ತು ಹಿರ್ಗಾನದ ಗೊರಟ್ಟಿ ಶಾಲೆಗಳಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬೈಂದೂರು ನಿವಾಸಿ ಅರ್ಷಿತ್‌ ಅವಿನಾಶ್ ದೋಡ್ರೆ (24) ಎಂದು ಗುರುತಿಸಲಾಗಿದೆ.ಫೆ.21ರ ರಾತ್ರಿ ಕಾರ್ಕಳ ತಾಲೂಕು ಬೆಮ್ಮಣ್ ಗ್ರಾಮದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಕಚೇರಿಯ ಬೀಗವನ್ನು ಒಡೆದು ಕಪಾಟು ಮತ್ತು ಮೇಜಿನ ಡ್ರಾವರನ್ನು ಒಡೆದು 1,50,000 ರೂ ಹಣ ಮತ್ತು 3 ಡಿವಿಆರ್‌ಗಳನ್ನು ಕಳವು ಮಾಡಲಾಗಿತ್ತು. […]

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ 1 ಲಕ್ಷ ಕೋಟಿ ರೂ. ಬಜೆಟ್ ಮಂಡನೆ; ಮಹಿಳೆಯರಿಗೆ ತಿಂಗಳಿಗೆ ರೂ.2,500 ನೀಡಲು ರೂ.5,100 ಕೋಟಿ ಮೀಸಲು.

ನವದೆಹಲಿ: 2025-26ನೇ ಹಣಕಾಸು ವರ್ಷದ ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಜೆಟ್ ಅನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮಂಗಳವಾರ ಮಂಡಿಸಿದ್ದಾರೆ. ಹಿಂದಿನ ವರ್ಷಕ್ಕಿಂತ ಶೇ 31.5ರಷ್ಟು ಹೆಚ್ಚಳವಾಗಿದೆ. ಸರ್ಕಾರವು ಬಂಡವಾಳ ವೆಚ್ಚವನ್ನು ರೂ.28,000 ಕೋಟಿಗಳಿಗೆ ದ್ವಿಗುಣಗೊಳಿಸುವುದರೊಂದಿಗೆ ಭ್ರಷ್ಟಾಚಾರ ಮತ್ತು ಅದಕ್ಷತೆಯ ಯುಗ ಮುಗಿದಿದೆ ಹಾಗೂ ಇದನ್ನು ‘ಐತಿಹಾಸಿಕ ಬಜೆಟ್’ ಎಂದು ರೇಖಾ ಗುಪ್ತಾ ಒತ್ತಿ ಹೇಳಿದ್ದಾರೆ. ಈ ಹೆಚ್ಚಿದ ವೆಚ್ಚವನ್ನು ರಸ್ತೆಗಳು, ಒಳಚರಂಡಿ ವ್ಯವಸ್ಥೆಗಳು ಮತ್ತು ನೀರು ಸರಬರಾಜು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಯತ್ತ ತಿರುಗಿಸಲಾಗುವುದು […]

ಡಿಕೆ ಶಿವಕುಮಾರ್ ಹೇಳಿಕೆ ಖಂಡನೀಯ: ರಾಜ್ಯ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ದಿನಕರ್ ಬಾಬು.

ಮಂಗಳೂರು: ಮುಸ್ಲಿಮರ ಓಲೈಕೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಈ ದೇಶಕ್ಕೆ ಕೊಟ್ಟಿರುವ ಸಂವಿಧಾನವನ್ನೇ ತಿದ್ದುಪಡಿ ಮಾಡಬೇಕೆಂದು ಉಪಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿರುವುದು ಅತ್ಯಂತ ಖಂಡನೀಯ ಹಾಗೂ ಆತಂಕಕಾರಿ ಬೆಳವಣಿಗೆ ಎಂದು ರಾಜ್ಯ ಎಸ್ ಸಿ ಮೋರ್ಚಾ ದ ಉಪಾಧ್ಯಕ್ಷ ದಿನಕರ್ ಬಾಬು ಅವರು ತೀವ್ರವಾಗಿ ಖಂಡಸಿದ್ದಾರೆ. ಮುಸ್ಲಿಮರ ವೋಟ್‌ ಬ್ಯಾಂಕ್‌ ಗೆ ಇಡೀ ಸಂವಿಧಾನದ ಅಡಿಪಾಯವನ್ನೇ ಅಲುಗಾಡಿಸಲು ಹೊರಟಿರುವುದು ಅತೀ ಗಂಭೀರವಾದ ಸಂಗತಿ. ಅಂಬೇಡ್ಕರ್‌ ನೀಡಿದ ಸಂವಿಧಾನವನ್ನೇ ಬುಡಮೇಲು ಮಾಡಿ ಮುಸ್ಲಿಮರ […]