ಬೇವು ಬೆಲ್ಲದ ಮೂಲಕ ಒಳಿತಿನ ಸಂದೇಶ ಸಾರುವ ಸಂಭ್ರಮದ ಯುಗಾದಿ: ಯುಗಾದಿ ಹಬ್ಬದ ವಿಶೇಷ ಬರಹ

ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ. ಆದರೆ ನಾವು ಕಳೆದ ಸಮಯ ಮಾತ್ರ ಮರಳಿ ಬರುವುದಿಲ್ಲ. ನಮ್ಮಹಿಂದೂಗಳಲ್ಲಿ ಹಬ್ಬಗಳ ಆಚರಣೆ ಬಹಳ ಇದೆ. ಅವುಗಳಲ್ಲಿ ಯುಗಾದಿಯು ಬಹಳ ಮುಖ್ಯವಾದ ಹಬ್ಬವಾಗಿದೆ. ಯುಗಾದಿ ಎ೦ಬ ಪದ ಸಂಸ್ಕೃತದ ಯುಗ ಮತ್ತು ಆದಿ ಎಂಬ ಎರಡು ಪದಗಳಿಂದ ಕೂಡಿದೆ. ಯುಗಾದಿ ಎಂದರೆ ಯುಗದ ಆದಿ, ವರ್ಷದ ಆದಿ, ವರ್ಷದ ಆರಂಭ ಎಂಬುದಾಗಿ ಹೇಳಬಹುದಾಗಿದೆ. ಮಾಹೆಗಳಲ್ಲಿ ಚೈತ್ರ ಇದ್ದಂತೆ, ಋತುಗಳಲ್ಲಿ ವಸಂತ ಋತು ಇದ್ದಂತೆ, ಹಿಂದೂ ಧರ್ಮಕ್ಕನುಸಾರ ಹಬ್ಬಗಳಲ್ಲಿ ಯುಗಾದಿ ಹಬ್ಬವು […]

ಯುಗಾದಿಗೆ ಉಸಿರು, ಪ್ರಕೃತಿಯ ಹಸುರು: ಮತ್ತೆ ಬಂತು ಚಿಗುರಿನ ಹಬ್ಬ: ಯುಗಾದಿಯ ವಿಶೇಷ ಬರಹ

ಬರಹ-ಪ್ರಸಾದ ಶೆಣೈ ಮಾರ್ಚ್ ತಿಂಗಳು ಮುಗಿದು ಎಪ್ರಿಲ್ ತಿಂಗಳು ಆರಂಭವಾಗುತ್ತದೋ, ಆಗ ಮರದ ತುಂಬಾ ಚಿಪಿಪಿಲಿ ಹಾಡುಗಳನ್ನು ಹಾಡುತ್ತಲೇ ರೆಂಬೆ ಕೊಂಬೆಗಳಿಗೂ ಹಾರುವ ಹಕ್ಕಿಗಳು ಒಂದೇ ಸಮನೆ ಜಾಸ್ತಿಯಾಗುತ್ತವೆ. ಅವುಗಳೆಲ್ಲಾ “ನೋಡು ನೋಡು ಗೆಳತಿ ಚೈತ್ರ ಕಾಲ ಬಂದಿದೆ, ಮೋಡಿ ಮಾಡಿ ನನ್ನ ಮನಕೆ ಹರುಷ ತಂದಿದೆ”ಎಂದು ಯಕ್ಷಗಾನದಲ್ಲಿ ಭಾಗವತರು ಸುಶ್ರಾವ್ಯವಾಗಿ ಹಾಡುವ ಪದ್ಯದಂತೆ, ವಸಂತರಾಜನನ್ನು ಕೊಂಡಾಡುತ್ತ, ಬಾ ಬಾ ವಸಂತ ಬಾ ಬಾ ಎಂದು ಹಸಿರ ಬಾಗಿಲೊಳು ನಿಂತು ಕರೆದಂತೆ ಕಾಣಿಸುತ್ತವೆ. ಪುಟ್ಟ ಮರಿಹಕ್ಕಿಗೆ  ಒಂದೊಂದೇ […]