ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವಿಕೆಯಿಂದ ಸದೃಢ ಆರೋಗ್ಯ ಹೊಂದಲು ಸಾಧ್ಯ : ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ: ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮನುಷ್ಯನ ದೇಹ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗುವುದರೊಂದಿಗೆ ಉತ್ತಮ ಆರೋಗ್ಯ ಹೊಂದಿ ಪ್ರತಿದಿನ ಕ್ರಿಯಾಶೀಲರಾಗಿ ಇರಲು ಸಾಧ್ಯ. ಪ್ರತಿಯೊಬ್ಬರೂ ಕ್ರೀಡೆಯಲ್ಲಿಸಕ್ರೀಯವಾಗಿ ಭಾಗವಹಿಸಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಗುರುವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರಸಂಘಟನೆಗಳ ಸಹಕಾರದೊಂದಿಗೆ ನಡೆದ […]
ಮಲ್ಪೆ: ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಪ್ರಕರಣ; ಮೂವರು ಆರೋಪಿಗಳ ಬಿಡುಗಡೆಗೆ ಹೈಕೋರ್ಟ್ ಆದೇಶ

ಉಡುಪಿ: ಮೀನು ಕದ್ದ ಆರೋಪದಲ್ಲಿ ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ಹೈಕೋರ್ಟ್ ಇಂದು ಆದೇಶ ನೀಡಿದೆ. ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಆರೋಪಿಗಳ ಪರ ವಕೀಲೆ ಊರ್ಮಿಳಾ ಪುಲ್ಲಟ್ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದ ಬಂಧಿತ ಆರೋಪಿಗಳಾದ ಲಕ್ಷ್ಮೀ, ಶಿಲ್ಪ ಮತ್ತು ಸುಂದರ್ ಎಂಬವರನ್ನು ಬಿಡುಗಡೆಗೊಳಿಸುವಂತೆ ಆದೇಶ ನೀಡಿದೆ. ಉಡುಪಿ ಜಿಲ್ಲಾ ಮತ್ತು […]
ಉಡುಪಿ:ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಸೆಲ್ಫ್ ಎಂಪ್ಲಾಯಿಡ್ ಟೈಲರಿಂಗ್, ಅಸಿಸ್ಟೆಂಟ್ ಬ್ಯೂಟಿ ಥೆರಪಿಸ್ಟ್, ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ ಹಾಗೂ ಫ್ಯಾಷನ್ ಡಿಸೈನರ್ ಕೋರ್ಸುಗಳ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗೆ ಆಫ್‌ಲೈನ್ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, […]
ಉಡುಪಿ:ಕೌಶಲ್ಯಾಭಿವೃದ್ಧಿಯಲ್ಲಿ ರಂಗಭೂಮಿ ಸಹಕಾರಿ: ಬಿ.ಪದ್ಮನಾಭ ಗೌಡ

ಉಡುಪಿ: ಯುವ ಪೀಳಿಗೆಯು ಕೇವಲ ಶೈಕ್ಷಣಿಕವಾಗಿ ಮಾತ್ರವಲ್ಲದೇ ರಂಗಭೂಮಿ ಸೇರಿದಂತೆ ಇನ್ನಿತರಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಕೌಶಲ್ಯಾಭಿವೃದ್ಧಿ ಹೊಂದಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಪದ್ಮನಾಭ ಗೌಡ ಹೇಳಿದರು. ಅವರು ಗುರುವಾರ ಕಾರ್ಕಳದ ಕೋಟಿ ಚೆನ್ನಯ್ಯ ಥೀಂ ಪಾರ್ಕ್ ಆವರಣದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ವತಿಯಿಂದ ಯಕ್ಷ ರಂಗ ಭೂಮಿ ದಿನಾಚರಣೆಯ ಪ್ರಯುಕ್ತ ಯಕ್ಷ ರಂಗಾಯಣದ ರೆಪರ್ಟರಿ […]
ಉಡುಪಿ:ಮಾ. 29 ರಂದು ನೇರ ಸಂದರ್ಶನ

ಉಡುಪಿ: ನಗರದ ಮೈತ್ರಿ ಕಾಂಪ್ಲೆಕ್ಸ್ನ ಮೊದಲನೇ ಮಹಡಿಯ ಮುತ್ತೂಟ್ ಫೈನಾನ್ಸ್ ಇಲ್ಲಿ ಮಾರ್ಚ್ 29 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 […]