ಉಡುಪಿಯ ಯಕ್ಷಗಾನ ಕಲಾರಂಗದಿಂದ ಮಕ್ಕಳಿಗೆ ವಿಶೇಷ ತರಬೇತಿ

ಉಡುಪಿ: ಉಡುಪಿಯ ಯಕ್ಷಗಾನ ಕಲಾರಂಗ ಸಂಸ್ಥೆಯವರು, ಮಕ್ಕಳಿಗೆ ವಿಶೇಷ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಸಂಸ್ಥೆಯವರು ಹೈಸ್ಕೂಲ್ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುತ್ತಿದ್ದಾರೆ. ಪ್ರತಿ ಶಾಲೆಯಿಂದ ಆಯ್ದ 60 ಮಕ್ಕಳ ತಂಡಕ್ಕೆ ಒಂದು ವಾರದ ವಿಶೇಷ ಯಕ್ಷಗಾನ ಶಿಬಿರ ಏರ್ಪಡಿಸಿದ್ದಾರೆ. ಯಕ್ಷಗಾನದ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಎಳವೆಯಲ್ಲೇ ವಿದ್ಯಾರ್ಥಿಗಳಿಗೆ ಈ ತರಬೇತಿ ನೀಡಲಾಗುತ್ತಿದೆ. ಪ್ರತಿದಿನ 16 ಗಂಟೆಗಳಿಗೂ ಅಧಿಕ ಕಾಲ ಯಕ್ಷಗಾನದ ಕುಣಿತ ವೇಷಭೂಷಣ ಮಾತುಗಾರಿಕೆ ಕಲಿಸುವುದರ ಜೊತೆಗೆ ಜೀವನ […]
ಉಡುಪಿಯ ಕರಾವಳಿ ಬೈಪಾಸ್ ನಲ್ಲಿ “ಜಂಬೂ ಸರ್ಕಸ್” ಆರಂಭ

ಉಡುಪಿ: ನಗರದ ಕರಾವಳಿ ಬೈಪಾಸ್ ಸಮೀಪದ ಶಾರದ ಇಂಟರ್‌ನ್ಯಾಷನಲ್ ಹೋಟೆಲ್ ಬಳಿ ಜಂಬೂ ಸರ್ಕಸ್ ಆರಂಭವಾಗಿದೆ. ಎಪ್ರಿಲ್ 28 ರವರೆಗೆ ಉಡುಪಿಯಲ್ಲಿ ಮನೋರಂಜನೆ ನೀಡಲು ಸಿದ್ದವಾಗಿದೆ. ಈ ಬಗ್ಗೆ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವ್ಯವಸ್ಥಾಪಕ ಸುರೇಶ್ ಬಾಬು ಅವರು, ದಿನಕ್ಕೆ 1 ಗಂಟೆ, 4 ಗಂಟೆ ಹಾಗೂ 7 ಗಂಟೆಗೆ ಹೀಗೆ 3 ಆಟಗಳು ಪ್ರದರ್ಶನಗೊಳ್ಳಲಿದೆ ಎಂದರು. ದೇಶ ವಿದೇಶಗಳ 100 ಜನ ಪುರುಷರು ಮತ್ತು ಮಹಿಳಾ ಕಲಾವಿದರ ತಂಡದಿಂದ ಅಮೇರಿಕನ್ ಸ್ಟೇಸ್ ವೀಲ್, ಸೀರೆಯಲ್ಲಿ ಸಾಹಸ, […]
ರಂಗಭೂಮಿ ಉಡುಪಿ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ

ಉಡುಪಿ: ಯಾವುದೇ ಕಲಾಪ್ರಕಾರಗಳು ಉಳಿದು ಬೆಳೆಯಬೇಕಾದರೆ ಯುವಜನತೆ ಅದರಲ್ಲಿ ತೊಡಗಿಸಿ ಕೊಳ್ಳುವುದು ಅತೀ ಮುಖ್ಯ. ಈ ನಿಟ್ಟಿನಲ್ಲಿ ರಂಗ ಭೂಮಿ ಉಡುಪಿ ನಾಟಕಗಳತ್ತ ವಿದ್ಯಾರ್ಥಿಗಳನ್ನು, ಯುವಕರನ್ನು ಸೆಳೆಯುವ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ ಎಂದು ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ. ಎಚ್. ಎಸ್ ಬಲ್ಲಾಳ್ ಹೇಳಿದರು. ಅವರು ಗುರುವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ […]
ಕುಂದಾಪುರ: ಕಾರು- ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ; ಇಬ್ಬರು ಮೃತ್ಯು

ಉಡುಪಿ: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ದ್ವಿಚಕ್ರ ವಾಹನ ಸವಾರರಾದ ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ. ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು, ಇದರ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ […]
ಉಡುಪಿ:ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ – ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್ 5 ರಂದು ಆಚರಿಸಲ್ಪಡುವ ಡಾ.ಬಾಬು ಜಗಜೀವನರಾಂ ಅವರ 118 ನೇ ಜಯಂತಿ ಹಾಗೂ ಏಪ್ರಿಲ್ 14 ರಂದು ಆಚರಿಸಲ್ಪಡುವ ಡಾ.ಬಿ.ಆರ್. ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಅರ್ಥಪೂರ್ಣವಾಗಿಹಾಗೂ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ […]