ಬಸನಗೌಡ ಪಾಟೀಲ ಯತ್ನಾಳ್ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಹೈಕಮಾಂಡ್ ಆದೇಶ ಹೊರಡಿಸಿದೆ.
ಮೇಕ್-ಎ-ವಿಶ್ ಫೌಂಡೇಶನ್- ಕಸ್ತೂರ್ಬಾ ಆಸ್ಪತ್ರೆಯಿಂದ ಮಕ್ಕಳ ಕ್ಯಾನ್ಸರ್ ರೋಗಿಗಳಿಗೆ ಆಶಯಗಳನ್ನು ಈಡೇರಿಸುವ ವಿಶೇಷ ಕಾರ್ಯಕ್ರಮ

ಮಣಿಪಾಲ: ಮೇಕ್-ಎ-ವಿಶ್ ಫೌಂಡೇಶನ್, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಆಂಕೊಲಾಜಿ ವಿಭಾಗದ ಸಹಯೋಗದೊಂದಿಗೆ, ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗುತ್ತಿರುವ ಮಕ್ಕಳ ಹೃತ್ಪೂರ್ವಕ ಆಶಯಗಳನ್ನು ಈಡೇರಿಸುವ ಮೂಲಕ ಅವರ ಜೀವನವನ್ನು ಬೆಳಗಿಸಿತು. ಈ ವಿಶೇಷ ಉಪಕ್ರಮವು ಯುವ ರೋಗಿಗಳು ಮತ್ತು ಅವರ ಕುಟುಂಬಗಳ ಮುಖಗಳಲ್ಲಿ ನಗುವನ್ನು ತರಿಸಿತು ಮತ್ತು ಅವರ ಸವಾಲಿನ ಪ್ರಯಾಣದ ನಡುವೆ ಸಂತೋಷದ ಕ್ಷಣವನ್ನು ಒದಗಿಸಿತು. ಮೇಕ್-ಎ-ವಿಶ್ ಫೌಂಡೇಶನ್ ಜಾಗತಿಕವಾಗಿ ಗುರುತಿಸಲ್ಪಟ್ಟ ಲಾಭರಹಿತ ಸಂಸ್ಥೆಯಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಮಕ್ಕಳಿಗೆ ಶುಭಾಶಯಗಳನ್ನು ನೀಡುವಲ್ಲಿ ಸಮರ್ಪಿತವಾಗಿದೆ. […]
ಕೋಲ್ಡ್, ಐಸ್ ಕ್ರೀಂ ಘಟಕಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಪನ್ನೀರ್ ನಲ್ಲೂ ಹಾನಿಕಾರಕ ಅಂಶ ಪತ್ತೆ!

ಬೆಂಗಳೂರು: ಆಹಾರ ಇಲಾಖೆ ಅಧಿಕಾರಿಗಳು ಐಸ್ ಕ್ರೀಂ ಮತ್ತು ತಂಪು ಪಾನೀಯ ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಬೇಸಿಗೆಯಲ್ಲಿ ಐಸ್ ಕ್ರೀಂ, ತಂಪು ಪಾನೀಯಗಳಿಗೆ ಜನರು ಮುಗಿಬೀಳುವುದು ಹೆಚ್ಚುಗಿದೆ. ಬೇಸಿಗೆ ಹಿನ್ನೆಲ್ ಅಲರ್ಟ್ ಆಗಿರುವ ಅಧಿಕಾರಿಗಳು ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಘಟಕಗಳ ಮೇಲೆ ಎಫ್ಎಸ್ಎಸ್ಎಐ ದಾಳಿ ಮಾಡಿದ್ದು, ಆಹಾರ ಇಲಾಖೆ ಅಧಿಕಾರಿಗಳು ಸ್ಯಾಂಪಲ್ ಕಲೆಕ್ಟ್ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ನಗರದ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಇತ್ತೀಚೆಗೆ ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಸಿ […]
ಉಡುಪಿ: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಹಾಯಕ ಸರಕಾರಿ ಅಭಿಯೋಜಕ

ಉಡುಪಿ: ಉಡುಪಿ ಕೋರ್ಟ್ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕರನ್ನು ಉಡುಪಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಳು ವಾಹನ ಬಿಡುಗಡೆ ಸಂಬಂಧ ಇವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಉಡುಪಿ ನ್ಯಾಯಾಲಯದಲ್ಲಿರುವ ಕಚೇರಿಯಲ್ಲಿ 2ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಪ್ರಭಾರ ಡಿವೈಎಸ್ಪಿ ಮಂಜುನಾಥ್, ಪೊಲೀಸ್ ನಿರೀಕ್ಷಕ ರಾಜೇಂದ್ರ ನಾಯಕ್ ಎಂ.ಎನ್., […]
ಶಿರ್ವ: ಬೈಕ್ ಗೆ ಕಾರು ಢಿಕ್ಕಿ; ಸವಾರ ಮೃತ್ಯು

ಉಡುಪಿ: ಅಪಘಾತದಿಂದ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ನಡೆದಿದೆ. ಶಿರ್ವ ಕೊಲ್ಲಬೆಟ್ಟು ಬಳಿಯ ನಿವಾಸಿ ರಮೇಶ್ ಮೂಲ್ಯ (51) ಎಂಬವರು ಅಪಘಾತದಲ್ಲಿ ಮೃತಪಟ್ಟಿದ್ದು, ಪುತ್ರನ ಸಾವಿನ ಸುದ್ದಿ ತಿಳಿದು ತಾಯಿ ಇಂದಿರಾ ಮೂಲ್ಯ (74) ಅವರು ಕೊನೆಯುಸಿರೆಳೆದಿದ್ದಾರೆ. ರಮೇಶ್ ಅವರು ಮಾರ್ಚ್ 23ರಂದು ಬಂಟಕಲ್ಲಿನಿಂದ ಬಿ.ಸಿ. ರೋಡ್ ಪಾಂಬೂರು ಮಾರ್ಗವಾಗಿ ಬೈಕ್ ನಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಕಾರು […]