ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. […]
ನಾಯಕತ್ವ ಗುಣಗಳನ್ನು ಬೆಳಸಲು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಅವಕಾಶ – ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ: ಉತ್ತಮ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಯಕತ್ವವನ್ನು ಸಮಾಜಕ್ಕೆ ನೀಡಿದಾಗ ಜನರು ಕೂಡ ಅಂತಹ ನಾಯಕನ್ನು ಒಪ್ಪಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಸರ್ವರೊಂದಿಗೆ ಬೆರೆತು ನಾಯಕತ್ವ ಗುಣಗಳನ್ನು ಬೆಳಸಲು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಆಯೋಜಿಸಿದ್ದ ಸಹಕಾರಿ ಕ್ಷೇತ್ರದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ […]
ಉಡುಪಿ:ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಈದ್ ಉಲ್ ಫಿತ್ರ್ ಹಬ್ಬದ ಪ್ರಾರ್ಥನೆ

ಉಡುಪಿ:ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರುಗಳಾದ ಅಬ್ದುಲ್ ರಶೀದ್ ಸಖಾಫಿ ಮಸ್ಜಿದ್ ಅಧ್ಯಕ್ಷರಾದ ಡಾ.ಯು.ಎಂ ಫಾರೂಕ್ ಚಂದ್ರನಗರ, ಮಸ್ಜಿದ್ ಡೆವಲಪ್ಮೆಂಟ್ ಸಮಿತಿ ಅಧ್ಯಕ್ಷರಾದ ಶರ್ಫುದ್ದೀನ್ ಶೇಕ್, ಮಸ್ಜಿದ್ ಕಾರ್ಯದರ್ಶಿ ಅಶ್ರಫ್ ಮುಸ ಮಜೂರು ,ಅಶ್ರಫ್ ಕರಂದಾಡಿ, ರಜಬ್ ಕರಂದಾಡಿ ಉಪಾಧ್ಯಕ್ಷರಾದ ಹಸನಬ್ಬ ಮಜೂರು,ಕೋಶಾಧಿಕಾರಿ ಪಿ.ಎಂ ಇಬ್ರಾಹಿಂ ಆಡಳಿತ ಸಮಿತಿ ಸದಸ್ಯರಾದ ರಝಕ್ ಕೊಪ್ಪಲ್ತೋಟ, ರಝಕ್ ಕೊಪ್ಪ , ಹುಸೇನ್ ಅಚ್ಚಲ್, ರಝಕ್ […]
ಉಡುಪಿ:ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997ರ ಕಲಂ 25 ರನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ದೇವಸ್ಥಾನಗಳಾದ ಉಡುಪಿ ತಾಲೂಕಿನ ಆದಿಉಡುಪಿಯ ಶ್ರೀಮುಖ್ಯಪ್ರಾಣ ದೇವಸ್ಥಾನ, ತೆಂಕನಿಡಿಯೂರು ಗ್ರಾಮದ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಪುತ್ತೂರು ಗ್ರಾಮದ ಶ್ರೀ ಮಡಿ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಶ್ರೀ ಗುಹೇಶ್ವರ ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ […]
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಗಾಳಿ-ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಉಡುಪಿ: ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಅನೇಕ ಪ್ರದೇಶಗಳಲ್ಲಿ ಎಪ್ರಿಲ್ ತಿಂಗಳ ಮೊದಲ ಮೂರು ದಿನ ಗಂಟೆಗೆ 40 ರಿಂದ 50ಕಿ.ಮೀ. ವೇಗದ ಗಾಳಿಯೊಂದಿಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.