ವಿವೇಕಾನಂದ ಯೋಗ ಕೇಂದ್ರ ಪುತ್ತೂರು ಇವರಿಂದ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ: ವಿವೇಕಾನಂದ ಯೋಗ ಕೇಂದ್ರ ಪುತ್ತೂರು ಶಾಖೆಯ ಯೋಗಾರ್ಥಿಗಳು ತಮ್ಮ ಸಮಾಜ ಸೇವಾ ಕಾರ್ಯಕ್ರಮದ ಅಂಗವಾಗಿ ಗುರುಗಳಾದ ಸತೀಶ್ ಕುಂದರ್ ಇವರ ನೇತೃತ್ವದಲ್ಲಿ ಪಡುಕೆರೆ ಬೀಚ್ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಯೋಗ ಗುರುಗಳಾದ ಸತೀಶ್ ಕುಂದರ್ ಅವರು ಮಾತನಾಡುತ್ತಾ ನಾವೆಲ್ಲ ಯೋಗ ಬಂಧುಗಳು ನಮ್ಮ ವೈಯಕ್ತಿಕ ಸ್ವಾಸ್ಥ್ಯ ಸಂರಕ್ಷಣೆಗಾಗಿ ಪ್ರತಿನಿತ್ಯ ಯೋಗ ಮಾಡುವುದರೊಂದಿಗೆ ನಾವು ಜೀವಿಸುವ ಸಮಾಜದ ಸ್ವಾಸ್ಥ್ಯಕ್ಕಾಗಿ ಇಂತಹ ಪರಿಸರ ಸ್ವಚ್ಛತಾ ಕಾರ್ಯಕ್ರಮಗಳನ್ನು ಕನಿಷ್ಠ ತಿಂಗಳಿಗೆ ಒಂದು ದಿನವಾದರೂ ಹಮ್ಮಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಅಭಿಪ್ರಾಯ […]
ಕೋಟ: ಎಪ್ರಿಲ್1ರಿಂದ 3ರ ವರೆಗೆ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ

ಕೋಟ: ಎಪ್ರಿಲ್1ರಿಂದ 3ರ ವರೆಗೆ ಸಾಸ್ತಾನದ ಕಾರ್ತಿಕೇಯ ಎಸ್ಟೇಟ್ ಇಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಎಂಬ ಐತಿಹಾಸಿಕ ಕಾರ್ಯಕ್ರಮ ನಡೆಯಲಿದೆ. ತಿರುಪತಿ ತಿಮ್ಮಪ್ಪನನ್ನು ಕಣ್ತುಂಬಿಕೊಳ್ಳುವುದೆ ದೊಡ್ಡ ಭಾಗ್ಯ ಎಂಬoತೆ ಅದರ ಪೂರ್ವತಯಾರಿಗಳು ವೈಭವಪೂರಿತವಾಗಿ ನಡೆಯುತ್ತಿದೆ. ಶ್ರೀನಿವಾಸ ಕಲ್ಯಾಣ ಎನ್ನುವ ಬಹುದೊಡ್ಡ ಕಾರ್ಯಕ್ರಮವನ್ನು ರೂಪಿಸುವುದೇ ದೊಡ್ಡ ಸವಾಲಿನ ಕಾರ್ಯವಾದರೂ ಭಗವಂತನ ಇಚ್ಛೆ ಎಂಬoತೆ ವಿದ್ವಾನ್ ಡಾ.ವಿಜಯ ಮಂಜರ್ ಮಾರ್ಗದರ್ಶನದಲ್ಲಿ ಉದ್ಯಮಿ ಎಂ.ಸಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಐರೋಡಿ ವಿಠಲ ಪೂಜಾರಿ ಸಾರಥ್ಯ ತಂಡ ಈ ಕಾರ್ಯಕ್ರಮಕ್ಕಾಗಿ […]
ಉಡುಪಿ: ಗರುಡ ಗ್ಯಾಂಗಿನ ಇಸಾಕ್ 9 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್‌ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ಬೆಂಗಳೂರಿನ ನೆಲಮಂಗಲದ ಪೋಲಿಸರಿಂದ ಮಣಿಪಾಲದಲ್ಲಿ ತಪ್ಪಿಸಿ ಕೊಳ್ಳುವ ವೇಳೆ ಸಾರ್ವಜನಿಕರ ಕಾರು, ಬೈಕಿಗೆ ಗುದ್ದಿ ಪರಾರಿಯಾಗಿದ್ದ ಇಸಾಕ್‌ನನ್ನು ಮಣಿಪಾಲ ಪೊಲೀಸರು ಮಾ.12ರಂದು ಹಾಸನದಲ್ಲಿ ಬಂಧಿಸಿದ್ದರು. ಅಲ್ಲಿಂದ ಆತನನ್ನು ಕರೆ ತರುವಾಗ ದಾರಿ ಮಧ್ಯೆ ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಗೆ ಹಲ್ಲೆ […]
ಮಲ್ಪೆ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ: ಮಂಜು ಕೊಳ ವಿರುದ್ಧ ಪ್ರಕರಣ ದಾಖಲು

ಮಲ್ಪೆ :ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆಮೀನುಗಾರರ ಸಂಘದ ನೇತೃತ್ವದಲ್ಲಿ ಮಾ.22ರಂದು ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಹಿಂದು ಯುವ ಸೇನೆ ಮಾಜಿ ಜಿಲ್ಲಾಧ್ಯಕ್ಷ ಮಂಜು ಕೊಳ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಸಭೆಯಲ್ಲಿ ಮಾತನಾಡಿದ್ದ ಮಂಜು ಕೊಳ, ಗಂಗೊಳ್ಳಿಯ ಒಂದು ಘಟನೆ ನೆನಪಿಟ್ಟುಕೊಳ್ಳಿ ಎಂದು ಇದೇ ಎಸ್ಪಿಗೆ ಹೇಳುತ್ತೇನೆ. ಒಬ್ಬ ಮೀನುಗಾರನನ್ನು ಒಳಗೆ ಹಾಕಿದರು. ಅದಕ್ಕೆ 10,000 ಜನ ಮೀನುಗಾರರು […]
ಉಡುಪಿ: ಮಲ್ಪೆ ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ: ಪ್ರಕರಣ ವಾಪಾಸ್ಸು ಪಡೆಯುವಂತೆ ಸಂತ್ರಸ್ತೆಯಿಂದ ಜಿಲ್ಲಾಧಿಕಾರಿಗೆ ಮನವಿ

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಘಟನೆಗೆ ಸಂಬಂಧಿಸಿ ಆರೋಪಿಗಳ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂತ್ರಸ್ತೆ ಲಕ್ಕವ್ವ ಬಾ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ. ಸಮುದಾಯದವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಹಲವು ವರ್ಷಗಳಿಂದ ವಿವಿಧ ಜಿಲ್ಲೆಗಳಿಂದ ಉದ್ಯೋಗ ಅರಸಿಕೊಂಡು ಉಡುಪಿಗೆ ಬಂದು ಮಲ್ಪೆ ಮೀನುಗಾರರ ಸಂಘದ ಸಹಕಾರದಿಂದ ಮಲ್ಪೆ ಬಂದರಿನಲ್ಲಿ ಕೆಲಸ ಮಾಡಿಕೊಂಡಿದ್ದೇವೆ. ಇತ್ತೀಚೆಗೆ ಆಕಸ್ಮಿಕವಾಗಿ ನಡೆದ ಘಟನೆಯನ್ನು ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೌಹಾರ್ದಯುತವಾಗಿ ಇತ್ಯರ್ಥ ಮಾಡಿಕೊಳ್ಳಲಾಗಿದೆ. ಆದರೂ […]